ಉಡುಪಿ: ಕುಂದಾಪುರ ಕ್ಷೇತ್ರದಲ್ಲಿ ಬಿಜೆಪಿಯ ಕಿರಣ್ ಕುಮಾರ್ ಕೊಡ್ಗಿ ಜಯ ಸಾಧಿಸಿದ್ದಾರೆ.
ಹಾಲಾಡಿ ಶ್ರೀನಿವಾಸ ಶೆಟ್ಟಿ ಕುಂದಾಪುರದ ವಾಜಪೇಯಿ ಎಂದೇ ಫೇಮಸ್. ಕಳೆದ ಐದು ಅವಧಿ ಅಂದರೆ 25 ವರ್ಷಗಳ ಕಾಲ ಹಾಲಾಡಿ ಶ್ರೀನಿವಾಸ ಶೆಟ್ಟಿ ಕುಂದಾಪುರದ ಶಾಸಕ.
ಈ ಬಾರಿ ಕೂಡ ಹಾಲಾಡಿ ಶ್ರೀನಿವಾಸ ಶೆಟ್ಟಿ ತನ್ನ ಕೊನೆಯ ಚುನಾವಣೆಯನ್ನು ಎದುರಿಸುತ್ತಾರೆ ಎಂಬ ಮಾತುಗಳಿದ್ದವು. ಆದರೆ ಹಾಲಾಡಿ ಶ್ರೀನಿವಾಸ ಶೆಟ್ಟಿ, ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದರು.
ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಮೂರನೇ ಹಣಕಾಸು ಆಯೋಗದ ಅಧ್ಯಕ್ಷರಾಗಿದ್ದ ಎ.ಜಿ ಕೊಡ್ಗಿ ರಾಜಕೀಯಕ್ಕೆ ಕರೆದುಕೊಂಡು ಬಂದಿದ್ದರು.
ಆರಂಭದ ಎರಡು ಅವಧಿಗಳಲ್ಲಿ ಹಾಲಾಡಿಯ ಗೆಲುವಿನ ಹಿಂದೆ ಕೊಡ್ಗಿ ಬೆಂಬಲ ಇತ್ತು. ಗುರುವಿನ ಋಣವನ್ನು ತೀರಿಸಲು ಎ ಜಿ ಕೊಡ್ಗಿ ಅವರ ಪುತ್ರ ಕಿರಣ್ ಕೊಡ್ಗಿ ಅವರಿಗೆ ಈ ಬಾರಿ ಕುಂದಾಪುರದ ಟಿಕೆಟ್ ಕೊಡಿಸಿದ್ದರು.