NEWSನಮ್ಮಜಿಲ್ಲೆ

ಕೊರೋನಾ – ಥರ್ಮಲ್ ಸ್ಕ್ರೀನಿಂಗ್

ಆರ್‌ಟಿಒ  ಡಿಸಿ ಕಚೇರಿಯಲ್ಲೂ ಹೆಲ್ತ್‍ಡೆಸ್ಕ್ l ತಾಲೂಕು ಕಚೇರಿಗಳಲ್ಲಿ ಮಾಹಿತಿಕೇಂದ್ರ  

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ವಿದೇಶದಲ್ಲಿ ನೆಲೆಸಿರುವ ಅಥವಾ ಬೇರೆ ಕಾರಣಗಳಿಗೆ ವಿದೇಶಕ್ಕೆ ತೆರಳಿರುವ ಜಿಲ್ಲೆಯ ಜನರು ಮರಳಿ  ಜಿಲ್ಲೆಗೆ ಬರುತ್ತಿದ್ದಾರೆ. ಇಂತಹ ಜನರ ಮಾಹಿತಿಯನ್ನು ಸಂಗ್ರಹಿಸಲು ಮತ್ತು ಅವರನ್ನು ಸೂಕ್ತ ವ್ಯದ್ಯಕೀಯ ತಪಾಸಣೆಗೆ ಒಳಪಡಿಸಬೇಕಾಗಿರುವುದಿಂದ ಪ್ರತಿಯೊಂದು ತಹಸೀಲ್ದಾರ ಕಚೇರಿ ಹಾಗೂ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಮಾಹಿತಿ ಕೇಂದ್ರ ಆರಂಭಿಸಲು ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಸೂಚನೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಕೊರೋನಾ(ಕೋವಿಡ್-19) ವೈರಸ್ ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಮಾಹಿತಿ ಕೇಂದ್ರಗಳಲ್ಲಿ ವಿದೇಶದಿಂದ ಬಂದವರ ಮಾಹಿತಿಯನ್ನು ಸಂಗ್ರಹಿಸಿ ಆರೋಗ್ಯ ಇಲಾಖೆಗೆ ತಿಳಿಸಬೇಕು. ಈ ಕುರಿತು ಎಲ್ಲ ವಿವರಗಳನ್ನು ಒಳಗೊಂಡ ಒಂದು ವಹಿಯನ್ನು ನಿರ್ವಹಿಸಬೇಕು ಹಾಗೂ ಎಲ್ಲ ಉಪ ವಿಭಾಗಾಧಿಕಾರಿಗಳ ಮತ್ತು ತಹಸೀಲ್ದಾರ ಕಾರ್ಯಾಲಯಗಳಲ್ಲಿ 24×7 ಸಹಾಯವಾಣಿಯನ್ನು ತೆರೆಯಲು ಸೂಚಿಸಿದ್ದಾರೆ.

ಆರೋಗ್ಯ ಇಲಾಖೆಯಿಂದ ರೈಲ್ವೆ ಹಾಗೂ ಬಸ್ ನಿಲ್ದಾಣಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗಿದೆ.   ಹಾವೇರಿ ಮತ್ತು ರಾಣೇಬೆನ್ನೂರು ರೈಲು ನಿಲ್ದಾಣಗಳಲ್ಲಿ ಬೇರೆ ಬೇರೆ ರಾಜ್ಯಗಳಿಂದ ಸುಮಾರು 100 ರಿಂದ 200 ಜನರು ಆಗಮಿಸುತ್ತಾರೆ.  ಪ್ರಯಾಣಿಕರು ರೈಲಿನಿಂದ ಇಳಿದ ತಕ್ಷಣ ಥರ್ಮಲ್ ಸ್ಕ್ರೀನಿಂಗ್ ಕೇಂದ್ರಕ್ಕೆ ತೆರಳಿ ಪರೀಕ್ಷಿಸಿಕೊಳ್ಳಬೇಕು. ಆದರೆ  ರೈಲು ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಜನದಟ್ಟಣೆ ಹೆಚ್ಚಾಗಿ ಕೆಲವು ಪ್ರಯಾಣಿಕರು ಪರೀಕ್ಷೆ ಮಾಡಿಸಿಕೊಳ್ಳದೇ ನಿಲ್ದಾಣಗಳಿಂದ ಹೊರಹೋಗುತ್ತಿದ್ದಾರೆ ಹಾಗೂ ಥರ್ಮಲ್ ಸ್ಕ್ರೀನಿಂಗ್ ಕೇಂದ್ರಗಳಲ್ಲಿ ಹೆಚ್ಚಿನ ಜನದಟ್ಟಣೆಯಾಗಿವುದರಿಂದ ವ್ಯವಸ್ಥಿತವಾಗಿ ಪರೀಕ್ಷಿಸಿಲು ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ತೊಂದರೆಯಾಗುತ್ತಿದೆ ಹಾಗೂ ಬಸ್ ನಿಲ್ದಾಣಗಳಲ್ಲಿಯೂ ಸಹ ಇದೇ ಸಮಸ್ಯೆ ಉಂಟಾಗುತ್ತಿದೆ. ಎಂದು ಹೇಳಿದ್ದಾರೆ.

ಹಾವೇರಿ ಮತ್ತು ರಾಣೇಬೆನ್ನೂರು ರೈಲು ನಿಲ್ದಾಣ ಹಾಗೂ ಬಸ್ ನಿಲ್ದಾಣಗಳಿಗೆ, ಹಾವೇರಿ ಜಿಲ್ಲಾ ಆಸ್ಪತ್ರೆ ಹಾಗೂ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಸ್ಥಾಪಿಸಲಾಗಿರುವ ಐಸೋಲೇಶನ್ ವಾರ್ಡ್‍ಗಳಿಗೆ  ದಿನದ 24 ಗಂಟೆ ಪೊಲೀಸ್ ಸಿಬ್ಬಂದಿ ನಿಯೋಜನೆಗೆ ಕ್ರಮ ವಸಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಸರ್ಕಾರಿ ಕಚೇರಿ ಮುಖ್ಯದ್ವಾರದ ಬಳಿ ಹೆಲ್ತ್‌ಡೆಸ್ಕ್

ಕರೋನಾ ವೈರಸ್ ಹರಡದಂತೆ ನಿಯಂತ್ರಣಕ್ಕಾಗಿ ಜಿಲ್ಲಾಧಿಕಾರಿಗಳು ಸರ್ಕಾರಿ ಕಚೇರಿಗಳು ಕೈಗೊಳ್ಳಬಹುದಾದ ಮಾರ್ಗಸೂಚಿಗಳನ್ನು ಈಗಾಗಲೇ ಹೊರಡಿಸಿದ್ದು, ಸರ್ಕಾರಿ ಕಚೇರಿಗೆ ಭೇಟಿ ನೀಡುವ ಸಾರ್ವಜನಿಕರ ಮಾಹಿತಿ ಹಾಗೂ ತಪಾಸಣೆಗಾಗಿ ಜಿಲ್ಲಾಧಿಕಾರಿಗಳ ಕಚೇರಿಯ ಮುಖ್ಯದ್ವಾರದ ಬಳಿ ಹೆಲ್ತ್‍ಡೆಸ್ಕ್‍ಗಳನ್ನು ಸ್ಥಾಪಿಸಿ ಆರೋಗ್ಯ ಕಾರ್ಯಕರ್ತರನ್ನು ನಿಯೋಜಿಸಲಾಗಿದೆ.

ಕಚೇರಿಗೆ ಭೇಟಿ ನೀಡುವ ಸಾರ್ವಜನಿಕರ ಮಾಹಿತಿ ಹಾಗೂ ತಪಾಸಣೆ ಕೈಗೊಳ್ಳಲಾಗುತ್ತಿದೆ. ಈ ಮಾದರಿಯಲ್ಲಿ ಹೆಚ್ಚು ಜನರು ಬೇಟಿ ನೀಡುವ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲೂ ಹೆಲ್ತ್‍ಡೆಸ್ಕ್ ಸ್ಥಾಪಿಸಿ ಆರೋಗ್ಯ ಕಾರ್ತಕರ್ತರನ್ನು ನಿಯೋಜಿಸಲಾಗಿದೆ.

ಆರ್ ಟಿಒ ಕಚೇರಿಗೆ ಬರುವ ಸಾರ್ವಜನಿಕರ ಮಾಹಿತಿ, ತಪಾಸಣೆ ಹಾಗೂ ಕರೋನಾ ಕುರಿತು ಜಾಗೃತಿ ಮೂಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂದಿನಿಂದ ಚಾಲನಾ ಪ್ರಮಾಣಪತ್ರ  ಹಾಗೂ ಕಲಿಕಾ ಪ್ರಾಯೋಗಿಕ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.  ಬಯೋಮೆಟ್ರಿಕ್ ಒಳಪಡುವ ಎಲ್ಲ ಕೆಲಸಗಳನ್ನು ಸ್ಥಗಿತಗೊಳಿಸಿ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ