NEWSದೇಶ-ವಿದೇಶರಾಜಕೀಯ

ಏ.13ರರೊಳಗೆ ಎಎಪಿಗೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡಿ: ಹೈಕೋರ್ಟ್‌ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಏಪ್ರಿಲ್ 13ರ ಒಳಗೆ ರಾಷ್ಟ್ರೀಯ ಪಕ್ಷದ ಮಾನ್ಯತೆಯನ್ನು ಆಮ್ ಆದ್ಮಿ ಪಕ್ಷಕ್ಕೆ ನೀಡಬೇಕೆಂದು ಚುನಾವಣಾ ಆಯೋಗಕ್ಕೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.

ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆಯುವಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಎಎಪಿ ಪಕ್ಷ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದ ಉಚ್ಚ ನ್ಯಾಯಾಲಯವು ಇಂದು ಪ್ರಕರಣವನ್ನು ಕೈಗೆತ್ತಿಕೊಂಡು ಈ ಏಪ್ರಿಲ್ 13ರ ಒಳಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ ನೀಡುವಂತೆ ಆದೇಶಿಸಿ ಅರ್ಜಿಯನ್ನು ವಿತ್ಯರ್ಥಪಡಿತು.

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಅಮೋಘ ಸಾಧನೆ ತೋರಿದ್ದ ಆಮ್ ಆದ್ಮಿ ಪಕ್ಷ ರಾಷ್ಟ್ರೀಯ ಪಕ್ಷದ ಮಾನ್ಯತೆಗೆ ಅರ್ಹತೆಯನ್ನು ಪಡೆದುಕೊಂಡಿತ್ತು. ಆದರೆ, ಇಲ್ಲಿಯವರೆಗೂ ಮಾನ್ಯತೆ ನೀಡದಿರುವುದನ್ನು ಪ್ರಶ್ನಿಸಿ ಕರ್ನಾಟಕ ಹೈ ಕೋರ್ಟ್‌ಗೆ ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯದರ್ಶಿ ದರ್ಶನ್ ಜೈನ್ ರಿಟ್ ಅರ್ಜಿ ಸಲ್ಲಿಸಿದ್ದರು.

ರಾಷ್ಟ್ರೀಯ ಪಕ್ಷವಾಗಿ ಗುರುತಿಸಿಕೊಳ್ಳಲು ನಾಲ್ಕು ರಾಜ್ಯಗಳಲ್ಲಿ ರಾಜ್ಯ ಪಕ್ಷವಾಗಿರಬೇಕು ಹಾಗೂ ನಾಲ್ಕು ರಾಜ್ಯಗಳಲ್ಲಿ ಕನಿಷ್ಠ 6% ಮತ ಪಡೆದಿರಬೇಕು. ದೆಹಲಿ, ಪಂಜಾಬ್, ಗೋವಾ ಮತ್ತು ಗುಜರಾತ್ ರಾಜ್ಯಗಳಲ್ಲಿ ರಾಜ್ಯ ಪಕ್ಷವಾಗಿರುವ ಆಮ್ ಆದ್ಮಿ ಪಕ್ಷವು, ರಾಷ್ಟ್ರೀಯ ಪಕ್ಷವಾಗುವ ಎಲ್ಲ ಷರತ್ತುಗಳನ್ನು ಪೂರೈಸಿದ್ದರೂ ರಾಷ್ಟ್ರೀಯ ಸ್ಥಾನಮಾನ ಪಡೆಯಲು ವಿಳಂಬವಾಗುತ್ತಿದೆ ಎಂದು ಕರ್ನಾಟಕ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಲಾಗಿತ್ತು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?