CrimeNEWSಬೆಂಗಳೂರು

ಪುತ್ತೂರು ವಿಭಾಗದ ಕೆಎಸ್‌ಆರ್‌ಟಿಸಿ ಉದ್ಯೋಗಿ ಕಾಣಿಯೂರು ರೈಲ್ವೆ ಟ್ರ್ಯಾಕ್‌ನಲ್ಲಿ ಶವವಾಗಿ ಪತ್ತೆ

ವಿಜಯಪಥ ಸಮಗ್ರ ಸುದ್ದಿ

ಪುತ್ತೂರು: ಪುತ್ತೂರು ವಿಭಾಗದ ಕೆಎಸ್‌ಆರ್‌ಟಿಸಿ ಉದ್ಯೋಗಿಯೊಬ್ಬರ ಮೃತದೇಹ ಕಾಣಿಯೂರು ರೈಲ್ವೆ ಟ್ರ್ಯಾಕ್‌ನಲ್ಲಿ ಪತ್ತೆಯಾಗಿದೆ.

ನೂತನ ಕಡಬ ತಾಲೂಕಿನ ಬೆಳಂದೂರು ಗ್ರಾಮದ ಅಬೀರ ನಿವಾಸಿ ಕುಸುಮಾಧರ (34) ಮೃತರು. ಇವರು ಚಲಿಸುತ್ತಿರುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಕುಸುಮಾಧರ ಅವರು ಕಳೆದ ಗುರುವಾರ ರಾತ್ರಿ ಕರ್ತವ್ಯ ಮುಗಿಸಿಕೊಂಡು ಹೋಗಿದ್ದರು. ಈ ವೇಳೆ ಅವರು ಮನೆಗೆ ಹೋಗಿರಲಿಲ್ಲ, ನಾಪತ್ತೆಯಾಗಿದ್ದರು. ಆದರೆ ಶುಕ್ರವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಹೀಗಾಗಿ ಕುಸುಮಾಧರ ಅವರ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದೆ.

ಕಳೆದ 9 ವರ್ಷಗಳಿಂದ ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದಲ್ಲಿ ಚಾಲಕ, ನಿರ್ವಾಹಕರಾಗಿ ಕುಸುಮಾಧರ ಕೆಲಸ ನಿರ್ವಹಿಸುತ್ತಿದ್ದರು. ಕೆಲ ತಿಂಗಳ ಹಿಂದಷ್ಟೇ ವಿವಾಹಿತರಾಗಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೃತರು ಪತ್ನಿ, ತಾಯಿ ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ. ಘಟನೆ ಸಂಬಂಧ ರೈಲ್ವೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಜರುಗಿಸಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ