NEWSನಮ್ಮರಾಜ್ಯಶಿಕ್ಷಣ-

ಮೇ 22ರಿಂದ ಜೂ.2ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 2023ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಮೇ 22ರಿಂದ ಜೂ.2ರವರೆಗೆ ನಡೆಯಲಿವೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವೇಳಾಪಟ್ಟಿ ಪ್ರಕಟಿಸಿದೆ.

ಕೆಲವು ಪರೀಕ್ಷೆಗಳು ಬೆಳಗ್ಗೆ 10.15ರಿಂದ 1.30 ಹಾಗೂ ಮತ್ತೆ ಕೆಲವು ಪರೀಕ್ಷೆ ಮಧ್ಯಾಹ್ನ 2.15ರಿಂದ 5.30ರ ವರೆಗೆ ನಡೆಯಲಿವೆ. ಮೇ 22- ಕನ್ನಡ, ಅರೇಬಿಕ್; ಮೇ 23- ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ ಪರೀಕ್ಷೆ ನಡೆಯಲಿದೆ.

ಇನ್ನು ಮೇ 24 – ಇಂಗ್ಲಿಷ್ (ಮಧ್ಯಾಹ್ನ- ಐಟಿ, ರೀಟೈಲ್, ಆಟೋ ಮೋಬೈಲ್, ಹೆಲ್ತ್ ಕೇರ್, ಬ್ಯೂಟಿ ಆ್ಯಂಡ್ ವೆಲ್‌ನೆಸ್), ಮೇ 25- ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ, ಮೇ 26- ಇತಿಹಾಸ, ಸಂಖ್ಯಾಶಾಸ್ತ್ರ, ಮೇ 27- ಹಿಂದಿ(ಮಧ್ಯಾಹ್ನ-ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್) ಪರೀಕ್ಷೆಗಳು ನಡೆಯಲಿವೆ.

ಮೇ 28ರಂದು ರಜೆ. ಮೇ 29ರಂದು ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ, ಮೇ 30- ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ, ಮೇ 31- ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ, ಜೂ.1 ತರ್ಕಶಾಸ್ತ್ರ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ, ಜೂ.2- ಅರ್ಥಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆಗಳು ನಡೆಯಲಿವೆ ಎಂದು ಮಂಡಳಿ ತಿಳಿಸಿದೆ.

Leave a Reply

error: Content is protected !!
LATEST
KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ...