NEWSಬೆಂಗಳೂರುರಾಜಕೀಯ

ಬಿಜೆಪಿಯವರು ಚುನಾವಣಾ ಪ್ರಚಾರಕ್ಕೆ ರಷ್ಯಾ, ಅಮೆರಿಕ ಪ್ರೆಸಿಡೆಂಟ್‌ನನ್ನೇ ಕರೆದುಕೊಂಡು ಬರಲಿ ಬಿಡಿ: ಎಚ್‌ಡಿಆರ್‌

ವಿಜಯಪಥ ಸಮಗ್ರ ಸುದ್ದಿ

ಹಾಸನ: ಬಿಜೆಪಿಯವರು ಚುನಾವಣಾ ಪ್ರಚಾರಕ್ಕೆ ರಷ್ಯಾ ಪ್ರೆಸಿಡೆಂಟ್‍ ಇಲ್ಲ ಅಮೆರಿಕ ಪ್ರೆಸಿಡೆಂಟ್‌ನನ್ನೇ ಕರೆದುಕೊಂಡು ಬರಲಿ. ನಮಗೆ ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಕ್ಷೇತ್ರದ ಜನರೇ ಎಲ್ಲ ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ಹೇಳಿದ್ದಾರೆ.

ಬೇಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಜಿಲ್ಲೆಗೆ ಭೇಟಿ ನೀಡುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ನಮಗೆ ಮಾಜಿ ಪ್ರಧಾನಿ ದೇವೇಗೌಡ ಅವರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಹಾಗೂ ಕ್ಷೇತ್ರದ ಜನರೇ ಸಾಕು. ಇವರೇ ನಮಗೆ ಚಾಣಕ್ಯರು, ನಮ್ಮ ಬಳಿ ಬೇರೆ ಚಾಣಕ್ಯರು ಯಾರೂ ಇಲ್ಲ ಎಂದು ಕುಟುಕಿದರು.

ಜೆಡಿಎಸ್ ಈ ಬಾರಿ 123 ಸೀಟ್‍ಗಳ ಟಾರ್ಗೆಟ್ ಮಾಡಿದೆ. ಈ ಚುನಾವಣೆಯಲ್ಲಿ ಬಹುಮತ ಕೊಡಿ ಎಂದು ಜನರ ಬಳಿ ಕೇಳಿದ್ದೇವೆ. ದೇವೇಗೌಡ ಅವರು, ಕುಮಾರಸ್ವಾಮಿಯವರು ಸಾಮಾನ್ಯ ರೈತನ ಮಕ್ಕಳು, ನಮಗೆ ಜನರ ಆಶೀರ್ವಾದ ಇರುವವರೆಗೂ ಯಾವುದೇ ತೊಂದರೆ ಆಗುವುದಿಲ್ಲ. ನಮಗೆ ಮತದಾರರ ಮೇಲೆ ನಂಬಿಕೆ ಇದೆ. ಈ ಬಾರಿ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುತ್ತಾರೆ ಎಂಬ ಭರವಸೆ ಇದೆ ಎಂದರು.

ರಾಜ್ಯದ ಜನ ಎರಡೂ ರಾಷ್ಟ್ರೀಯ ಪಕ್ಷಗಳ ಆಡಳಿತವನ್ನು ನೋಡಿದ್ದಾರೆ. ಇವೆರಡು ಪಕ್ಷಗಳನ್ನು ಸ್ವಲ್ಪ ದಿನ ವಿಶ್ರಾಂತಿಗೆ ಕಳುಹಿಸಬೇಕೆಂದು ತೀರ್ಮಾನ ಮಾಡಿದ್ದಾರೆ ಎಂದರು.

ಇನ್ನು ಕುಮಾರಸ್ವಾಮಿ ಹಾಗೂ ದೇವೇಗೌಡರ ಅವಧಿಯಲ್ಲಿ ಶಿಕ್ಷಣ ಕ್ಷೇತ್ರ, ಆರೋಗ್ಯ ಕ್ಷೇತ್ರ, ಗ್ರಾಮಗಳ ಅಭಿವೃದ್ಧಿ ಸೇರಿ ಐದು ಕಾರ್ಯಕ್ರಮಗಳನ್ನು ಜನ ಮೆಚ್ಚಿದ್ದಾರೆ. ನಮ್ಮ ರಾಜ್ಯ ಉಳಿಯಬೇಕು ಅದಕ್ಕಾಗಿ ದುಡಿಯುತ್ತೇವೆ ಎಂದು ಹೇಳಿದ್ದಾರೆ.

ಪ್ರೀತಂ ಗೌಡ ಸೈಲೆಂಟ್ ಆಗಿರುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರೀತಂ ಗೌಡರು ದೊಡ್ಡವರಿದ್ದಾರೆ. ಅವರ ಬಗ್ಗೆ ಮಾತನಾಡುವ ಶಕ್ತಿ ನನಗೆ ಇಲ್ಲ. ಅವರು ದೊಡ್ಡವರಿರುವಾಗ ಆ ಮಟ್ಟಕ್ಕೆ ನಾನು ಬೆಳೆದಿಲ್ಲ ಎಂದು ಹೇಳಿದರು.

Leave a Reply

error: Content is protected !!
LATEST
KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ