ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ನಾಳೆ (ಮೇ 8) SSLC ಫಲಿತಾಂಶಗಳ ಘೋಷಣೆ ಮಾಡುವುದಾಗಿ ಇಂದು ತಿಳಿಸಿದೆ.
ಸೋಮವಾರ ಪರೀಕ್ಷೆ ಫಲಿತಾಂಶ ಪ್ರಕಟಿಸಲಿದ್ದು ಈ ಸಂಬಂಧ ನಾಳೆ ಬೆಳಗ್ಗೆ 10 ಗಂಟೆಗೆ ಮಂಡಳಿಯು ಮಹತ್ವದ ಸುದ್ದಿಗೋಷ್ಟಿ ಕರೆದಿದೆ.
ಪ್ರಸಕ್ತ ಸಾಲಿನ ಫಲಿತಾಂಶ ಬಿಡುಗಡೆ ಮಾಡಲು ಎಲ್ಲ ಸಿದ್ಧತೆಗಳನ್ನು ಮಂಡಳಿ ಮಾಡಿಕೊಂಡಿದ್ದು, ಸೋಮವಾರ ಮೇ 8ರಂದು ಬೆಳಗ್ಗೆ ರಾಜ್ಯದ 8 ಲಕ್ಷ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಹೊರಬೀಳಲಿದೆ. ಬೆಳಗ್ಗೆ 11 ಗಂಟೆಗೆ ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಎಸ್‌ಎಸ್ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ.
2022- 2023ನೇ ಸಾಲಿನ ಎಸ್‌ಎಸ್ಎಲ್‌ಸಿ ಪರೀಕ್ಷೆಗಳನ್ನು ಕಳೆದ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ನಡೆಸಲಾಗಿತ್ತು. ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯು ಏಪ್ರಿಲ್ 21ರಂದು ಆರಂಭವಾಗಿತ್ತು. ಮೇ 10ರಂದು ರಾಜ್ಯದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ. ಹೀಗಾಗಿ ಮತದಾನಕ್ಕೂ ಎರಡು ದಿನ ಮೊದಲೇ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುತ್ತಿದೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (KSEAB) ಅಧಿಕಾರಿಗಳು karresults.nic.in ಮತ್ತು kseab.karnataka.gov.in.ನಲ್ಲಿ SSLC ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. ಬಳಿಕ ವಿದ್ಯಾರ್ಥಿಗಳು ತಮ್ಮ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಡೌನ್‌ಲೋಡ್ ಮಾಡಲು ಎಸ್‌ಎಸ್‌ಎಲ್‌ಸಿ ಹಾಲ್ ಟಿಕೆಟ್ ಸಂಖ್ಯೆ, ಹುಟ್ಟಿದ ದಿನಾಂಕ ಹಾಗೂ ಇತರ ವಿವರಗಳನ್ನು ನೀಡ ಬೇಕಿದೆ.
ವಿದ್ಯಾರ್ಥಿಗಳು ಫಲಿತಾಂಶ ನೋಡುವುದು ಹೇಗೆ?
1. ಮೊದಲು ವಿದ್ಯಾರ್ಥಿಗಳು karresults.nic.in ಅಧಿಕೃತ ವೆಬ್‌ಸೈಟ್ ತೆರೆಯಬೇಕು.
-
ಮುಖಪುಟದಲ್ಲಿ ಕರ್ನಾಟಕ ಎಸ್‌ಎಸ್‌ಎಲ್‌ಸಿ 2023 ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.
-
ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ವಿವರಗಳನ್ನು ನೀಡಬೇಕು.