CrimeNEWSಬೆಂಗಳೂರು

ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಐವರು ಮೃತ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಿಂದ  ಐವರು ಮೃತಪಟ್ಟಿರುವ ಘಟನೆ  ಜಿಲ್ಲೆಯ ಚನ್ನಪಟ್ಟಣದ ಲಂಬಾಣಿ ತಾಂಡ್ಯದ ಸಮೀಪ ನಡೆದಿದೆ.

ಇನೋವಾ ಕ್ರಿಸ್ಟಾ ಕಾರಿಗೆ ಆಲ್ಟೋ ಕಾರು ಡಿಕ್ಕಿ ಹೊಡೆದು, ಅಪಘಾತದಲ್ಲಿ  ತಿ.ನರಸೀಪುರ ಮೂಲದ  ರವಿ ಪೂಜಾರ್​ (45), ಲಕ್ಷ್ಮೀ ಪೂಜಾರ್(40)​, ಇಂಚರಾ ಪೂಜಾರ್ (15) ಸ್ಥಳದಲ್ಲೇ  ಮೃತಪಟ್ಟರೆ ,  ಗಂಭೀರವಾಗಿ ಗಾಯಗೊಂಡಿದ್ದ ಶಾಂತಲಾ ಪೂಜಾರ್ ​(10), ಸಿರಿ ಪೂಜಾರ್ (3)  ಅವರು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.

ಅತೀ ವೇಗವಾಗಿ ಬಂದ ಆಲ್ಟೋ ಕಾರು ಮೊದಲು ರೋಡ್​ ಡಿವೈಡರ್​ಗೆ ಡಿಕ್ಕಿ ಹೊಡೆದು ಹಾರಿ ಬಳಿಕ ಇನೋವಾ ಕಾರಿಗೆ ಡಿಕ್ಕಿಯಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಆಲ್ಟೊ ಕಾರಿನಲ್ಲಿದ್ದ ತಂದೆ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದರು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ, ಚಿಕಿತ್ಸೆ ಫಲಿಸದೆ ಆ ಇಬ್ಬರು ಮಕ್ಕಳು ಕೂಡ ಅಸುನೀದ್ದಾರೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹೆದ್ದಾರಿಯಲ್ಲೇ ಬಸ್ ಧಗಧಗ: ಚಲಿಸುತ್ತಿದ್ದ ಖಾಸಗಿ ಬಸ್ಸೊಂದು ಬೆಂಗಳೂರು – ಮೈಸೂರು ಹೆದ್ದಾರಿಯಲ್ಲೇ ಹೊತ್ತಿ ಉರಿದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗಣಂಗೂರು ಬಳಿ ನಡೆದಿದೆ. ಬೆಂಗಳೂರಿನಿಂದ ಮೈಸೂರಿಗೆ ಮದುವೆಗೆಂದು ಬಸ್‌ ಹೊರಟ್ಟಿತ್ತು.

ಬೆಂಕಿ ಕಾಣಿಸಿಕೊಳ್ತಿದ್ದಂತೆ ತಕ್ಷಣವೇ ಪ್ರಯಾಣಿಕರು ಕೆಳಗಿಳಿದಿದ್ದಾರೆ. ಅದೃಷ್ಟವಶಾತ್ ಭಾರೀ ದುರಂತ ತಪ್ಪಿದೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ