NEWSಬೆಂಗಳೂರುರಾಜಕೀಯ

ಪಾರದರ್ಶಕ ಚುನಾವಣೆ ನಡೆಸಲು ಜಿಲ್ಲಾಡಳಿತ ಯಂತ್ರ ಕಾರ್ಯೋನ್ಮುಖ: ಜಿಲ್ಲಾಧಿಕಾರಿ ಲತಾ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯನ್ನು ಪಾರದರ್ಶಕ ಹಾಗೂ ನಿಷ್ಪಕ್ಷಪಾತವಾಗಿ ನೆರವೇರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಯಂತ್ರ ಸಕಲ ರೀತಿಯಲ್ಲೂ ಕಾರ್ಯೋನ್ಮುಖವಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್. ಲತಾ ಹೇಳಿದ್ದಾರೆ.

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಆಯೋಗದಿಂದ ನೇಮಕಗೊಂಡ ಚುನಾವಣಾ ಸಾಮಾನ್ಯ ವೀಕ್ಷಕರು, ವೆಚ್ಚ ವೀಕ್ಷಕರು, ಪೊಲೀಸ್ ವೀಕ್ಷಕರಿಗೆ ಚುನಾವಣಾ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಲು ಜಿಲ್ಲಾಡಳಿತ ಭವನ ಸಭಾಂಗಣದಲ್ಲಿ ಇಂದು ಆಯೋಜಿಸಲಾಗಿದ್ದ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿರುವ 1137 ಮತಗಟ್ಟೆಗಳು, ಗ್ರಾಮಾಂತರ ಜಿಲ್ಲೆಯೊಂದಿಗೆ ಗಡಿ ಹಂಚಿಕೊಂಡಿರುವ ನೆರೆಯ ಜಿಲ್ಲೆಗಳ ಮಾಹಿತಿ, ಜಿಲ್ಲೆಯ ಒಟ್ಟು ಮತದಾರರು, 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ವಿಕಲಚೇತನರು, ಅವರಿಗೆ ಒದಗಿಸಲಾಗಿರುವ 12 D ನಮೂನೆ ಕುರಿತು ಮಾಹಿತಿಗಳನ್ನು ಹಂಚಿಕೊಂಡರು.

ಜಿಲ್ಲೆಯಲ್ಲಿನ ಸೂಕ್ಷ್ಮ ಮತಗಟ್ಟೆಗಳು, ವೆಚ್ಚ ಸೂಕ್ಷ್ಮ ಪ್ರದೇಶಗಳ ಬಗ್ಗೆ ವೀಕ್ಷಕರಿಗೆ ಮಾಹಿತಿ, ಜಿಲ್ಲೆಯ ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಸೌಲಭ್ಯ ಅಳವಡಿಸಿರುವ ಹಾಗೂ ಮತಗಟ್ಟೆಗಳಲ್ಲಿ ವಿಡಿಯೋ ಚಿತ್ರೀಕರಣ ಕಾರ್ಯದ ಬಗ್ಗೆಯೂ ವೀಕ್ಷಕರಿಗೆ ಮಾಹಿತಿ, ಜಿಲ್ಲೆಯಾದ್ಯಂತ ಇದುವರೆಗೆ ವಶಪಡಿಸಿಕೊಂಡ ನಗದು, ಮದ್ಯ, ಮಾದಕ ವಸ್ತುಗಳು, ಮನೆಬಳಕೆ ಸಾಮಗ್ರಿಗಳು ಬಗ್ಗೆ ವೀಕ್ಷಕರಿಗೆ ಮಾಹಿತಿ ನೀಡಿದರು.

ಪೊಲೀಸ್ ವೀಕ್ಷಕರಾದ ರೋಮಿಲ್ ಬಾನಿಯ ಮಾತನಾಡಿ, ಜಿಲ್ಲೆಯಲ್ಲಿ ನಿಯೋಜಿಸಲಾಗಿರುವ ಪೊಲೀಸ್ ಸಿಬ್ಬಂದಿ ಹಾಗೂ ಭದ್ರತಾ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದುಕೊಂಡರು.

ಸಭೆಯಲ್ಲಿ ಹೊಸಕೋಟೆ ಹಾಗೂ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ರೊನಾಲ್ಡೊ ರೋಸ್, ದೊಡ್ಬಳ್ಳಾಪುರ ಹಾಗೂ ನೆಲಮಂಗಲ ವಿಧಾನಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ಶಿಲ್ಪಾಗುಪ್ತ, ವೆಚ್ಚ ವೀಕ್ಷಕರುಗಳಾದ ಡಾ. ದಿನೇಶ್ ಕುಮಾರ್ ಬಿಸೇನ್, ಅತುಲ್ ಪಾಂಡೆ, ರಾಮಚಂದ್ರನ್ ಜಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಅಪರ ಜಿಲ್ಲಾಧಿಕಾರಿ ಎಚ್ ಅಮರೇಶ್, ನಾಲ್ಕು ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿಗಳು, ನೋಡಲ್ ಅಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ