ಬೆಂಗಳೂರು: ಅಥಣಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಈಗಾಗಲೇ ಬಿಜೆಪಿ ತೊರೆಯಲು ನಿರ್ಧರಿಸಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಇಂದು ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಲಕ್ಷ್ಮಣ್ ಸವದಿ, ಇಂದು ಬಿಜೆಪಿಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಎಂದರು.
ಇನ್ನು ಇಂದು ಸಂಜೆ 4 ಗಂಟೆಗೆ ಸಭಾಪತಿಯನ್ನು ಭೇಟಿಯಾಗಿ ರಾಜೀನಾಮೆ ಪತ್ರ ನೀಡುತ್ತೇನೆ. ರಾಜೀನಾಮೆ ನೀಡಿದ ಬಳಿಕ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರನ್ನು ಭೇಟಿಯಾಗುವೆ ಎಂದು ಹೇಳಿದರು.
ಅಥಣಿ ಕ್ಷೇತ್ರದಲ್ಲಿ ಟಿಕೆಟ್ ಕೊಡಲಿಲ್ಲ. ಟಿಕೆಟ್ ನೀಡಿಲ್ಲ ಎಂದರೆ ಅಲ್ಲಿ ಯಾಕೆ ಇರಬೇಕು. ಬಿಜೆಪಿ ಯಾವ ನಾಯಕರನ್ನೂ ಭೇಟಿ ಮಾಡಲ್ಲ. ಮನೆ ಬಿಟ್ಟು ಹೋಗುವ ಹೊತ್ತಿನಲ್ಲಿ ಯಾಕೆ ಭೇಟಿಯಾಗಲಿ ಎಂದು ಲಕ್ಷ್ಮಣ್ ಸವದಿ ಹೇಳಿದರು.
ಇನ್ನು ಈಗಾಗಲೇ ಬೆಂಗಳೂರಿಗೆ ಲಕ್ಷ್ಮಣ್ ಸವದಿ ಡಿಕೆಶಿ ಮತ್ತು ಸಿದ್ದರಾಮಯ್ಯ ಅವರನ್ನು ರಹಸ್ಯ ಸ್ಥಳದಲ್ಲಿ ಭೇಟಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.