NEWS

ಕನ್ನಡ – ತಮಿಳು ಸೌಹಾರ್ದತೆಗೆ ಧಕ್ಕೆ ತರುವ ಕಾಂಗ್ರೆಸ್ ಅಭ್ಯರ್ಥಿಯ ಪ್ರಚಾರ ಅಸಹ್ಯ- ಮೋಹನ್ ದಾಸರಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದ್ ಕುಮಾರ್ ತಮಿಳು ಭಾಷೆಗಳು ಹೆಚ್ಚಾಗಿ ಇರುವ ಪ್ರದೇಶಗಳ ಹೋದ ಕಡೆಯಲ್ಲೆಲ್ಲ ನಾನು ತಮಿಳಿಗ ನನಗೆ ವೋಟನ್ನು ನೀಡಿ, ತಮಿಳಿಗರು ಯಾರು ವಿಧಾನಸಭೆಯನ್ನು ಪ್ರವೇಶಿಸಿಲ್ಲ, ನನ್ನನ್ನು ಗೆಲ್ಲಿಸಿ ಎಂದು ಓಟ್‌ ಕೇಳುತ್ತಿರುವುದು ಅಸಾಂವಿಧಾನಿಕ ಹಾಗೂ ಭಾಷಾ ಭಾತೃತ್ವಕ್ಕೆ ಧಕ್ಕೆ ಉಂಟು ಮಾಡುವಂತಹ ಕಾರ್ಯ ಎಂದು ಎಎಪಿ ಅಭ್ಯರ್ಥಿ ಮೋಹನ ದಾಸರಿ ಆರೋಪಿಸಿದ್ದಾರೆ.

ಆಮ್ ಆದ್ಮಿ ಪಕ್ಷದ ಮಾಧ್ಯಮ ಕೇಂದ್ರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪಕ್ಷದ ಕಾರ್ಯಾಧ್ಯಕ್ಷರು ಹಾಗೂ ಸರ್ ಸಿ.ವಿ.ರಾಮನ್ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಮೋಹನ್ ದಾಸರಿ ಮಾತನಾಡಿದರು.

ಆನಂದ್ ಕುಮಾರ್ ಅವರಿಗೆ ತಾಕತ್ತಿದ್ದರೆ ತಾವು ಇದುವರೆಗೂ ಮರ್ಫಿ ಟೌನ್ ವಾರ್ಡ್ನಲ್ಲಿ ಮಾಡಿರುವಂತಹ ಸ್ಕೂಲು, ಆಸ್ಪತ್ರೆಗಳು, ರಸ್ತೆಗಳು ಒಳಚರಂಡಿಗಳ ಬಗ್ಗೆ ಮಾತನಾಡುವುದನ್ನು ಬಿಟ್ಟು ಈ ರೀತಿಯ ಕ್ಷುಲ್ಲಕ ಭಾಷಾ ರಾಜಕಾರಣಕ್ಕೆ ಇಳಿದಿರುವುದು ಅವರು ಖಂಡಿತ ಸೋಲುತ್ತಾರೆಂಬ ಭೀತಿಯ ಹೊರತು ಮತ್ತೇನಲ್ಲ’ ಎಂದು ಹೇಳಿದರು.

ಸರ್ ಸಿ.ವಿ.ರಾಮನ್ ನಗರ ಕ್ಷೇತ್ರ ಸರ್ವ ಭಾಷೆಗರ ಸರ್ವಧರ್ಮೀಯರ ಶಾಂತಿಯ ಪ್ರದೇಶ. ಕಾವೇರಿ ಗಲಾಟೆಯನ್ನು ಸೇರಿಸಿದಂತೆ ಯಾವುದೇ ರೀತಿಯ ತಮಿಳು ಮತ್ತು ಕನ್ನಡಿಗರ ಭಾತೃತ್ವಕ್ಕೆ ಧಕ್ಕೆಯಾಗದಂತೆ ಯಾವುದೇ ರೀತಿಯ ಸಣ್ಣ ಗಲಭೆಗಳು ಸಹ ಈ ಕ್ಷೇತ್ರದಲ್ಲಿ ಆಗಿಲ್ಲ. ಹೀಗಿರುವಾಗ ಆನಂದ್ ಕುಮಾರ್ ಅವರ ತಮಿಳು ಭಾಷಾ ಪ್ರಚಾರ ವೈಖರಿ ನಿಜಕ್ಕೂ ಅಸಹ್ಯ ತರಿಸುವಂತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Leave a Reply

error: Content is protected !!
LATEST
KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ...