NEWSನಮ್ಮರಾಜ್ಯರಾಜಕೀಯ

 2ನೇ ಪಟ್ಟಿ ಬಿಡುಗಡೆ ಬೆನ್ನಲೇ ಬಿಜೆಪಿಯಲ್ಲಿ ಮುಂದುವರಿದ ರಾಜೀನಾಮೆ ಪರ್ವ : ಮೂವರು ಶಾಸಕರ ರಾಜೀನಾಮೆ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಟಿಕೆಟ್​ ಸಂಬಂಧ ಬಿಜೆಪಿಯಲ್ಲಿ ಬಂಡಾಯದ ಬಿಸಿ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದ್ದು, ರಾಜೀನಾಮೆ ಪರ್ವ ಮುಂದುವರೆದಿದೆ. ಇದೀಗ ಮೂವರು ಶಾಸಕರು ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.

ಶಾಸಕ ನೆಹರೂ ಓಲೇಕಾರ್​ ಸಹ ಬೆಜೆಪಿಗೆ ರಾಜೀನಾಮೆ ಘೋಷಿಸಿದ್ದಾರೆ. ಹುಕ್ಕೇರಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಹಾವೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನೆಹರೂ ಓಲೇಕಾರ್, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ. ಸುಮಾರು 1000 ಬೆಂಬಲಿಗರು ಕಾರ್ಯಕರ್ತರು ನನ್ನ ಜತೆ ರಾಜೀನಾಮೆ ನೀಡುತ್ತಾರೆ. ಜೆಡಿಎಸ್‌ನಿಂದ ಆಹ್ವಾನ ಬಂದಿದೆ. ಕಾರ್ಯಕರ್ತರ ಜತೆ ಮಾತನಾಡಿ ತೀರ್ಮಾನ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಬೊಮ್ಮಾಯಿಂದ ಬಿಜೆಪಿಗೆ ದೊಡ್ಡ ಹೊಡತ ಬಿದ್ದಿದೆ. ತನಗೆ ಅನುಕೂಲ ಆಗುವವರಿಗೆ ಟಿಕೆಟ್​ ಕೊಡಿಸಿದ್ದಾರೆ. ನನಗೆ ಟಿಕೆಟ್​ ತಪ್ಪಿಸೋ ಹುನ್ನಾರ ನಡೆಯಿತು, ಅವರ ಕೈ ಚೀಲ ಆದವರಿಗೆ ಟಿಕೆಟ್​ ಕೊಡಿಸಿದ್ದಾರೆ ಎಂದು ಸಿಎಂ ಬೊಮ್ಮಾಯಿ ವಿರುದ್ಧ ಕಿಡಿಕಾರಿದರು.

ತುಮಕೂರು: ಇನ್ನು ಇದೀಗ ಮಾಜಿ ಸಚಿವ ಸೊಗಡು ಶಿವಣ್ಣ ಸಹ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಶಿವಣ್ಣ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್‌ಗೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದರು.

ಇಮೇಲ್ ಮೂಲಕ ರಾಜೀನಾಮೆ ನೀಡಿದ್ದೇನೆ. ತುಮಕೂರು ನಗರ ಕ್ಷೇತ್ರದಿಂದ ನಾನು ಸ್ಪರ್ಧಿಸುವುದು ಖಚಿತ. ನಮ್ಮ ಕಾರ್ಯಕರ್ತರ ಜತೆ ಸಭೆ ನಡೆಸಿ ತೀರ್ಮಾನ ಮಾಡುತ್ತೇನೆ. ಪಕ್ಷೇತರವಾಗಿ ಸ್ಪರ್ಧಿಸಬೇಕಾ..? ಅಥವಾ ಬೇರೆ ಪಕ್ಷದಿಂದ ಸ್ಪರ್ಧಿಸಬೇಕಾ ಎಂದು. ನಾನು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ ಎಂದು ಹೇಳಿದ್ದಾರೆ.

ಚಿಕ್ಕಮಗಳೂರು: ಬಿಜೆಪಿಯ 2ನೇ ಪಟ್ಟಿ ಬಿಡುಗಡೆ ಬೆನ್ನಲ್ಲೆ ಟಿಕೆಟ್ ಕೈತಪ್ಪಿದ ಹಿನ್ನೆಲೆ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಸಹ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.

ಕುಮಾರಸ್ವಾಮಿ ಮೂಡಿಗೆರೆಯಿಂದ ಕಣಕ್ಕಿಳಿಯಲು ಬಿಜೆಪಿ ಟಿಕೆಟ್​ ಆಕಾಂಕ್ಷಿಯಾಗಿದ್ದರು. ಆದರೆ ಕ್ಷೇತ್ರದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಬಿಜೆಪಿ ಹೈಕಮಾಂಡ್​, ದೀಪಕ್ ದೊಡ್ಡಯ್ಯ ಎನ್ನುವರಿಗೆ ಟಿಕೆಟ್​ ಘೋಷಣೆ ಮಾಡಿದೆ. ಈ ಹಿನ್ನೆಲೆ ಅಸಮಾಧಾನಗೊಂಡ ಎಂಪಿ ಕುಮಾರಸ್ವಾಮಿ ಅವರು ಇಂದು ಶಾಸಕ ಸ್ಥಾನದ ಜತೆಗೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಇನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಮೂಡಿಗೆರೆ ಕ್ಷೇತ್ರದ ಟಿಕೆಟ್ ಕೈತಪ್ಪಲು ಸಿ.ಟಿ.ರವಿ ಕಾರಣ. ಅವರಿಗೆ ನಿಷ್ಠರಾಗಿ ಹೋಗಬೇಕು. ಅದು ನನ್ನಿಂದ ಸಾಧ್ಯವಿಲ್ಲ ಎಂದು ಹೇಳಿದರು.

ಇನ್ನು ರಾಜ್ಯದಲ್ಲಿ ಬಿಜೆಪಿ ನೆಲ ಕಚ್ಚಲು ಸಿ.ಟಿ. ರವಿ ಕಾರಣರಾಗುತ್ತಾರೆ. ದೆಹಲಿಯಲ್ಲಿ ಶಾಸಕ ರವಿ ಕಣ್ಣಮುಚ್ಚಾಲೆ ಆಡುತ್ತಿದ್ದಾರೆ. ಬಿಎಸ್‌ವೈ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡ್ರೆ 50 ಸ್ಥಾನ ಬರಲ್ಲ. ಪಕ್ಷಕ್ಕೆ ನಾನು ಏನು ಅನ್ಯಾಯ ಮಾಡಿದ್ದೇನೆ. ಜನರ ಸೇವೆ ಮಾಡುವ ಶಕ್ತಿ ಇನ್ನೂ ಇದೆ ಎಂದು ಹೇಳಿದರು.

Leave a Reply

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?