NEWSಆರೋಗ್ಯನಮ್ಮರಾಜ್ಯ

ರಾಜ್ಯದ 18ಮಂದಿಯಲ್ಲಿ ಕೊರೊನಾ

ಶುಕ್ರವಾರ ಬಿಡುವು ನೀಡಿದ ವೈರಸ್‌ ಶನಿವಾರ ಮೂವರನ್ನು ಆವರಿಸಿರುವ ಶಂಕೆ

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಬಳ್ಳಾಪುರ:  ಗೌರಿಬಿದನೂರಿನ ಇಬ್ಬರು ಮತ್ತು ಬೆಂಗಳೂರಿನಲ್ಲಿ ಒಬ್ಬರಿಗೆ ಕೊರೊನಾ ವೈರಸ್ ಶಂಕೆ ವ್ಯಕ್ತವಾಗಿದ್ದು ಕಟ್ಟೆಚ್ಚರ ವಹಿಸುವಂತೆ  ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಶನಿವಾರ  ಚಿಕ್ಕ ಬಳ್ಳಾಪುರದಲ್ಲಿ ಮಾತನಾಡಿ, ರಾಜ್ಯದಲ್ಲಿ ಇಂದು ಮೂರನ್ನು ಸೇರಿಸಿ ಒಟ್ಟು 18 ಮಂದಿಯಲ್ಲಿ ವೈರಸ್‌ ಪತ್ತೆಯಾಗಿದೆ. ಆದರೂ ಅವರೆಲ್ಲರೂ ಗುಣಮುಖರಾಗಲಿದ್ದು, ಅದಕ್ಕೆ ತಕ್ಕ ವ್ಯವಸ್ಥೆಯನ್ನು ಸರ್ಕಾರ ಮಾಡಲಿದೆ. ಅದಕ್ಕೆ ಅವರು ಮತ್ತು ಅವರ ಕುಟುಂಬದ ಸದಸ್ಯರು ಸ್ಪಂದಿಸಬೇಕು. ಈ ಬಗ್ಗೆ ಅಕ್ಕಪಕ್ಕದ ಮನೆಯವರು ಎಚ್ಚರಿಕೆ ವಹಿಸಬೇಕು  ಎಂದು ತಿಳಿಸಿದರು.

ಗೌರಿಬಿದನೂರು ತಾಲೂಕಿನ ಹಿರೇಬಿದನೂರಿನಲ್ಲಿರುವ ತಾಯಿ ಮತ್ತು ಮಗ ಇಬ್ಬರಿಗೆ ವೈರಸ್ ತಗುಲಿರುವ ಕುರಿತು ಶಂಕೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಪ್ರಾಥಮಿಕ ಹಂತವಾಗಿ ಅವರ ಜತೆ ಸಂಪರ್ಕ ಹೊಂದಿರುವವರು ಪತ್ತೆ ಹಚ್ಚಿ ಕ್ವಾರೆಂಟೈನ್ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಆ ಇಬ್ಬರಲ್ಲಿ ಕೊರೊನಾ ವೈರಸ್ ಸೋಂಕು ತಗುಲಿದೆ ಎಂಬ ಮಾಹಿತಿ ಬಂದಿದ್ದು, ಶನಿವಾರ ಸಂಜೆ ವೇಳೆ ವೈದ್ಯಕೀಯ ವರದಿ ಬರಲಿದ್ದು ನಂತರ ಅಧಿಕೃತವಾಗಿ ತಿಳಿಯಲಿದೆ  ಎಂದು  ಹೇಳಿದರು.

ಕೊರೊನಾ ವೈರಸ್ ತಡೆಗಟ್ಟಲು ಪಿಡಿಒಗಳು, ತಾಲೂಕು ಕಾರ್ಯನಿರ್ವಾಹಣಾಧಿಕಾರಿಗಳು ಮುಂಜಾಗ್ರತೆ ವಹಿಸಬೇಕು. ಈಗಾಗಲೇ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಮಾಡಲಾಗಿದೆ. ಈ ಸಮಿತಿ ಸೋಂಕು ಪತ್ತೆಯಾಗಿರುವವರು ವಾಸವಿರುವ ನಗರವನ್ನು ಕ್ವಾರೆಂಟೈನ್ ಮಾಡುವ ರೀತಿ ಕ್ರಮ ಕೈಗೊಳ್ಳಿ. ಪ್ರತಿ ಆಸ್ಪತ್ರೆಗಳಲ್ಲಿ, ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವ ವ್ಯಕ್ತಿಗಳು ಸ್ಯಾನಿಟೈಸರ್ ಬಳಸಿ ಒಳಗೆ ಪ್ರವೇಶ ಮಾಡಬೇಕು. ಅಧಿಕವಾಗಿ ಸಾರ್ವಜನಿಕರು ಸೇರುವ ಸ್ಥಳಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು ಎಂದು ತಿಳಿಸಿದರು.

 

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ