CrimeNEWSನಮ್ಮರಾಜ್ಯ

ಬೆಳ್ಳಂಬೆಳಗ್ಗೆ ಭ್ರಷ್ಟರ ಬೇಟೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು – ರಾಜ್ಯದ ನಾನಾ ಭಾಗದಲ್ಲಿ ಏಕಕಾಲಕ್ಕೆ ದಾಳಿ, ಮಹತ್ವದ ದಾಖಲೆಗಳ ಪರಿಶೀಲನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿ ಇರುವಾಗಲೇ ರಾಜ್ಯದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ರಾಜ್ಯದ ರಾಜಧಾನಿ ಬೆಂಗಳೂರಿನ ಯಲಹಂಕದಲ್ಲಿರುವ ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ಅವರ ಮನೆ ಸೇರಿದಂತೆ ವಿವಿಧೆಡೆ ಸೋಮವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು, ಹಲವು ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.

ಅಕ್ರಮ ಆಸ್ತಿ ಗಳಿಕೆಯ ಆರೋಪದ ಮೇಲೆ ಎಸ್‌ಪಿ ಅಶೋಕ್ ನೇತೃತ್ವದಲ್ಲಿ ಪಾಲಿಕೆ ಅಧಿಕಾರಿ ಗಂಗಾಧರಯ್ಯ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಬ್ಬರು ಎಸ್‌ಪಿ, ಇಬ್ಬರು ಡಿವೈಎಸ್‌ಪಿ ಹಾಗೂ ಇನ್ಸ್‌ಪೆಕ್ಟರ್ ಸೇರಿದಂತೆ 15 ಜನ ಲೋಕಾಯುಕ್ತ ಅಧಿಕಾರಿಗಳ ತಂಡ ಮುಂಜಾನೆ 5 ಗಂಟೆಗೆ ದಾಳಿ ನಡೆಸಿ ಶೋಧ ಕಾರ್ಯದಲ್ಲಿ ತೊಡಗಿದೆ.

ಇನ್ನು ಗಂಗಾಧರಯ್ಯ ಅವರು ಬಿಬಿಎಂಪಿ ಟೌನ್ ಪ್ಲಾನಿಂಗ್‌ನಲ್ಲಿ ಅಸಿಸ್ಟೆಂಟ್ ಡೈರೆಕ್ಟರ್‌ರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಗಂಗಾಧರಯ್ಯ ನಿವಾಸ, ಮನೆಯ ಆವರಣ, ಕಾರು ಸೇರಿದಂತೆ ಎಲ್ಲೆಡೆ ಪರಿಶೀಲನೆ ನಡೆಸುತ್ತಿದ್ದಾರೆ.

ಬೀದರ್ ಜಿಲ್ಲೆಯಾದ್ಯಂತ 6 ಕಡೆ ದಾಳಿ: ಬೀದರ್ ಜಿಲ್ಲೆಯಾದ್ಯಂತ 6 ಕಡೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಮುಡಬಿ ಉಪ ತಹಸೀಲ್ದಾರ್ ವಿಜಯಕುಮಾರ್ ಸ್ವಾಮಿಯವರ ಆನಂದ್ ನಗರ ಹಾಗೂ ಬಸವಕಲ್ಯಾಣ ಪಟ್ಟಣದಲ್ಲಿರುವ ನಿವಾಸಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಅಲ್ಲದೇ ಅವರು ಕಾರ್ಯನಿರ್ವಹಿಸುವ ಮುಡುಬಿಯ ಕಚೇರಿ ಹಾಗೂ ಬಸವಕಲ್ಯಾಣ ಪಟ್ಟಣದ ಹೊಂದಿರುವ ಗ್ಯಾರೇಜ್ ಮೇಲೂ ದಾಳಿ ಮಾಡಿದ್ದಾರೆ.

ಸಣ್ಣ ನೀರಾವರಿ ಇಲಾಖೆ ಕಾರ್ಯ ನಿರ್ವಾಹಕ ಇಂಜಿನಿಯರ್ ಸುರೇಶ್ ಮೇದಾ ಅವರ ಗುರುನಗರದ ನಿವಾಸ ಹಾಗೂ ನೌಬಾದ್‍ನಲ್ಲಿರುವ ಕಚೇರಿ ಮೇಲೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಲೋಕಾಯುಕ್ತ ಎಸ್ಪಿ ಎ.ಆರ್ ಕರ್ನೂಲ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಎನ್.ಎಂ ಓಲೇಕಾರ್ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ದಾಳಿ ನಡೆದಿದೆ.

ಬಳ್ಳಾರಿ: ಜೆಸ್ಕಾಂ ಎಇಇ ಮನೆ ಮೇಲೆ ಬೆಂಗಳೂರು ಮತ್ತು ಬಳ್ಳಾರಿ ಲೋಕಾಯುಕ್ತ ಅಧಿಕಾರಿಗಳ ತಂಡದಿಂದ ದಾಳಿ ನಡೆದಿದೆ. ಬಳ್ಳಾರಿಯ ಎಇಇ ಕಾರ್ಯನಿರ್ವಹಿಸುವ ಹುಸೇನ್ ಸಾಬ್ ಅವರ ಬುಡಾ ಕಾಂಪ್ಲೆಕ್ಸ್‌ನಲ್ಲಿರುವ ಕಚೇರಿ ಹಾಗೂ ರಾಘವೇಂದ್ರ ಕಾಲೋನಿಯಲ್ಲಿರುವ ಮನೆ ಮತ್ತು ಶಿಡಿಗಿನಮೊಳದಲ್ಲಿರುವ ಮನೆಯ ಮೇಲೂ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆ ಸೇರಿದಂತೆ ವಿವಿಧೆಡೆ ಅಕ್ರಮ ಆಸ್ತಿ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಚಿತ್ರದುರ್ಗ: ಬಿಬಿಎಂಪಿ ಜೆಇಇಟಿ ಹನುಮಂತರಾಯ ಅವರ ಚಿತ್ರದುರ್ಗದ ಬೋಚಾಪುರದ ಫಾರಂ ಹೌಸ್ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್ಪಿ ವಾಸುದೇವ ನೇತೃತ್ವದಲ್ಲಿ ಪರಿಶೀಲನೆ ನಡೆಯುತ್ತಿದೆ.

ದಾವಣಗೆರೆ: ನಿವೃತ್ತ ಡಿಸಿಎಫ್ ನಾಗರಾಜ್ ಹಾಗೂ ಹೊಳಲ್ಕೆರೆ ತಹಸೀಲ್ದಾರ್ ನಾಗರಾಜ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಿಸಿಎಫ್ ಅವರ ಶಿವಮೊಗ್ಗ ಮನೆ ಹಾಗೂ ತಹಸೀಲ್ದಾರ್ ಅವರ ಶಿಕಾರಿಪುರದ ಮನೆಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.

ಅಲ್ಲದೆ ಡಿಸಿಎಫ್ ಅವರ ದಾವಣಗೆರೆ ಬಳಿಯ ತೋಟದ ಮನೆಯ ಮೇಲೂ ದಾಳಿ ನಡೆದಿದೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ನೇತೃತ್ವದಲ್ಲಿ ಇಪ್ಪತ್ತಕ್ಕೂ ಹೆಚ್ಚು ಅಧಿಕಾರಿಗಳಿಂದ ಏಳು ಕಡೆ ದಾಳಿ ನಡೆದಿದ್ದು ಪರಿಶೀಲನೆ ನಡೆಸಲಾಗುತ್ತಿದೆ.

ಕೋಲಾರ: ಬಂಗಾರಪೇಟೆಯಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಎನ್.ವೆಂಕಟೇಶಪ್ಪ ಅವರ ಮನೆ ಮೇಲೆ ಲೋಕಾ ದಾಳಿ ನಡೆದಿದೆ. ನಗರದಲ್ಲಿ ಮೂರು ಕಡೆ ಹಾಗೂ ಮುಳಬಾಗಿಲು ತಾಲೂಕಿನ ತಿಪ್ಪದೊಡ್ಡಿಯಲ್ಲಿ ಎರಡು ಕಡೆ, ಒಟ್ಟು ವೆಂಕಟೇಶಪ್ಪ ಅವರಿಗೆ ಸೇರಿದ ಐದು ಕಡೆ ಏಕಕಾಲಕ್ಕೆ ದಾಳಿ ನಡೆದಿದೆ.

ಕಳೆದ ಎಂಟು ವರ್ಷಗಳಿಂದ ಬಂಗಾರಪೇಟೆ ತಾಲೂಕು ಪಂಚಾಯಿತಿ ಇಒಆಗಿ ಕೆಲಸ ಮಾಡುತ್ತಿದ್ದ ವೆಂಕಟೇಶಪ್ಪ ಅವರಿಗೆ ಎರಡು ದಿನಗಳ ಹಿಂದೆಯಷ್ಟೇ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಗೆ ವರ್ಗಾವಣೆಯಾಗಿತ್ತು. ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತಿದೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್