ಬೆಂಗಳೂರು: ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ ಎಂದು ನಟ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆ ವಿಚಾರ ಕುರಿತು ಟ್ವೀಟ್ ಮಾಡಿ ಪ್ರತಿಕ್ರಿಯಿಸುವ ಮೂಲಕ ಬಿಜೆಪಿಗೆ ಟಾಂಗ್ ನೀಡಿದ್ದಾರೆ ನಟ ಪ್ರಕಾಶ್ ರಾಜ್.
ಸುದೀಪ್ ಬಿಜೆಪಿ ಸೇರುತ್ತಾರೆ ಅಥವಾ ಬಿಜೆಪಿ ಪರ ಪ್ರಚಾರ ಮಾಡುತ್ತಾರೆ, ಎಂಬ ಸುದ್ದಿ ಹರಿದಾಡುತ್ತಿದೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಕಾಶ್ ರಾಜ್, ‘ಕರ್ನಾಟಕದಲ್ಲಿ ಹತಾಶರಾದ, ಸೋತ ಬಿಜೆಪಿಯಿಂದ ಹರಡಿದ ಸುಳ್ಳು ಸುದ್ದಿ ಇದು ಎಂದು ನಾನು ಬಲವಾಗಿ ನಂಬುತ್ತೇನೆ ಎಂದು ಹೇಳಿದ್ದಾರೆ.
ಇನ್ನು ಕಿಚ್ಚ ಸುದೀಪ್ ಪ್ರಜ್ಞಾವಂತ. ಬಿಜೆಪಿ ಸೋಲುವ ಭಯದಲ್ಲಿ ಹರಡುತ್ತಿರುವ ಸುಳ್ಳು ಸುದ್ದಿ ಇದು. ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ ಎಂದು ಬಿಜೆಪಿಗೆ ಕುಟುಕಿದ್ದಾರೆ.
ಇಂದು ಮಧ್ಯಾಹ್ನ ಸಿಎಂ ಬಸವರಾಜ ಬೊಮ್ಮಾಯಿ ಅವರು ಸುದ್ದಿಗೋಷ್ಠಿ ನಡೆಸಲಿದ್ದು ನಟ ಸುದೀಪ್ ಅವರ ನಡೆ ಏನು ಎಂಬುದು ಗೊತ್ತಾಗಲಿದೆ.