NEWSಬೆಂಗಳೂರು

ಮುಡದಿಂದ ನೂರಾರು ಮರಗಳ ಹನನ: ಅರಣ್ಯ ಇಲಾಖೆಗೆ ಪರಿಸರ ಬಳಗ ದೂರು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಮೈಸೂರಿನ ಹಂಚ್ಯಾ – ಸಾತಗಳ್ಳಿ ಪ್ರದೇಶದಲ್ಲಿ ವಿಟಿಯು ಪ್ರಾದೇಶಿಕ ಕೇಂದ್ರದ ಸಮೀಪದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನೂರಾರು ಮರಗಳನ್ನು ಕಡಿಯಲು ಮುಂದಾಗಿದ್ದು, ಪರಿಸರ ಬಳಗ ಇದರ‌‌ ವಿರುದ್ಧ ಅರಣ್ಯ ಇಲಾಖೆಗೆ ದೂರು ನೀಡಿದೆ.

ನೂರಾರು ಮರಗಳ ಬುಡಮೇಲು‌ ಮಾಡುತ್ತಿರುವ‌ ವಿಷಯ ಪರಿಸರ ಬಳಗದ ಗಮನಕ್ಕೆ ಬಂದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಲಾಗಿತ್ತು. ಇದಕ್ಕೆ ಸ್ಪಂದಿಸಿದ ಇಲಾಖೆಯವರು ಸ್ಥಳ ಪರಿಶೀಲನೆ ಮಾಡಿದ್ದಾರೆ.

ಜಾಗತಿಕ ತಾಪಮಾನ ಏರಿಕೆಯಿಂದ ಆಗುತ್ತಿರುವ ಭೀಕರ ಪರಿಣಾಮಗಳನ್ನು ನಾವೆಲ್ಲ ಈಗಾಗಲೇ ಅನುಭವಿಸುತ್ತಿದ್ದೇವೆ. ಈ ವರ್ಷ ಫೆಬ್ರವರಿ ತಿಂಗಳಲ್ಲಿ ಉಷ್ಣತೆ ದಾಖಲೆಯ ಮಟ್ಟದಲ್ಲಿ ಏರಿಕೆಯಾಗಿದ್ದು ನಮಗೆಲ್ಲ ಗೊತ್ತಿದೆ. ಹಲವು ಜೀವನದಿಗಳ ಉಗಮ ಸ್ಥಾನವಾದ ಕೊಡಗಿನಲ್ಲಿ ಹಲವು ನದಿಗಳು ಏಪ್ರಿಲ್ ತಿಂಗಳಲ್ಲೇ ಬತ್ತಿ ಹೋಗುತ್ತಿದ್ದು ಹಲವು ಹಳ್ಳಿಗಳಲ್ಲಿ ನೀರಿನ ಅಭಾವ ಉಂಟಾಗಿದೆ.

ಇದೇ ರೀತಿ ಹವಾಮಾನ ಬದಲಾವಣೆಯಿಂದ ಪ್ರತಿದಿನ ಜಗತ್ತಿನ ಒಂದಲ್ಲ ಒಂದು ಕಡೆ ಪ್ರಾಕೃತಿಕ ವಿಕೋಪಗಳು ಘಟಿಸುತ್ತಿವೆ. ಪರಿಸ್ಥಿತಿ ದಿನೇದಿನೇ ಹದಗೆಡುತ್ತಿದ್ದು ಮುಂದಿನ ದಿನಗಳಲ್ಲಿ ಊಹಿಸಲೂ ಸಾಧ್ಯವಾಗದ ಪ್ರಾಕೃತಿಕ ವಿಕೋಪಗಳು ಜರುಗುವ ಅಪಾಯ ಇದೆ.

ಈಗಿನ ಪರಿಸ್ಥಿತಿಯಲ್ಲಿ ಗಿಡಗಳನ್ನು ನೆಟ್ಟು ಮರಗಳನ್ನು ಬೆಳೆಸುವ ಕೆಲಸ ಮಾಡಬೇಕಾಗಿರುವುದು ಅರಣ್ಯ ಇಲಾಖೆ ಮತ್ತು ಸಾರ್ವಜನಿಕರ ಜವಾಬ್ದಾರಿ ಆಗಿದೆ. ಹೀಗಿರುವಾಗ ಮರಗಳನ್ನು ಕಡಿಯುವುದು ಅತ್ಯಂತ ಕ್ರೂರ ಮತ್ತು ಬೇಜವಾಬ್ದಾರಿ ಕೆಲಸ ಎಂದು ಪರಿಸರ ಬಳಗ ಆಕ್ರೋಶ ವ್ಯಕ್ತಪಡಿಸಿದೆ.

ಈಗಾಗಲೇ ನೂರಾರು ಮರಗಳನ್ನು ಕಡಿಯಲಾಗಿದ್ದು, ಇದಕ್ಕೆ ಕಾರಣರಾದವರ ಮೇಲೆ ಅರಣ್ಯ ಇಲಾಖೆ ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಪರಿಸರ ಬಳಗದ ಪರಶುರಾಮೇಗೌಡ ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ