NEWSನಮ್ಮರಾಜ್ಯರಾಜಕೀಯ

ಕಾಂಗ್ರೆಸ್ 70ಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲ್ಲ : ಮಾಜಿ ಸಿಎಂ ಬಿಎಸ್‌ವೈ ಭವಿಷ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 70ಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲು ಆಗುವುದಿಲ್ಲ. ರಾಜ್ಯದಲ್ಲಿ ನೂರಕ್ಕೆ ನೂರರಷ್ಟು ಬಿಜೆಪಿ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರರಷ್ಟೆ ಸತ್ಯ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ನಾವು ಸರ್ಕಾರ ರಚಿಸುತ್ತೇವೆ. ರಾಜ್ಯದಲ್ಲಿ ನಾಲ್ಕು ತಂಡಗಳಾಗಿ ವಿಜಯ ಸಂಕಲ್ಪಯಾತ್ರೆ ಮಾಡಿದ್ದೇವೆ. ವಿಜಯಸಂಕಲ್ಪ ಯಾತ್ರೆಗೆ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ ಎಂದರು.

ಇನ್ನು ಯಾತ್ರೆಯಿಂದ ಕಾಂಗ್ರೆಸ್ ಭಯಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಹುದ್ದೆಗಾಗಿ ಹಗಲುಗನಸು ಕಾಣುತ್ತಿದ್ದಾರೆ. ಅದು ಕೇವಲ ತಿರುಕನ ಕನಸಾಗಲಿದೆ ಎಂದರು.

ಇನ್ನು 2-3 ದಿನಗಳಲ್ಲಿ ನಾನು ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತೇನೆ. 130 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಸಾಮಾಜಿಕ ನ್ಯಾಯದಡಿ ಮೀಸಲಾತಿ ನೀಡಲಾಗಿದೆ. ಮೀಸಲಾತಿ ವಿಚಾರದಲ್ಲಿ ಮುಸ್ಲೀಮರಿಗೆ ಅನ್ಯಾಯ ಮಾಡಿಲ್ಲ ಮೀಸಲಾತಿ ವಿಚಾರದಲ್ಲಿ ಯಾರಿಗೂ ಕೂಡ ಅನ್ಯಾಯ ಮಾಡಿಲ್ಲ ಎಂದರು.

ಶೀಘ್ರದಲ್ಲೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹೈಕಮಾಂಡ್ ಬಿಡುಗಡೆ ಮಾಡಲಿದೆ. 75 ವರ್ಷ ಮೇಲ್ಪಟ್ಟವರಿಗೆ ಟಿಕೆಟ್ ಮಿಸ್ ಆಗಲಿದೆ. ಹಿರಿಯರಿಗೆ ಟಿಕೆಟ್ ನೀಡೋದು ವರಿಷ್ಠರ ತೀರ್ಮಾನ. ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿರುತ್ತೇವೆ ಎಂದು ಬಿಎಸ್‌ವೈ ತಿಳಿಸಿದರು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...