ಬೆಂಗಳೂರು: ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಂವಿಧಾನದ ಆಶಯದೊಂದಿಗೆ ನಾವೆಲ್ಲರೂ ಮುಂದೆ ಸಾಗೋಣ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ತಾಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 134 ನೇ ಜಯಂತಿ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ ಅವರ 118 ನೇ ಜಯಂತಿ ಅಂಗವಾಗಿ ಅವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿ ಕೊಟ್ಟಿರುವುದು ಭಾರತದ ಸಂವಿಧಾನ, ಅಂತಹ ಸಂವಿಧಾನ ಕೊಟ್ಟಿರುವುದು ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರು, ಶೋಷಿತರಿಗೆ, ಹಿಂದುಳಿದವರಿಗೆ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿಕೊಡಬೇಕು. ಸರ್ವರು ಸ್ವಂತಂತ್ರರರು, ಸರ್ವರು ಸಮಾನರು, ಸರ್ವರಿಗೂ ಸಮಾನ ನ್ಯಾಯ, ಎಲ್ಲರಿಗೂ ಸಮಾನ ಅವಕಾಶ ಸಿಗುವಂತಾಗಬೇಕು ಎಂಬ ತತ್ವದಡಿ ಸಂವಿಧಾನವನ್ನು ಅಂಬೇಡ್ಕರ್ ರೂಪಿಸಿದರು.
ಸಂವಿಧಾನದಿಂದ ಕೇವಲ ಒಂದು ಜಾತಿ, ಸಮುದಾಯ, ವರ್ಗಕ್ಕೆ ಸೀಮಿತವಾಗಿಲ್ಲ, ಭಾರತದ ಕೊಟ್ಟು ಕಡೆಯ ಪ್ರಜೆಗೂ ಸಮಾನ ಅವಕಾಶ ನೀಡಲಾಗಿದೆ. ಗುಣಮಟ್ಟದ ಶಿಕ್ಷಣ ಹಾಗೂ ಜ್ಞಾನ ವೃದ್ಧಿಯಿಂದ ಎಲ್ಲರಿಗೂ ಸಮಾನ ಅವಕಾಶ ಸಿಗುತ್ತದೆ ಎಂಬುದು ನನ್ನ ಭಾವನೆ ಎಂದರು.
ಸಂಸದ ಡಾ.ಕೆ.ಸುಧಾಕರ್ ಮಾತನಾಡಿ, ಇಂದು ಪ್ರಪಂಚದಾದ್ಯಂತ ವಿಶ್ವದ ಜ್ಞಾನ ದಿನ ಎಂದು ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲಾಗುತ್ತದೆ. ಇದು ನಮ್ಮೆಲ್ಲರಿಗೂ ಹೆಮ್ಮೆಯ ವಿಚಾರ, ಇವತ್ತು ಇಬ್ಬರು ಮಹಾನ್ ನಾಯಕರ ಜನುಮದಿನ. ಜತೆಗೆ ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವ, ಜ್ಞಾನ ಇವುಗಳ ತತ್ವಗಳನ್ನು ಆಚರಣೆ ಮಾಡುವ ದಿನವಾಗಿದೆ ಎಂದರು.
ಅಂಬೇಡ್ಕರ್ ಅವರ ಜೀವನವು ಬಹಳಷ್ಟು ಕಠಿಣವಾಗಿತ್ತು ಜಾತಿ ಪದ್ಧತಿ, ಶೋಷಣೆ, ನೋವು ಇವೆಲ್ಲವನ್ನೂ ಸಹಿಸಿಕೊಂಡು ದೇಶಕ್ಕೆ ಉತ್ತಮ ಸಂವಿಧಾನ ರಚಿಸಿದರು. ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್, ಕೊಲಂಬಿಯಾ ಯೂನಿವರ್ಸಿಟಿಯಲ್ಲಿ ಪಿ.ಎಚ್ಡಿ ಪಡೆದ ಮೊದಲ ಭಾರತೀಯ, ಮಹಾನ್ ನಾಯಕರ ಸಾಲಿನಲ್ಲಿದ್ದಾರೆ ಎಂದು ಹೇಳಿದರು.
ಇನ್ನು ದೇಶದ ಮಾಜಿ ಉಪ ಪ್ರಧಾನ ಮಂತ್ರಿಗಳಾದ ಬಾಬು ಜಗಜೀವನರಾಂ ಅವರು ಹಸಿರು ಕ್ರಾಂತಿಯ ಹರಿಕಾರ ಈ ದೇಶದ ಪ್ರಧಾನಿ ಆಗಲು ಅವಕಾಶ ಹಾಗೂ ಅರ್ಹತೆ ಇದ್ದರೂ ಸಹ ಅದೃಷ್ಟ ಇರಲಿಲ್ಲ. ಶೋಷಿತರಿಗೆ ಅಲ್ಲ ಮೇಲ್ಪಂಕ್ತಿಗಳಿಗೂ ಸಮಾನ ಅವಕಾಶ, ಸೌಲಭ್ಯ ಸಿಗುವಂತಾಗಬೇಕು ಎಂಬ ಆಲೋಚನೆ ಹೊಂದಿದ್ದರು. ಇವರಿಬ್ಬರ ಜೀವನಶೈಲಿ, ತತ್ವಾದರ್ಶಗಳನ್ನು ಜೀವನದಲ್ಲಿ ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದರು.
ನಂತರ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ.ನಾರಾಯಣಸ್ವಾಮಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ರಾಜಣ್ಣ, ಉಪಾಧ್ಯಕ್ಷ ನಾರಾಯಣಸ್ವಾಮಿ, ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಜಗನ್ನಾಥ, ಪುರಸಭೆ ಅಧ್ಯಕ್ಷ ಮುನಿಕೃಷ್ಣ, ತಹಸೀಲ್ದಾರ್ ಬಾಲಕೃಷ್ಣ ಇಒ ಶ್ರೀನಾಥ್ ಗೌಡ ಸೇರಿದಂತೆ ಸಂಘ ಸಂಸ್ಥೆಗಳ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
Related

You Might Also Like
NWKRTC: UPI ಮೂಲಕ ಹೆಚ್ಚು ಟಿಕೆಟ್ ವಿತರಿಸಿದ ನಿರ್ವಾಹಕರ ಅಭಿನಂದಿಸಿದ ಎಂಡಿ ಪ್ರಿಯಾಂಗಾ
ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಗಳಲ್ಲಿ ಪ್ರಯಾಣಿಕರಿಗೆ UPI ಮೂಲಕ ಹೆಚ್ಚು ಟಿಕೆಟ್ ವಿತರಣೆ ಮಾಡಿದ ನಿರ್ವಾಹಕರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ ಪ್ರಶಂಸನಾ...
KKRTC ಅಧಿಕಾರಿ-ಸಿಬ್ಬಂದಿಗಳು ಕಚೇರಿಗೆ ಭೇಟಿ ನೀಡುವಾಗ ಈ ನಿಯಮ ಪಾಲಿಸಬೇಕು: ಸಂಸ್ಥೆಯ ಎಂಡಿ ಸುಶೀಲಾ ನಿರ್ದೇಶನ
ಕಲಬುರಗಿ: ನಿಗಮದ ಅಧಿಕಾರಿ-ಸಿಬ್ಬಂದಿಗಳು ವೈಯಕ್ತಿಕ ಕಾರ್ಯಗಳಿಗಾಗಿ ಕಚೇರಿಗೆ ಭೇಟಿ ನೀಡುವಾಗ ಈ ನಿಯಮಗಳನ್ನು ಪಾಲಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಬಿ.ಸುಶೀಲಾ...
KSRTC ಬಡ ಸಾರಿಗೆ ನೌಕರರ ಮೇಲೆ ಎಸ್ಮಾ ಜಾರಿ ಸಲ್ಲ: ಸಾರಿಗೆ ಸಚಿವರು ಪರಿಶೀಲಿಸಿ- ಅಧಿವೇಶನದಲ್ಲಿ ಶಾಸಕರ ಆಗ್ರಹ
ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯಿಂದ ಕರ್ನಾಟಕ ರಾಜ್ಯ ಅತ್ಯವಶ್ಯಕ ಸೇವೆ ವಿಧೇಯಕವನ್ನು ಮಂಡಿಸುವ ಸಂದರ್ಭದಲ್ಲಿ ರಾಜ್ಯದ ಸಾರಿಗೆ ನೌಕರರ ಮೇಲೆ ಎಸ್ಮಾ ಕಾಯಿದೆಯನ್ನು ಜಾರಿ ಮಾಡುತ್ತಿರುವ ಬಗ್ಗೆ...
BMTC ಬಸ್ ಬಾಗಿಲಿಗೆ ಸಿಲುಕಿದ ಕೈ- ಬಿದ್ದು ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಸಾವು
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಎಲೆಕ್ಟ್ರಿಕ್ ಬಸ್ ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಮೃತಪಟ್ಟಿರುವ ಘಟನೆ ಇಂದು ಜಯನಗರದ 4ನೇ ಬ್ಲಾಕ್ನಲ್ಲಿ ನಡೆದಿದೆ. ಸಂಪಂಗಿ (64) ಮೃತಪಟ್ಟವರು....
ರೀಲ್ಸ್, ವಿಡಿಯೋ ಮಾಡುವ ವಕೀಲರಿಗೆ ಶಿಸ್ತು ಕ್ರಮದ ಎಚ್ಚರಿಕೆ ಕೊಟ್ಟ ವಕೀಲರ ಪರಿಷತ್
ಬೆಂಗಳೂರು: ವೃತ್ತಿನಿರತ ವಕೀಲರು ತಮ್ಮನ್ನು ತಾವೇ ಉನ್ನತೀಕರಿಸಿಕೊಳ್ಳುವಂತಹ ಪ್ರಚಾರದ ಯಾವುದೇ ರೀಲ್ಗಳು ಮತ್ತು ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ ಲೋಡ್ ಮಾಡಿದ್ದರೆ ಅಂತಹ ಆಕ್ಷೇಪಾರ್ಹ ರೀಲ್ಗಳು, ವಿಡಿಯೋಗಳನ್ನು...
KKRTC ಬಸ್ – ಟಿಪ್ಪರ್ ನಡುವೆ ಭೀಕರ ಅಪಘಾತ: ಕಂಡಕ್ಟರ್ ಸ್ಥಳದಲ್ಲೇ ಸಾವು, ಚಾಲಕ ಸೇರಿ ಹಲವರಿಗೆ ಗಾಯ
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಿರ್ವಾಹಕ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಚಿಲಕನಹಟ್ಟಿ (ಮರಿಯಮ್ಮನಹಳ್ಳಿ)...
KSRTC ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ: 2035ರವರೆಗೆ ಎಸ್ಮಾ ವಿಸ್ತರಣೆ – ಚರ್ಚೆ ಇಲ್ಲದೇ ಸದನದಲ್ಲಿ ವಿಧೇಯಕ ಅಂಗೀಕಾರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವ ಎಸ್ಮಾ ಕಾಯ್ದೆ 10 ವರ್ಷಗಳ ಅವಧಿಗೆ ವಿಸ್ತರಣೆಯಾಗುವ ಅತ್ಯಾವಶ್ಯಕ...
ರೈತರ ಸಮಸ್ಯೆ ಬಗೆ ಹರಿಸಲು ಒತ್ತಾಯಿಸಿ ಡಿಸಿ ಕಚೇರಿ ಮುಂದೆ ರೈತ ಮುಖಂಡರ ಪ್ರತಿಭಟನೆ
ಮೈಸೂರು: ರೈತರ ಸಮಸ್ಯೆ ಬಗೆ ಹರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ , ರಾಜ್ಯ ಕಬ್ಬು ಬೆಳೆಗಾರರ ಸಂಘದ...
KSRTC ನೌಕರರ ಸಾಮಾನ್ಯ ಮರಣ ಪ್ರಕರಣಕ್ಕಿದ್ದ 10 ಲಕ್ಷ ರೂ. ಪರಿಹಾರ ಮೊತ್ತ 14 ಲಕ್ಷ ರೂ.ಗಳಿಗೆ ಏರಿಸಿ ಎಂಡಿ ಆದೇಶ
ಪರಿಷ್ಕರಿಸಿದ 14 ಲಕ್ಷ ರೂ. ಪರಿಹಾರ ಮೊತ್ತ ಸೆಪ್ಟೆಂಬರ್ 1-2025ರಿಂದ ಜಾರಿ ಬೆಂಗಳೂರು: 10 ಲಕ್ಷ ರೂ.ಗಳಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಕುಟುಂಬ...