NEWSನಮ್ಮರಾಜ್ಯರಾಜಕೀಯ

ಹೀನಾಯವಾಗಿ ಸೋತ ಸಾರಿಗೆ ಸಚಿವ, ಬಿಜೆಪಿಯ ಬಳ್ಳಾರಿ ಗ್ರಾಮಾಂತರ ಅಭ್ಯರ್ಥಿ ಬಿ.ಶ್ರೀರಾಮುಲು

ವಿಜಯಪಥ ಸಮಗ್ರ ಸುದ್ದಿ

ಬಳ್ಳಾರಿ: ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಫಲಿತಾಂಶಕ್ಕಾಗಿ ರಾಜ್ಯ ಕಾಯುತ್ತಿದೆ. ಈ ನಡುವೆ ಸತತ ನಾಲ್ಕು ಬಾರಿ ಶಾಸಕ ಹಾಗೂ ಒಮ್ಮೆ ಸಂಸದರಾಗಿ ಆಯ್ಕೆಯಾಗಿದ್ದ ಬಿಜೆಪಿ ಪಕ್ಷದ ಅಭ್ಯರ್ಥಿ ಶ್ರೀರಾಮುಲು ಅವರು ಬಳ್ಳಾರಿ ಗ್ರಾಮೀಣದಲ್ಲಿ ಹೀನಾಯವಾಗಿ ಸೋತಿದ್ದಾರೆ.

ಕಳೆದ ಬಾರಿ ಮೊಳಕಾಲ್ಮೂರು, ಬಾದಾಮಿ ಎರಡೂ ಕಡೆ ನಿಂತು ಮೊಳಕಾಲ್ಮೂರಿನಲ್ಲಿ ಜಯ ಸಾಧಿಸಿದ್ದ ಬಿಜೆಪಿಯ ಮುಂಚೂಣಿ ನಾಯಕ ಬಿ. ಶ್ರೀರಾಮುಲು ಅವರು ಈ ಬಾರಿ ಹೀನಾಯ ಸೋಲು ಅನುಭವಿಸಿದ್ದಾರೆ. ಬಳ್ಳಾರಿ ಗ್ರಾಮಾಂತರದಲ್ಲಿ ಶ್ರೀರಾಮುಲು ವಿರುದ್ಧ ಕಾಂಗ್ರೆಸ್‍ನ ಹಾಲಿ ಶಾಸಕ ನಾಗೇಂದ್ರಗೆ ಭರ್ಜರಿ ಜಯ ಸಿಕ್ಕಿದೆ.

ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್‍ನ ನಾಗೇಂದ್ರಗೆ ಭರ್ಜರಿ ಗೆಲುವು ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ನಾಗೇಂದ್ರ ಅಭಿಮಾನಿಗಳು ಹಾಗೂ ಕೈ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ.

ಈ ಬಾರಿ ಕ್ಷೇತ್ರದಲ್ಲಿ ಒಟ್ಟು 8 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಕ್ಷೇತ್ರದಲ್ಲಿ ಒಟ್ಟು 1,16,096 ಪುರುಷ ಮತದಾರರು, 1,22,181 ಮಹಿಳೆಯರು, 49 ಇತರ ಮತದಾರರು ಸೇರಿ ಒಟ್ಟು 2,38,326 ಮತದಾರರು ಮತದಾನದ ಹಕ್ಕು ಹೊಂದಿದ್ದರು. ಮೇ 10ರಂದು ನಡೆದಿದ್ದ ಮತದಾನದ ವೇಳೆ ಕ್ಷೇತ್ರದಲ್ಲಿ ಶೇ.76.09ರಷ್ಟು ಸಾಧಾರಣ ಮತದಾನ ನಡೆದಿತ್ತು.

ಆರಂಭದಿಂದಲೂ ಹಿನ್ನಡೆ ಅನುಭವಿಸಿದ ಶ್ರೀರಾಮುಲು: ಮತ ಎಣಿಕೆ ಆರಂಭವಾದ ಸಮಯದಿಂದ ಬಿಜೆಪಿ ನಾಯಕರಿಗೆ ಶಾಕ್ ಆಗಿದ್ದು, ಪ್ರಮುಖ ನಾಯಕರೇ ಹಿನ್ನೆಡೆ ಸಾಧಿಸುತ್ತಿರುವುದು ಪಕ್ಷಕ್ಕೆ ತಲೆ ನೋವಾಗಿದೆ.

ಬಳ್ಳಾರಿಗ್ರಾಮೀಣ ಕ್ಷೇತ್ರದಲ್ಲಿ ಒಂಬತ್ತನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್‌ಅಭ್ಯರ್ಥಿ ನಾಗೇಂದ್ರ ಗೆಲುವಿನತ್ತ ಸಾಗಿದರು.

ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಸಚಿವ ಶ್ರೀರಾಮುಲುಗೆ ಹಿನ್ನಡೆಯಾಗುತ್ತಿದ್ದು, ಮೊದಲ ಸುತ್ತಿನಲ್ಲಿ ಕಾಂಗ್ರೆಸ್‌ಅಭ್ಯರ್ಥಿ ಬಿ.ನಾಗೇಂದ್ರ 5,862 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಶ್ರೀರಾಮುಲು 5032 ಮತಗಳನ್ನು ಪಡೆದಿದ್ದರು. 830 ಮತಗಳ ಅಂತರದಲ್ಲಿ ನಾಗೇಂದ್ರ ಮುನ್ನಡೆ ಸಾಧಿಸಿದ್ದರು.

ಮೂರನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್‌ಅಭ್ಯರ್ಥಿ ಬಿ.ನಾಗೇಂದ್ರ 15079 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಶ್ರೀರಾಮುಲು 12203 ಮತಗಳನ್ನು ಪಡೆದಿದ್ದರು. 2876 ಮತಗಳ ಅಂತರದಲ್ಲಿ ನಾಗೇಂದ್ರ ಮುನ್ನಡೆ ಸಾಧಿಸಿದ್ದರು.

ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಐದನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್‌ಅಭ್ಯರ್ಥಿ ಬಿ.ನಾಗೇಂದ್ರ 27,000 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಶ್ರೀರಾಮುಲು 18601 ಮತಗಳನ್ನು ಪಡೆದಿದ್ದು, 9199 ಮತಗಳ ಅಂತರದಲ್ಲಿ ನಾಗೇಂದ್ರ ಮುನ್ನಡೆ ಸಾಧಿಸಿದ್ದರು.

ಬಳ್ಳಾರಿ ಗ್ರಾಮೀಣ ಕ್ಷೇತ್ರದ ಒಂಬತ್ತನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್‌ಅಭ್ಯರ್ಥಿ ಬಿ.ನಾಗೇಂದ್ರ 54,889 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಶ್ರೀರಾಮುಲು 32160 ಪಡೆದಿದ್ದು, ಬರೋಬ್ಬರಿ 22,729 ಮತಗಳ ಅಂತರದಲ್ಲಿ ನಾಗೇಂದ್ರ ಮುನ್ನಡೆ ಸಾಧಿಸಿದ್ದಾರೆ.

ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ನಾಗೇಂದ್ರ ಗೆಲುವಿನತ್ತ ಸಾಗುತ್ತಿದ್ದರೆ, ಶ್ರೀರಾಮುಲುಗೆ ತೀವ್ರ ಹಿನ್ನಡೆಯಾಗಿದೆ. ಕ್ಷೇತ್ರದಲ್ಲಿ ಗೆಲುವಿನ ನಿರೀಕ್ಷೆಯಲಿದ್ದ ಶ್ರೀರಾಮುಲುಗೆ ಆಪ್ತಮಿತ್ರ ಜನಾರ್ದನ ರೆಡ್ಡಿ ಅವರ ನಡೆಯಿಂದ ಹಿನ್ನಡೆಯಾಗಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ತಮ್ಮ ತವರು ಜಿಲ್ಲೆಯಾದ ಬಳ್ಳಾರಿಯಲ್ಲಿ ಹಿಡಿತ ಹೊಂದಿದ್ದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಯಕ ಜನಾರ್ದನ ರೆಡ್ಡಿ ಪರೋಕ್ಷವಾಗಿ ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ್ದಾರಾ ಎನ್ನುವ ಅನುಮಾನ ಮೂಡಿದೆ ಎನ್ನಲಾಗಿದೆ.

Leave a Reply

error: Content is protected !!
LATEST
ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ