ಬೆಳಗಾವಿ: ಟಿಕೆಟ್ ಸಿಗದಿದ್ದಕ್ಕೆ ಅಸಮಾಧಾನಗೊಂಡು ಬಿಜೆಪಿ ತೊರೆಯಲು ನಿರ್ಧರಿಸಿರುವ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಖಚಿತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಲಕ್ಷ್ಮಣ್ ಸವದಿ ರಾಜ್ಯ ಮಟ್ಟದ ಪ್ರಭಾವಿ ನಾಯಕ ಸವದಿ ಕಾಂಗ್ರೆಸ್ಗೆ ಬರಲಿ ಸ್ವಾಗತ ಮಾಡುತ್ತೇವೆ ಎಂದರು.
ಇನ್ನು ಜಿಲ್ಲಾ ನಾಯಕರೆಲ್ಲ ಕೂಡಿ ಅವರನ್ನು ಸ್ವಾಗತಿಸುತ್ತಿದ್ದಾರೆ. ಲಕ್ಷ್ಮಣ್ ಸವದಿ ಕಾಂಗ್ರೆಸ್ಗೆ ಬಂದರೆ ಕಿತ್ತೂರು ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ಗೆ ಬಲ ಬಂದಂತಾಗುತ್ತದೆ ಎಂದರು.
ಹಾಗೆಯೇ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ್ ಬೆನಕೆ ಕೂಡ ಹೈಕಮಾಂಡ್ ಜತೆ ಸಂಪರ್ಕದಲ್ಲಿರುಬಹುದು. ಮುಂದಿನ ದಿನಗಳಲ್ಲಿ ಯಾರೆಲ್ಲಾ ಬರ್ತಾರೆ ನೋಡೋಣ. ಬರುವವರ ಜತೆ ಮಾತುಕತೆ ನಡೆಯುತ್ತಿದೆ ಎಂದರು.