NEWSಉದ್ಯೋಗನಮ್ಮರಾಜ್ಯ

ರಾಜ್ಯ ಹೈಕೋರ್ಟ್‌ನ ಖಾಲಿ ಇರುವ ಚಾಲಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 25,550-81,100 ರೂ.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಹೈಕೋರ್ಟ್‌ನಲ್ಲಿ ಖಾಲಿ ಇರುವ ಚಾಲಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಏಪ್ರಿಲ್ 6 ಕೊನೆಯ ದಿನವಾಗಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ವಾಹನ ಚಾಲಕರ ಹುದ್ದೆಗಳಿಗೆ ನಿಗದಿತ ಅವಧಿಯಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಹೈಕೋರ್ಟ್ ತನ್ನ ನೋಟಿಫಿಕೇಷನ್‌ನಲ್ಲಿ ಸ್ಪಷ್ಟಪಡಿಸಿದೆ.

ಅರ್ಹತೆ:  ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯನ್ನು ಕಡ್ಡಾಯವಾಗಿ ಪಾಸು ಮಾಡಿರಬೇಕು.

ಭಾರೀ ಪ್ರಯಾಣಿಕ ಮೋಟಾರು ವಾಹನ ಅಥವಾ ಸರಕು ಸಾಗಣೆ ಮಾಡುವ ಭಾರೀ ವಾಹನವನ್ನು ಚಾಲನೆ ಮಾಡುವ ಚಾಲನಾ ಪರವಾನಿಗೆ ಹೊಂದಿರಬೇಕು.

ಚಾಲನೆಯಲ್ಲಿ ಕನಿಷ್ಟ 5 ವರ್ಷಗಳ ಅನುಭವ ಹೊಂದಿರಬೇಕು. ಕನ್ನಡ ಹಾಗೂ ಇಂಗ್ಲಿಷ್ ಭಾಷೆ ತಿಳಿದಿರಬೇಕು.

ಕನಿಷ್ಠ 18 ವರ್ಷ ಪೂರೈಸಿರಬೇಕು 35 ಮೀರಿರಬಾರದು. (ಮೀಸಲು ಅನುಸಾರ ವಿನಾಯಿತಿ ಇದೆ).

ವೇತನ ಶ್ರೇಣಿ: ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕ ಉಚ್ಚ ನ್ಯಾಯಾಲಯದ (ಅಧಿಕಾರಿ ಮತ್ತು ನೌಕರರ ವೇತನ ಪರಿಷ್ಕೃತ ವೇತನ ಶ್ರೇಣಿ ನಿಯಮ 2018ರ ಅನುಸಾರ 25,550-81,100 ರೂ. ಹಾಗೂ ಇತರೆ ಭತ್ಯೆಗಳು ದೊರೆಯಲಿವೆ.

ಆಯ್ಕೆಯಾದ ಅಭ್ಯರ್ಥಿಯು ಆರಂಭಿಕ ಎರಡು ವರ್ಷಗಳ ಕಾಲ ಪರಿವೀಕ್ಷಣೆಯಲ್ಲಿ ಇರಲಿದ್ದು ನಂತರ ಕಾಯಂಗೊಳ್ಳಲಿದ್ದಾರೆ.

ಹೆಚ್ಚಿನ ಮಾಹಿತಿಗೆ ಈ ಲಿಂಕ್‌ಅನ್ನು ಕ್ಲಿಕ್‌ ಮಾಡಬಹುದು: https://karnatakajudiciary.kar.nic.in/recruitmentNotifications/drvr2023/Notification_RPC.pdf

ಅರ್ಜಿ ಸಲ್ಲಿಸಲು ಬಯಸುವವರು ಈ ಲಿಂಕ್‌ ಮೇಲೆ ಕ್ಲಿಕ್‌ ಮಾಡಬಹುದು: https://karnatakajudiciary.kar.nic.in/driverRPC2023.php

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ