NEWSನಮ್ಮರಾಜ್ಯರಾಜಕೀಯ

ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಗಳು ನಾಮಪತ್ರ ವಾಪಸ್‌ ಪಡೆಯುವರು: ಡಿಕೆಶಿ ವಿಶ್ವಾಸ

ವಿಜಯಪಥ ಸಮಗ್ರ ಸುದ್ದಿ

ಉಡುಪಿ: ಕಾಂಗ್ರೆಸ್‌ನಿಂದ ಬಿ ಫಾರಂ ಸಿಗದೆ ಬಂಡಾಯವೆದ್ದು ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ನ ಮಂದಿ ತಮ್ಮ ತಮ್ಮ ನಾಮಪತ್ರವನ್ನು ಇಂದು ವಾಪಸ್‌ ಪಡೆದುಕೊಳ್ಳಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರಿನಲ್ಲಿ ಸುದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆಯಲಿದ್ದಾರೆ. ಹಲವು ಕ್ಷೇತ್ರಗಳಲ್ಲಿ ಬಂಡಾಯ ಎದ್ದಿದ್ದ ನಾಯಕರ ಮನವೊಲಿಕೆ ಮಾಡಲಾಗಿದೆ. ಹೀಗಾಗಿ ಆ ಬಂಡಾಯ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆಯಲಿದ್ದಾರೆ ಎಂದರು.

ಇನ್ನು ರಾಜ್ಯದಲ್ಲಿ ಅತಿ ಭ್ರಷ್ಟ ಸರ್ಕಾರ ಎಂದರೆ ಅದು ಬಿಜೆಪಿ ಸರ್ಕಾರ. ಅವರದ್ದೇ ಪಕ್ಷದ ಆನೇಕ ನಾಯಕರು ಭ್ರಷ್ಟಾಚಾರದ ಬಗ್ಗೆ ಹೇಳಿದ್ದಾರೆ. 40 ಪರ್ಸೆಂಟ್ ಸರ್ಕಾರವನ್ನು ಕಿತ್ತೊಗೆಯಬೇಕು. ಭ್ರಷ್ಟಾಚಾರ ನಿರ್ಮೂಲನೆ ಮಾಡುವುದು ನಮ್ಮ ಗುರಿ ಎಂದು ಹೇಳಿದರು.

ಇನ್ನು  ಬಿಜೆಪಿಯ ಹಿಂದುತ್ವದ ಹೋರಾಟ ಫಲ ಕೊಡಲ್ಲ. ನಾವು ಜನರ ಬದುಕಿನ ಬಗ್ಗೆ ಮಾತನಾಡುತ್ತೇವೆ ಬಿಜೆಪಿಯವರು ಜನರ ಭಾವನೆಗಳ ಬಗ್ಗೆ ಮಾತನಾಡುತ್ತಾರೆ ಎಂದು ಕಿಡಿಕಾರಿದರು.

ಸಿಎಂ ಅಭ್ಯರ್ಥಿ ವಿಚಾರವಾಗಿ ಮಾತನಾಡಿದ ಶಿವಕುಮಾರ್, ನಾವು ರಾಜಕಾರಣಿಗಳು ಖಾವಿ ಹಾಕಿಲ್ಲ. ಬಿಳಿ ಬಟ್ಟೆ ಹಾಕಿದ್ದೇವೆ ಎಂದು ಮಾರ್ಮಿಕವಾಗಿ ಹೇಳಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು