NEWSಬೆಂಗಳೂರುರಾಜಕೀಯ

ಬಿಜೆಪಿ ಸ್ಟಾರ್ ಪ್ರಚಾರಕ ನಟ ಸುದೀಪ್‌ ವಿರುದ್ಧ ಚುನಾವಣಾ ಆಯೋಗಕ್ಕೆ ಜೆಡಿಎಸ್ ದೂರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸುದೀಪ್ ಬಿಜೆಪಿಯ ಸ್ಟಾರ್ ಪ್ರಚಾರಕರಾಗಿದ್ದಾರೆ. ಹೀಗಾಗಿ ಸುದೀಪ್ ಅವರ ಚಿತ್ರಗಳೂ ಜನರ ಮೇಲೆ ಪ್ರಭಾವ ಬೀರಬಹುದು. ಆದ್ದರಿಂದ ಚುನಾವಣೆ ಮುಗಿಯುವವರೆಗೂ ಅವರ ಚಿತ್ರ ಪ್ರದರ್ಶಿಸಬಾರದು ಎಂದು ಚುನಾವಣಾ ಆಯೋಗಕ್ಕೆ ಜೆಡಿಎಸ್ ದೂರು ನೀಡಿದೆ.

ಬಿಜೆಪಿ ಪರ ನಟ ಕಿಚ್ಚ ಸುದೀಪ್ ಪ್ರಚಾರ ವಿಚಾರ ಮಾಡುವುದಾಗಿ ಈಗಾಗಲೇ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದಾರೆ. ಆದ್ದರಿಂದ ಸುದೀಪ್ ಅವರ ಜಾಹೀರಾತುಗಳ ಪ್ರಸಾರಕ್ಕೆ ತಡೆ ನೀಡಬೇಕು ಎಂದು ಜೆಡಿಎಸ್ ಕಾನೂನು ವಿಭಾಗದಿಂದ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ತಮ್ಮ ಪುತ್ರನಿಗೆ ಟಿಕೆಟ್ ಕೊಡಿಸಲು ಲಾಬಿ ಎಂಟಿಬಿ ಲಾಬಿ: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ಈ ನಡುವೆ ಸಚಿವ ಎಂಟಿಬಿ ನಾಗರಾಜ್ ತಮ್ಮ ಪುತ್ರನಿಗೆ ಟಿಕೆಟ್ ಕೊಡಿಸಲು ಲಾಬಿ ನಡೆಸುತ್ತಿದ್ದಾರೆ.

ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಎಂಟಿಬಿ ಪುತ್ರನಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದರು.

ಬಿಎಸ್‌ವೈ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಂಟಿಬಿ, ಮಗನಿಗೆ ಟಿಕೆಟ್ ನೀಡುವಂತೆ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದೇನೆ. ಕೋರ್ ಕಮಿಟಿ ಸಭೆಯಲ್ಲೂ ಚರ್ಚೆ ಮಾಡಿದ್ದೇನೆ. ನಾನು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲ್ಲ. ಹೀಗಾಗಿ ಹೊಸಕೋಟೆಯಿಂದ ನನ್ನ ಮಗನಿಗೆ ಟಿಕೆಟ್ ನೀಡಲಿದ್ದಾರೆ. ಈ ಬಾರಿ ನನ್ನ ಮಗ ಗೆಲ್ಲುತ್ತಾನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...