NEWSಬೆಂಗಳೂರುರಾಜಕೀಯ

ಇದು ನನ್ನ ಕೊನೇ ಚುನಾವಣೆ ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ಮಾಜಿ ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಇದು ನನ್ನ ಕೊನೆಯ ಚುನಾವಣೆ. ನಂತರ ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ. ಹೀಗಾಗಿ ತಾವು ಒಂದು ಲಕ್ಷ ಮತಗಳ ಅಂತರದಲ್ಲಿ ನನ್ನನ್ನು ಗೆಲ್ಲಿಸಿ ಎಂದು ವರುಣಾ ಕ್ಷೇತ್ರದ ಜನರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ನಂಜನಗೂಡಿನ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಿಮ್ಮ ಉತ್ಸವ ನೋಡಿದರೆ ಏನು ಮಾತನಾಡಬೇಕು ಎಂದು ಗೊತ್ತಾಗುತ್ತಿಲ್ಲ. ಇದು ನನ್ನ ಕೊನೆಯ ಚುನಾವಣೆ. ಮುಂದೆ ಡಾ.ಯತೀಂದ್ರ ಇದ್ದಾನೆ, ಧವನ್ ಇದ್ದಾನೆ. ನಿಮ್ಮೆಲ್ಲರ ಆಶೀರ್ವಾದ ಬಯಸಿ ಸ್ಪರ್ಧೆ ಮಾಡುತ್ತಿದ್ದೇನೆ ಎಂದರು.‌

ಇನ್ನು ಬಿಜೆಪಿಯವರು ವರುಣ ಕ್ಷೇತ್ರದಲ್ಲಿ ಹುಟ್ಟಿ ಬೆಳೆದವರಿಗೆ ಅವಕಾಶ ನೀಡಿಲ್ಲ. ಬೆಂಗಳೂರಿನಿಂದ ಸೋಮಣ್ಣ ಅವರನ್ನು ಕರೆತಂದು ನಿಲ್ಲಿಸಿದ್ದಾರೆ. ಬಿಜೆಪಿ- ಜೆಡಿಎಸ್‌ ನವರು ಒಳ ಒಪ್ಪಂದ ಮಾಡಿಕೊಂಡಿದ್ದಾರೆ. ಆದ್ದರಿಂದಲೇ ಜೆಡಿಎಸ್‌ ನವರು ಡಾ.ಭಾರತಿ ಶಂಕರ್ ಅವರನ್ನು ಕರೆತಂದು ನಿಲ್ಲಿಸಿದ್ದಾರೆ. ಬಿಜೆಪಿ, ಜೆಡಿಎಸ್ ಅಭ್ಯರ್ಥಿ ಸೋಲಿಸಿ ದೊಡ್ಡ ಅಂತರದಲ್ಲಿ ನೀವು ಗೆಲ್ಲಿಸುತ್ತೀರಿ ಎನ್ನುವ ವಿಶ್ವಾಸ ಇದೆ ಎಂದರು.

ಬಿಜೆಪಿಯವರು ಕುತಂತ್ರ ಮಾಡುವುದರಲ್ಲಿ ನಿಸ್ಸೀಮರು. ಬಿಜೆಪಿ, ಜೆಡಿಎಸ್‌ ನವರು ನನ್ನನ್ನು ಸೋಲಿಸಲೇಬೇಕು ಅಂತ ಹಣದ ಹೊಳೆ ಹರಿಸಬಹುದು. ಎಷ್ಟೇ ಕೋಟಿ ಖರ್ಚು ಮಾಡಲಿ, ಎಷ್ಟೇ ಕುತಂತ್ರ, ಹುನ್ನಾರ ಮಾಡಲಿ. ವರುಣ ಕ್ಷೇತ್ರದ ಜನ ಇದ್ಯಾವುದಕ್ಕೂ ಸೊಪ್ಪು ಹಾಕಲ್ಲ ಎಂಬ ಭರವಸೆ ನನಗೆ ಇದೆ ಎಂದರು.

ವರುಣಾ ನಾನು ಹುಟ್ಟಿದ ಹೋಬಳಿ. ನಮ್ಮೂರು ಸಿದ್ದರಾಮನಹುಂಡಿ ಇಲ್ಲೇ ಇದೆ. ಇದು ನನ್ನ ಕೊನೆಯ ಚುನಾವಣೆ. ರಾಜ್ಯದಲ್ಲಿ ಶೇ.40ರಷ್ಟು ಭ್ರಷ್ಟಾಚಾರ ನಡೆದಿದೆ. ಹೀಗಾಗಿ ಬಿಜೆಪಿಯನ್ನು ಸೋಲಿಸಲೇಬೇಕು. ಜೆಡಿಎಸ್‌ ನವರಿಗೆ ಅತಂತ್ರ ಸರ್ಕಾರ ಬರಬೇಕು. ನನಗೆ ಸ್ಪಷ್ಟ ಮಾಹಿತಿ ಇದೆ. ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಸೂರ್ಯೋದಯದಷ್ಟೇ ಸತ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿ. ಸೋಮಣ್ಣ, ಬಸವರಾಜ ಬೊಮ್ಮಾಯಿ ಇಲ್ಲಿಗೆ ಬಂದು ಹೋಗಿದ್ದಾರೆ. ವರುಣಾ ತಾಲೂಕು ಮಾಡುವುದಾಗಿ ಹೇಳಿದ್ದಾರೆ. ನಾಲ್ಕು ವರ್ಷ ನೀವೇ ಅಧಿಕಾರದಲ್ಲಿದ್ದಿರಿ.ಆಗ ಯಾಕೆ ಮಾಡಲಿಲ್ಲ ಎಂದು ಸಿದ್ಧರಾಮಯ್ಯ ಪ್ರಶ್ನಿಸಿದರು.

Leave a Reply

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?