NEWSನಮ್ಮರಾಜ್ಯಶಿಕ್ಷಣ-

ಹೊರಬಿದ್ದ ಎಸ್‌ಎಸ್‌ಎಲ್‌ಸಿ ಫಲಿತಾಂಶ: ಗ್ರಾಮೀಣಾ ಮಕ್ಕಳದೇ ಮೇಲುಗೈ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾತರದಿಂದ ಕಾದ SSLC ವಿದ್ಯಾರ್ಥಿಗಳ ಫಲಿತಾಂಶ (Result) ಬಿಡುಗಡೆಯಾಗಿದ್ದು, ಈ ಬಾರಿಯೂ ಗ್ರಾಮೀಣ ವಿದ್ಯಾರ್ಥಿಗಳೇ ಹೆಚ್ಚಿನ ಅಂಕ ಗಳಿಸಿದ್ದಾರೆ.

ನಗರದ ಭಾಗದ ವಿದ್ಯಾರ್ಥಿಗಳ ಫಲಿತಾಂಶ ಶೇ 79.62ರಷ್ಟು ದಾಖಲಾಗಿದೆ. ಇದಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಹೆಚ್ಚು ಉತ್ತೀರ್ಣರಾಗಿದ್ದು, ಅಂಕಿ ಅಂಶಗಳ ಪ್ರಕಾರ ಶೇ.87 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಿಂದ ನಗರ ಭಾಗದ ವಿದ್ಯಾರ್ಥಿಗಳಿಗಿಂತ ಗ್ರಾಮೀಣ ವಿಭಾಗದ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿದ್ದಾರೆ. ಒಟ್ಟು 34 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ದಾಖಲಾಗಿದೆ.

ಇನ್ನು ಚಿತ್ರದುರ್ಗ ಜಿಲ್ಲೆ ಇಡೀ ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿದೆ. ಮಂಡ್ಯ ಜಿಲ್ಲೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಇನ್ನು ಹಾಸನ ಜಿಲ್ಲೆ ಮೂರನೇ ಸ್ಥಾನದಲ್ಲಿದೆ. ಜಿಲ್ಲಾವಾರು ಫಲಿತಾಂಶ ನೋಡುವುದಾದರೆ ಚಿತ್ರದುರ್ಗವು ಶೇಕಡಾ 96.8 ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಪಡೆದಿದೆ. ಮಂಡ್ಯ ಜಿಲ್ಲೆ ಶೇಕಡಾ 96.74 ಫಲಿತಾಂಶದೊಂದಿಗೆ 2ನೇ ಸ್ಥಾನ ಗಳಿಸಿದೆ. ಶೇ 96.68 ಪಡೆದ ಹಾಸನವು ಮೂರನೇ ಸ್ಥಾನ ಪಡೆದಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ.

ಬೆಂಗಳೂರು ಗ್ರಾಮಾಂತರ ಶೇ. 96.78, ಚಿಕ್ಕಬಳ್ಳಾಪುರ ಶೇಕಡಾ 96.15, ಕೋಲಾರ ಶೇಕಡಾ 94.6, ಮೈಸೂರು ಶೇ.89.75, ಬೆಂಗಳೂರು ಪಶ್ಚಿಮ ಶೇ. 80.93, ಬೆಂಗಳೂರು ದಕ್ಷಿಣ ಶೇ. 78.95 ಫಲಿತಾಂಶ ಪಡೆದಿವೆ. ಇನ್ನು ಕೊನೆಯ ಸ್ಥಾನದಲ್ಲಿರುವ ಯಾದಗಿರಿ ಜಿಲ್ಲೆಯ ಫಲಿತಾಂಶ ಶೇ. 75.49 ಆಗಿದೆ.

ಇನ್ನು ಕಳೆದ ವರ್ಷಕ್ಕಿಂತ ಸ್ವಲ್ಪ ಫಲಿತಾಂಶ ಕಡಿಮೆಯಾಗಿದೆ. ಎಂದಿನಂತೆ ಬಾಲಕಿಯರು, ಗ್ರಾಮೀಣ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದು, 4 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ಟಾಪರ್ ಆಗಿದ್ದಾರೆ.

ಅದಲ್ಲಿ ಭೂಮಿಕಾ ಪೈ- ಬೆಂಗಳೂರಿನ ನ್ಯೂ ಮೆಕಾಲ ಇಂಗ್ಲಿಷ್ ಸ್ಕೂಲ್ ಹೊಸೂರು ರಸ್ತೆ, ಯಶಸ್ ಗೌಡ – ಬಾಲಗಂಗಾಧರನಾಥ ಹೈಸ್ಕೂಲ್ ಚಿಕ್ಕಬಳ್ಳಾಪುರ, ಅನುಪನಾ ಶ್ರೀಶೈಲ ಹಿರೇಹೋಳಿ- ಕುಮಾರೇಶ್ವರ ಶಾಲೆ ಸವದತ್ತಿ, ಭೀಮನಗೌಡ ಹನುಮಂತಗೌಡ ಪಾಟೀಲ್ – ಆಕ್ಸ್ ಫರ್ಡ್ ಇಂಗ್ಲಿಷ್ ಶಾಲೆ, ಮುದ್ದೇಬಿಹಾಳ ಪ್ರಥಮ ಸ್ಥಾನ ಪಡೆದಿದ್ದಾರೆ.

ಕಳೆದ ಮಾರ್ಚ್‌ನಲ್ಲಿ ನಡೆದಿದ್ದ SSLC ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ 83.89% ಫಲಿತಾಂಶ ಬಂದಿದ್ದು, ಕಳೆದ ಬಾರಿ ಫಲಿತಾಂಶಕ್ಕೆ ಹೋಲಿಕೆ ಮಾಡಿದ್ರೆ 1.24% ಫಲಿತಾಂಶ ಕಡಿಮೆ ಬಂದಿದೆ.

ಈ ಬಾರಿ 8,35,102 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇದರಲ್ಲಿ 7,00,619 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಶೇ. 83.89 ರಷ್ಟು ಫಲಿತಾಂಶ ಬಂದಿದೆ. 4,25,968 ಬಾಲಕರು ಪರೀಕ್ಷೆ ಬರೆದಿದ್ದು, ಇದರಲ್ಲಿ 3,41,108 ಬಾಲಕರು ತೇರ್ಗಡೆಯಾಗಿದ್ದಾರೆ ಶೇ. 80.08 ರಷ್ಟು ಬಾಲಕರು ತೇರ್ಗಡೆಯಾಗಿದ್ದಾರೆ. 4,09,134 ಬಾಲಕಿಯರು ಪರೀಕ್ಷೆ ಬರೆದಿದ್ದು 3,59,511 ವಿದ್ಯಾರ್ಥಿನಿಯರು ತೇರ್ಗಡೆಯಾಗಿದ್ದು, ಶೇ. 87.87ರಷ್ಟು ಫಲಿತಾಂಶ ಬಂದಿದೆ.

ನಗರ ಪ್ರದೇಶದಲ್ಲಿ 3,51,392 ವಿದ್ಯಾರ್ಥಿಗಳಲ್ಲಿ 2,79,773 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.79.62 ರ ಫಲಿತಾಂಶ ಪಡೆದರೆ, ಗ್ರಾಮೀಣ ಭಾಗದಲ್ಲಿ 4,83,710 ವಿದ್ಯಾರ್ಥಿಗಳಲ್ಲಿ 4,20,846 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.87 ರಷ್ಟು ಫಲಿತಾಂಶ ಪಡೆದಿದ್ದಾರೆ. ಈ ಬಾರಿಯೂ ಗ್ರಾಮೀಣ ವಿದ್ಯಾರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ. 1,517 ಸರ್ಕಾರಿ ಶಾಲೆ ಗಳಲ್ಲಿ ಶೇ.100 ರಷ್ಟು ಫಲಿತಾಂಶ ಪಡೆದಿದ್ದು, ಯಾವುದೇ ಸರ್ಕಾರಿ ಶಾಲೆ ಶೂನ್ಯ ಫಲಿತಾಂಶ ಪಡೆದುಕೊಂಡಿಲ್ಲ.

ಅನುದಾನಿತ ಶಾಲೆಗಳಲ್ಲಿ 482 ಶಾಲೆಗಳು ಶೇ.100 ರಷ್ಟು ಫಲಿತಾಂಶ ಪಡೆದಿದ್ದು, 11 ಶಾಲೆಗಳು ಶೂನ್ಯ ಫಲಿತಾಂಶ ಪಡೆದಿವೆ. ಅನುದಾನರಹಿತದಲ್ಲಿ 1824 ಶಾಲೆಗಳು ಶೇ.100ರಷ್ಟು ಫಲಿತಾಂಶ ಪಡೆದಿದ್ದು, 23 ಶಾಲೆಗಳು ಶೂನ್ಯ ಫಲಿತಾಂಶ ಪಡೆದುಕೊಂಡಿವೆ. ಒಟ್ಟು 3,823 ಶಾಲೆಗಳು ಶೇ.100ರಷ್ಟು ಫಲಿತಾಂಶ ಪಡೆದಿದ್ದು, 34 ಶಾಲೆಗಳು ಶೂನ್ಯ ಫಲಿತಾಂಶ ಪಡೆದುಕೊಂಡಿವೆ. ಕನ್ನಡದಲ್ಲಿ 14,983 ವಿದ್ಯಾರ್ಥಿಗಳು, ಇಂಗ್ಲಿಷ್‌ನಲ್ಲಿ 9,754, ಹಿಂದಿಯಲ್ಲಿ 16,170, ಗಣಿತ 2,132, ವಿಜ್ಞಾನ 983 ಹಾಗು ಸಮಾಜ ವಿಜ್ಞಾನದಲ್ಲಿ 8,311 ವಿದ್ಯಾರ್ಥಿಗಳು ಶೇ.100 ಅಂಕ ಪಡೆದುಕೊಂಡಿದ್ದಾರೆ.

ಈ ವರ್ಷ 10% ಅಂಕಗಳನ್ನು 3 ವಿಷಯಗಳಿಗೆ ಗ್ರೇಸ್ ರೂಪದಲ್ಲಿ ನೀಡಲಾಗಿದ್ದು, 59,246 ವಿದ್ಯಾರ್ಥಿಗಳು ಗ್ರೇಸ್ ಅಂಕ ಪಡೆದು ಪಾಸ್ ಆಗಿದ್ದಾರೆ. ಪೂರಕ ಪರೀಕ್ಷೆಗೆ ಮುಂದಿನ ವಾರ ವೇಳಾಪಟ್ಟಿ ಪ್ರಕಟ ಮಾಡಲಾಗುತ್ತೆ ಅಂತ ಅಧಿಕಾರಿಗಳು ತಿಳಿಸಿದ್ದಾರೆ.

ಫೋಟೋ ಕಾಪಿ ಪಡೆಯಲು ಕೊನೆ ದಿನ ಮೇ 14ಕ್ಕೆ ನಿಗದಿ ಮಾಡಲಾಗಿದೆ. ಮರು ಎಣಿಕೆ, ಮರು ಮೌಲ್ಯಮಾಪನಕ್ಕೆ ಕೊನೆ ದಿನ ಮೇ 21 ಹಾಗೂ ಪೂರಕ ಪರೀಕ್ಷೆಗೆ ನೋಂದಣಿಗೆ ಕೊನೆ ದಿನ ಮೇ 15ಕ್ಕೆ ನಿಗದಿ ಮಾಡಲಾಗಿದೆ.

Leave a Reply

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?