CrimeNEWSದೇಶ-ವಿದೇಶನಮ್ಮರಾಜ್ಯ

ಇದ್ರೀಸ್ ಪಾಷಾ ಹತ್ಯೆ ಆರೋಪಿ ಪುನೀತ್ ಕೆರೆಹಳ್ಳಿ ರಾಜಸ್ಥಾನದಲ್ಲಿ ಬಂಧನ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಇದ್ರೀಸ್ ಪಾಷಾ ಹತ್ಯೆ ಪ್ರಕರಣದ ಪ್ರಮುಖ ಬೆಳವಣಿಗೆಯಲ್ಲಿ ರಾಮನಗರ ಪೊಲೀಸರು ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿ ಮತ್ತು ಆತನ ಸಹಚರರನ್ನು ರಾಜಸ್ಥಾನಲ್ಲಿ ಬಂಧಿಸಿದ್ದಾರೆ.

ಮಂಡ್ಯದ ವಾಹನ ಚಾಲಕ ಇದ್ರೀಸ್‌ ಪಾಷಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಕೆರೆಹಳ್ಳಿ, ಇಷ್ಟು ದಿನ ತಲೆ ಮರೆಸಿಕೊಂಡು ರಾಜಸ್ಥಾನದಲ್ಲಿ ಅಡಗಿಕೊಂಡಿದ್ದನ್ನು ಪತ್ತೆಹಚ್ಚಿ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಇವನೊಂದಿಗೆ ಇದ್ದ ನಾಲ್ವರು ಸಹಚರರನ್ನು ಹೆಡೆಮುರಿ ಸಹ ಕಟ್ಟಿದ್ದಾರೆ.

ಮಾರ್ಚ್ 31ರ ರಾತ್ರಿ ಜಿಲ್ಲೆಯ ಸಾತನೂರು ಬಳಿ ಪುನೀತ್ ಕೆರೆಹಳ್ಳಿ ಗ್ಯಾಂಗ್ ಜಾನುವಾರು ಸಾಗಿಸುತ್ತಿದ್ದ ವಾಹನವನ್ನು ಅಡ್ಡಗಟ್ಟಿ ಹಲ್ಲೆ ನಡೆಸಿತ್ತು. ಆ ಸಂದರ್ಭದಲ್ಲಿ ವಾಹನ ಚಾಲಕ ಇದ್ರೀಸ್ ಪಾಷಾನ ಹತ್ಯೆ ಮಾಡಿತ್ತು. ಈ ಸಂಬಂಧ ಪುನೀತ್ ಕೆರೆಹಳ್ಳಿ ಮೇಲೆ ಎಫ್‌ಐಆರ್ ದಾಖಲಾಗಿತ್ತು.

ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 341, 504, 506, 324, 302, 304 ಅಡಿ ಪ್ರಕರಣ ದಾಖಲಿಸಿದ್ದರು. ಆದರೆ ಅಂದಿನಿಂದ ತಲೆ ಮರೆಸಿಕೊಂಡಿದ್ದ ಹತ್ಯೆಕೋರ ಆರೋಪಿ ಕೆರೆಹಳ್ಳಿ ಸೋಮವಾರ ರಾತ್ರಿ ಫೇಸ್‌ಬುಕ್‌ ಲೈವ್‌ ಬಂದು ನಾನು ಕೊಲೆ ಮಾಡಿಲ್ಲ ಎಂದು ಹೇಳಿದ್ದ.

ಪ್ರಕರಣದ ಸಂಬಂಧ ಸುದ್ದಿಗೋಷ್ಠಿ ನಡೆಸಿದ್ದ ರಾಮನಗರ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಕಾರ್ತಿಕ್‌ ರೆಡ್ಡಿಯವರು, ಪ್ರಕರಣದ ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿ ತಲೆಮರೆಸಿಕೊಂಡಿದ್ದು, ಶೋಧಕ್ಕಾಗಿ ನಾಲ್ಕು ತಂಡಗಳನ್ನು ರಚಿಸಿದ್ದೇವೆ ಎಂದು ಹೇಳಿದ್ದರು.

ಘಟನೆ ವಿವರ: ಮಾರ್ಚ್ 27 ರಂದು ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ತೆಂಡೇಕೆರೆ ದನದ ಸಂತೆಯಲ್ಲಿ ಖರೀದಿಸಿದ ರಾಸುಗಳನ್ನು ಮಾರ್ಚ್ 31 ರ ರಾತ್ರಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸಂತೆಗಳಿಗೆ ಕೊಂಡೊಯ್ಯುತ್ತಿರುವಾಗ ಅವರನ್ನು ರಾಮನಗರ ಜಿಲ್ಲೆಯ ಸಾತನೂರು ಬಳಿ ಪುನೀತ್ ಕೆರೆಹಳ್ಳಿ ಗ್ಯಾಂಗ್ ತಡೆದಿದೆ.

ಈ ವೇಳೆ 2 ಲಕ್ಷ ರೂ. ಹಣ ಕೊಟ್ಟರೆ ಗಾಡಿ ಬಿಡುತ್ತೇನೆ, ಇಲ್ಲದಿದ್ದರೆ ಬಿಡುವುದಿಲ್ಲ ಎಂದು ಇದ್ರೀಸ್‌ ಪಾಷಾ ಸೇರಿ ಅವರ ಜತೆಗಿದ್ದ ಇರ್ಫಾನ್ ಮತ್ತು ಸೈಯ್ಯದ್ ಜಹೀರ್ ಎಂಬುವವರಿಗೆ ಬೆದರಿಕೆಯೊಡ್ಡಿದ್ದಾರೆ. ಆದರೆ ಇದ್ರೀಸ್‌ ಪಾಷಾ ರಾಸುಗಳನ್ನು ಖರೀದಿಸಿದ ರಶೀದಿಗಳನ್ನು ತೋರಿಸಿ ನಾವು ಕಾನೂನು ಬದ್ಧವಾಗಿ ಖರೀದಿಸಿದ ಗೋವುಗಳನ್ನು ಸಾಗಾಟ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಅಲ್ಲದೆ ನಿಮಗೆ ಏಕೆ ಹಣ ಕೊಡಬೇಕೆಂದು ವಾದಿಸಿದ್ದಾರೆ. ಈ ವೇಳೆ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದಿದ್ದು, ಪುನೀತ್ ಕೆರೆಹಳ್ಳಿ ಗ್ಯಾಂಗ್ ಮಾರಕಾಸ್ತ್ರಗಳಿಂದ ಇದ್ರೀಸ್‌ ಪಾಷಾ, ಇರ್ಫಾನ್ ಮತ್ತು ಸಯ್ಯದ್ ಜಹೀರ್ ಮೇಲೆ ತೀವ್ರ ಹಲ್ಲೆ ನಡೆಸಿದೆ.

ಈ ಗಲಾಟೆಯಲ್ಲಿ ಇರ್ಫಾನ್ ತಪ್ಪಿಸಿಕೊಂಡು ಓಡಿದರೆ, ಸಯ್ಯದ್ ಅಂಗಡಿಯ ಬಳಿ ಅವಿತುಕೊಂಡಾಗ ಸಿಕ್ಕಿಬಿದ್ದಿದ್ದಾರೆ. ಆದರೆ ಇದ್ರೀಸ್ ತಪ್ಪಿಸಿಕೊಳ್ಳಲು ಯತ್ನಿಸುವಾಗ ಅವರಿಗೆ ಚಿತ್ರಹಿಂಸೆ ನೀಡಲಾಗಿದೆ. ಎಲೆಕ್ಟ್ರಿಕ್ ಗನ್ ರೀತಿಯ ಸಾಧನದಿಂದ ಕರೆಂಟ್ ಶಾಕ್ ಕೊಟ್ಟಿದ್ದಾರೆ.

ಅದು ಮಿತಿ ಮೀರಿದ್ದರಿಂದ ಇದ್ರೀಸ್‌ ಪಾಷಾ ಜೀವ ಬಿಟ್ಟಿದ್ದಾರೆ. ಅವರಿಗೆ ನೀಡಿದ ಕಿರುಕುಳದ ಮಾರ್ಕ್‌ಗಳು ಇದ್ರೀಸ್‌ ದೇಹದ ಮೇಲಿರುವುದನ್ನು ಫೋಟೊಗಳು ದೃಢೀಕರಿಸುತ್ತವೆ ಎಂದು ಇದ್ರೀಸ್ ಪಾಷಾ ಕುಟುಂಬಸ್ಥರು ಆರೋಪಿಸಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ