NEWSನಮ್ಮರಾಜ್ಯರಾಜಕೀಯ

ಪ್ರಣಾಳಿಕೆ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿ, ನಗದು ರಹಿತ ವೈದ್ಯಕೀಯ ಸೌಲಭ್ಯದ ಭರವಸೆ ನೀಡಿದ ಪಕ್ಷಗಳು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಇದೇ 10ರಂದು ನಡೆಯಲಿರುವ ರಾಜ್ಯದ 16ನೇ ವಿಧಾನಸಭಾ ಚುನಾವಣೆ ಹಿನ್ನೆಯಲ್ಲಿ ಪ್ರಮುಖ ಮೂರು ಪಕ್ಷಗಳು ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಕೆಲ ಬದಲಾವಣೆಗಳನ್ನು ತರುವುದಾಗಿ ತಮ್ಮ ಪ್ರಣಾಳಿಕೆಗಳಲ್ಲಿ ಭರವಸೆ ನೀಡಿವೆ.

ಅದರಲ್ಲಿ ಈಗಗಾಲೇ ಅಧಿಕಾರದಲ್ಲಿರುವ ಬಿಜೆಪಿಯು ನಮ್ಮ ಡಬಲ್‌ ಇಂಜಿನ್‌ ಸರ್ಕಾರವನ್ನು ರಾಜ್ಯಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ತಂದರೆ ಸಾರಿಗೆ ನಿಗಮಗಳಲ್ಲಿ ಎಲೆಕ್ಟ್ರಿಕ್‌ ಬಸ್‌ಗಳನ್ನು ಬಿಡುವುದಾಗಿ ಹೇಳಿದೆ. ಆದರೆ, ನೌಕರರಿಗೆ ಏನು ಸೌಲಭ್ಯ ನೀಡುತ್ತೇವೆ ಎಂದು ಭರವಸೆ ಕೊಟ್ಟಿಲ್ಲ. ಕಾರಣ ಈಗಾಗಲೇ ನೌಕರರು ಇಟ್ಟಿರುವ ಯಾವೊಂದು ಬೇಡಿಕೆಯನ್ನು ಬಿಜೆಪಿ ಈಡೇರಿಸಿಲ್ಲ.

ಇನ್ನು ಜೆಡಿಎಸ್‌ ಪಕ್ಷವೂ ಕೂಡ ತನ್ನ ಪಂಚರತ್ನ ಯೋಜನೆಯಡಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಾರಿಗೆ ನೌಕರರ ಬೇಡಿಕೆಯಂತೆ ಸಂಸ್ಥೆಯ ನೌಕರರಿಗೆ ಸರ್ಕಾರಿ ನೌಕರರಿಗೆ ಸರಿ ಸಮಾನ ವೇತನವನ್ನು ವೇತನ ಆಯೋಗ ಜಾರಿಯಾದಾಗ ಯಥಾವತ್ತಾಗಿ ಅಳವಡಿಸುವ ಜತೆಗೆ ನಗದು ರಹಿತ ವೈದ್ಯಕೀಯ ಸೌಲಭ್ಯಗಳನ್ನು ನೀಡುವುದಾಗಿ ಭರವಸೆ ನೀಡಿದೆ.

ಇನ್ನು ಕಾಂಗ್ರೆಸ್‌ ಪಕ್ಷವೂ ತನ್ನ ಪ್ರಣಾಳಿಕೆಯಲ್ಲಿ ಅದರಲ್ಲೂ ಪ್ರಮುಖವಾಗಿ ಸಾರಿಗೆ ನಿಗಮಗಳ ಉದ್ಯೋಗಿಗಳ ವೇತನ ಇತ್ಯಾದಿ ಸೌಲಭ್ಯಗಳನ್ನು ಸರ್ಕಾರಿ ಸಮಾನಾಂತರವಾದ ಹುದ್ದೆಗಳ ವೇತನಗಳಿಗೆ ಅನುಗುಣವಾಗಿ, ಆಯಾ ನಿಗಮಗಳ ಆಯವ್ಯಯಗಳ ಪತ್ರಗಳಲ್ಲಿ ಅಡಕವಾಗುವಂತೆ ಕಾರ್ಯಕ್ರಮ ರಚನೆ ಮಾಡಲಾಗುವುದು ಎಂದು ತಿಳಿಸಿದೆ.

ಒಟ್ಟಾರೆ, ಬಿಜೆಪಿಯು ಸಾರಿಗೆ ನೌಕರರು ಮತ್ತು ಅವರ ಕುಟುಂಬ ಹಾಗೂ ಸಂಬಂಧಿಕರ ವೋಟ್‌ಗಳನ್ನು ಗಮನದಲ್ಲಿ ಇಟ್ಟುಕೊಂಡಂತೆ ಕಾಣಿಸುತ್ತಿಲ್ಲ. ಹೀಗಾಗಿ ರಾಜ್ಯದ ಸುಮಾರು 1.25 ಲಕ್ಷ ನೌಕರರು ಮತ್ತು ಅವರ ಕುಟುಂಬ ಸದ್ಯರು ಸೇರಿದಂತೆ 7 ಲಕ್ಷಕ್ಕೂ ಹೆಚ್ಚು ವೋಟ್‌ಗಳನ್ನು ಕಳೆದುಕೊಳ್ಳುವಂತೆ ಕಾಣುತ್ತಿದೆ.

ಆದರೆ ಈ ಬಿಜೆಪಿಯ ನಡೆಯಿಂದ ಸಾರಿಗೆ ನೌಕರರು ಮತ್ತು ಅಧಿಕಾರಿಗಳು ಅಸಮಾಧಾನಗೊಂಡಿರುವುದರ ಲಾಭ ಪಡೆಯಲು ಜೆಡಿಎಸ್‌ ಮತ್ತು ಕಾಂಗ್ರೆಸ್‌ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಸಾರಿಗೆ ನೌಕರರಿಗೆ ಪ್ರತ್ಯೇಕವಾಗಿ ಭರವಸೆ ನೀಡಿದ್ದು, ನೌಕರರ ಸಮಸ್ಯೆ ಸ್ಪಂದಿಸುವ ಭರವಸೆ ನೀಡಿವೆ.

ನೌಕರರ ಮನಸ್ಸಿನ ಭಾವನೆಗಳನ್ನು ಅರಿತುಕೊಂಡಿರುವ ಜೆಡಿಎಸ್‌ ನೌಕರರು ಅವರ ಕುಟುಂಬ ಸದಸ್ಯರ 7 ಲಕ್ಷಕ್ಕೂ ಹೆಚ್ಚು ಮತಗಳನ್ನು ಪಡೆಯುವುದಕ್ಕೆ ಮುಂದಾಗಿದೆ. ಅದರಂತೆ ಕಾಂಗ್ರೆಸ್‌ ಕೂಡ ನಾವೇನು ಕಮ್ಮಿಯಿಲ್ಲ ಎಂಬಂತೆ ತಮ್ಮ ಪ್ರಣಾಳಿಕೆಯಲ್ಲಿ ಸಾರಿಗೆ ನೌಕರರಿಗೆ ಸರಿಸಮಾನ ವೇತನ ಕೊಡುವ ಭರವಸೆಯನ್ನು ಪ್ರಣಾಳಿಕೆಯಲ್ಲಿ ಅಳವಡಿಸಿ ಕೊಂಡಿದೆ.

ಒಟ್ಟಾರೆ, ಬಿಜೆಪಿ ಹೊರತುಪಡಿಸಿ ಉಳಿದ ಎರಡೂ ಪಕ್ಷಗಳು ಚುನಾವಣೆಯಲ್ಲಿ ಸಾರಿಗೆ ನೌಕರರು ಮತ್ತು ಅವರ ಕುಟುಂಬದವರ ವೋಟ್‌ಗಳನ್ನು ಪಡೆಯುವುದಕ್ಕೆ ಬೇಕಾದ ಸಿದ್ಧತೆ ಮಾಡಿಕೊಂಡಿದ್ದು, ಈ ಎರಡೂ ಪಕ್ಷಗಳು ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೊಳಿಸುವ ಬಗ್ಗೆ ನೀಡಿರುವ ಭರವಸೆಯಿಂದ ನೌಕರರು ಯಾರ ಕೈ ಹಿಡಿಯುವರೋ ಎಂಬುದರ ಬಗ್ಗೆ ಇದೇ ಮೇ 13ರವರೆಗೂ ಕಾದು ನೋಡಬೇಕಿದೆ.

Leave a Reply

error: Content is protected !!
LATEST
KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ...