NEWSಬೆಂಗಳೂರುರಾಜಕೀಯ

ಎರಡೂ ಪಕ್ಷಗಳು ಸೇರಿ ನನ್ನನ್ನು ಮುಗಿಸಲು ಯತ್ನಿಸಿವೆ : ಸಿದ್ದರಾಮಯ್ಯ ವಾಗ್ದಾಳಿ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ವರುಣಾ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುತ್ತಿದ್ದೇನೆ. ಎರಡೂ ಪಕ್ಷಗಳು ಸೇರಿ ನನ್ನನ್ನು ಮುಗಿಸಲು ಯತ್ನಿಸಿವೆ. ಎರಡು ಪಕ್ಷಗಳಿಗೆ ನಾನೇ ಟಾರ್ಗೆಟ್. ಆದರೆ ರಾಜ್ಯದ ಜನರ ಆಶೀರ್ವಾದ ಇರುವವರೆಗೂ ನನ್ನನ್ನ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಚಾಮುಂಡೇಶ್ವರಿ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ವರುಣಾ ಕ್ಷೇತ್ರಕ್ಕೆ ಬಿಜೆಪಿಯವರು ಬೆಂಗಳೂರಿನಿಂದ ಅದ್ಯಾರನ್ನೋ ತಂದಿದ್ದಾರೆ.

ಅವನು ನಿಲ್ಲಲ್ಲ ಅಂದರೂ ವರುಣಾಗೆ ಕರೆ ತಂದಿದ್ದಾರೆ. ಇದು ನನ್ನ ಕೊನೆಯ ಚುನಾವಣೆ. ಯಾರೇ ನಿಂತರೂ ವರುಣಾ ಜನರ ತೀರ್ಪು ಅಂತಿಮ ಎಂದರು.

ನಾನು ವರುಣಾ ಕ್ಷೇತ್ರದಲ್ಲಿ ಗೆದ್ದೇ ಗೆಲ್ಲುತ್ತೇನೆ. ಇದೇ ನನ್ನ ಕೊನೆಯ ಚುನಾವಣೆ. ಚಾಮುಂಡೇಶ್ವರಿ ನನಗೆ ರಾಜಕೀಯ ಜನ್ಮ ನೀಡಿದ ಕ್ಷೇತ್ರ. ಚಾಮುಂಡೇಶ್ವರಿಯಲ್ಲಿ ಯಾರೇ ಗೆದ್ದರೂ ನಾನೇ ಶಾಸಕ. ಚಾಮುಂಡೇಶ್ವರಿ ಕ್ಷೇತ್ರವನ್ನು ಮರೆಯುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

Leave a Reply

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?