ಹಾವೇರಿ: ರಾಜ್ಯ ವಿಧಾನಸಭಾ ಕಣ ರಂಗೇರಿದ್ದು ಸಿಎಂ ಬಸವರಾಜ ಬೊಮ್ಮಾಯಿ ಶಿಗ್ಗಾಂವಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ತಹಸೀಲ್ದಾರ್ ಕಚೇರಿಯಲ್ಲಿ ಸಿಎಂ ಬೊಮ್ಮಾಯಿ ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದು, ಏಪ್ರಿಲ್ 19 ರಂದು ಮತ್ತೆ ಅಧಿಕೃತವಾಗಿ ನಾಮಪತ್ರ ಸಲ್ಲಿಸುವರು.
ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ಶಿಗ್ಗಾಂವಿಯಲ್ಲಿ ಮತ್ತೊಮ್ಮೆ ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿರುವೆ. ಹಿಂದಿನ ಎಲ್ಲ ದಾಖಲೆಗಳನ್ನು ಮುರಿದು ಅಧಿಕ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ಕ್ಷೇತ್ರದಲ್ಲಿ ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳೇ ನನ್ನ ಗೆಲುವಿಗೆ ಶ್ರೀರಕ್ಷೆಯಾಗಲಿವೆ. ನಾನು ಎಲ್ಲ ಪೈಪೋಟಿಗಳನ್ನು ಎದರಿಸುತ್ತೇನೆ. ಜನರು ಈ ಬಾರಿ ಹೆಚ್ಚಿನ ಬೆಂಬಲ ಕೊಡಲಿದ್ದಾರೆ ಎಂದು ಹೇಳಿದರು.
ನವ ಭಾರತಕ್ಕಾಗಿ ನವ ಕರ್ನಾಟಕವನ್ನು ನಿರ್ಮಿಸುವ ಮಹತ್ವದ ಸಂಕಲ್ಪದ ಹಿನ್ನೆಲೆ ತನ್ನ ತವರು ಕ್ಷೇತ್ರ ಶಿಗ್ಗಾಂವಿ-ಸವಣೂರಿನಲ್ಲಿ ನಾಮಪತ್ರ ಸಲ್ಲಿಸುವ ಮುನ್ನ, ತನ್ನ ಆರಾಧ್ಯ ದೈವ ಶ್ರೀ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು.