Vijayapatha – ವಿಜಯಪಥ
Friday, November 1, 2024
NEWSಬೆಂಗಳೂರುರಾಜಕೀಯ

ಕಾಂಗ್ರೆಸ್ ಸೇರಿಸಿಕೊಳ್ಳುವಾಗ ಟಿಕೆಟ್ ಕೊಡುವುದಾಗಿ ಹೇಳಿಲ್ಲ: ಡಿಕೆಶಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್‌ನ 2ನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಹಲವು ಕ್ಷೇತ್ರಗಳಲ್ಲಿ ಬಂಡಾಯದ ಬಿಸಿ ತಟ್ಟಿದ್ದು, ಬಂಡಾಯ ಶಮನಕ್ಕೆ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಬಂಡಾಯ, ಭಿನ್ನಮತ ಕುರಿತು ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜಕಾರಣ ಅಂದ್ರೆ ಪುಟ್ಬಾಲ್ ಅಲ್ಲ. ಚೆಸ್ ಗೇಮ್ ಇದ್ದಂಗೆ. ಕಾಂಗ್ರೆಸ್ ಸೇರಿಸಿಕೊಳ್ಳುವಾಗ ಟಿಕೆಟ್ ಕೊಡುವುದಾಗಿ ಹೇಳಿರಲಿಲ್ಲ ಎಂದರು.

ಇನ್ನು ಬೇಷರತ್ ಆಗಿ ಕಾಂಗ್ರೆಸ್‌ಗೆ ಸೇರಿಸಿಕೊಂಡಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಎಲ್ಲರಿಗೂ ಟಿಕೆಟ್ ಕೊಡಲು ಆಗುವುದಿಲ್ಲ. ಅಸಮಾಧಾನ ಇರುವವರನ್ನು ಕರೆದು ಮಾತಾಡುತ್ತೇವೆ, ಸರಿಪಡಿಸುತ್ತೇವೆ ಎಂದು ಹೇಳಿದರು.

ಟಿಕೆಟ್ ಕೈತಪ್ಪಿದ ಹಿನ್ನೆಲೆ ಚಿತ್ರದುರ್ಗದಲ್ಲಿ ರಘು ಆಚಾರ್ ಬಂಡಾಯವೆದ್ದು ಇದೀಗ ಜೆಡಿಎಸ್ ಸೇರ್ಪಡೆಗೆ ಮುಂದಾಗಿದ್ದಾರೆ. ಹಾಗೆಯೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್‌ವಿ ದತ್ತ ಅವರಿಗೆ ಕಡೂರು ಕ್ಷೇತ್ರದ ಟಿಕೆಟ್ ಕೈತಪ್ಪಿದ್ದು ಬೆಂಬಲಿಗರು, ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!
LATEST
ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ