CrimeNEWSಬೆಂಗಳೂರು

ರಸ್ತೆ ದಾಟುತ್ತಿದ್ದಾಗ ಬಸ್‌ ಹರಿದು 2ವರ್ಷದ ಮಗು ಸಾವು – ಆಕ್ರೋಶಗೊಂಡ ಸ್ಥಳೀಯರಿಂದ ಬಸ್‌ ಗಾಜುಗಳು ಪುಡಿಪುಡಿ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ರಸ್ತೆ ದಾಟುತ್ತಿದ್ದ ಎರಡು ವರ್ಷದ ಮಗುವಿನ ಮೇಲೆ ಸಾರಿಗೆ ಬಸ್‌ ಹರಿದ ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪರಮಾನಂದವಾಡಿ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಪರಮಾನಂದವಾಡಿ ಗ್ರಾಮದ ನಿವಾಸಿ ಅಶೋಕ ತುಳಸಿಗೇರಿ ಎಂಬುವರ ಮಗು ಶ್ಲೋಕ ಮೃತಪಟ್ಟಿರುವುದು.

ಪರಮಾನಂದವಾಡಿಯಿಂದ ರಾಯಬಾಗ ಪಟ್ಟಣಕ್ಕೆ ತೆರಳುತ್ತಿದ್ದ ಬಸ್ ಮಗು ರಸ್ತೆ ದಾಟುವಾಗ ಹರಿದಿದೆ ಎನ್ನಲಾಗಿದೆ. ಆದರೆ, ಎರಡು ವರ್ಷದ ಮಗುವನ್ನು ರಸ್ತೆಯಲ್ಲಿ ಬಿಟ್ಟು ಪಾಲಕರು ಎಲ್ಲಗೆ ಹೋಗಿದ್ದರು ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಆದರೆ, ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂದು ಆರೋಪಿಸಿದ ಸ್ಥಳೀಯರು ಬಸ್‌ನ ಗಾಜುಗಳನ್ನು ಪುಡಿಪುಡಿ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೆ ಸ್ಥಳದಲ್ಲಿ ಪ್ರತಿಭಟನೆ ಮಾಡುತ್ತಿದ್ದರು. ಇದರಿಂದ ಉದ್ವಿಗ್ನ ವಾತಾವರಣ ನಿರ್ಮಾಣವಾಗುವಂತಿತ್ತು. ಇತ್ತ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿ ಕುಡಚಿ ಪೊಲೀಸರು ಪ್ರತಿಭಟನಕಾರರನ್ನು ಸಮಾಧಾನಪಡಿಸಿದರು.

ಇನ್ನು ಅಪಘಾತ ಸಂಭವಿಸುತ್ತಿದ್ದಂತೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಘಟನೆ ಸಂಬಂಧ ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ