ನ್ಯೂಡೆಲ್ಲಿ: ಮುಸ್ಲಿಮರಿಗೆ ಶೇ.4 ಒಬಿಸಿ ಮೀಸಲಾತಿಯನ್ನು ರದ್ದುಗೊಳಿಸುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.
ಮುಸ್ಲಿಮರಿಗೆ ಶೇ.4 ಒಬಿಸಿ ಮೀಸಲಾತಿ ರದ್ದುಗೊಳಿಸುವ ಸರ್ಕಾರದ ನಿರ್ಧಾರ ಪ್ರಶ್ನಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್ ಮತ್ತು ಬಿ.ವಿ. ನಾಗರತ್ನ ಅವರನ್ನೊಳಗೊಂಡ ಪೀಠ ಅರ್ಜಿಯ ವಿಚಾರಣೆಯನ್ನು ಮೇ 9 ಕ್ಕೆ ಮುಂದೂಡಿದೆ.
ಈ ನಡುವೆ ಸರ್ಕಾರದ ಆದೇಶದ ಆಧಾರದ ಮೇಲೆ ಮೇ 9 ರವರೆಗೆ ಯಾವುದೇ ಪ್ರವೇಶ ಅಥವಾ ನೇಮಕಾತಿ ನಡೆಯುವುದಿಲ್ಲ ಎಂದು ಕರ್ನಾಟಕ ಸರ್ಕಾರ ಮತ್ತೊಮ್ಮೆ ಭರವಸೆ ನೀಡಿದೆ.
ಕರ್ನಾಟಕ ಸರ್ಕಾರವು ಮುಂದಿನ ವಿಚಾರಣೆಯ ದಿನಾಂಕದವರೆಗೆ ಮುಸ್ಲಿಮರಿಗೆ ಮೀಸಲಾತಿಯನ್ನು ರದ್ದುಗೊಳಿಸಿದ ಆದೇಶದ ಆಧಾರದ ಮೇಲೆ ಯಾವುದೇ ಹೊಸ ನೇಮಕಾತಿಗಳು ಅಥವಾ ಪ್ರವೇಶಗಳನ್ನು ಮಾಡಲಾಗುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್ ಮತ್ತು ಬಿ.ವಿ. ನಾಗರತ್ನ ಅವರ ಪೀಠಕ್ಕೆ ಸರ್ಕಾರ ಭರವಸೆ ನೀಡಿತು.