NEWSನಮ್ಮರಾಜ್ಯ

ರಾಜ್ಯಪಾಲ ಥಾವರ್‌ಚಂದ್‌ ಗೆಲ್ಹೋಟ್‌ -ರೈತ ಮುಖಂಡರ ಭೇಟಿ : ಸಕ್ಕರೆ ಕಾರ್ಖಾನೆ ಮಾಲೀಕರು ಸಂಪುಟಕ್ಕೆ ಸೇರಬಾರದು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಕ್ಕರೆ ಕಾರ್ಖಾನೆ ಮಾಲೀಕರು ರಾಜ್ಯ ಸರ್ಕಾರದ ಸಚಿವ ಸಂಪುಟಕ್ಕೆ ಸೇರುವುದನ್ನು ತಪ್ಪಿಸಿ. ಈ ಮೂಲಕ ರಾಜ್ಯದ 30 ಲಕ್ಷ ರೈತರ ಬದುಕು ಸಂರಕ್ಷಿಸಿ ಎಂದು ಹೊಸ ಸರ್ಕಾರಕ್ಕೆ ಸೂಚನೆ ಕೊಡುವಂತೆ ರಾಜ್ಯಪಾಲ ಥಾವರ್‌ಚಂದ್‌ ಗೆಲ್ಹೋಟ್‌ ಅವರನ್ನು ಭೇಟಿ ಮಾಡಿರೈತ ಮುಖಂಡರು ಮನವಿ ಮಾಡಿದ್ದಾರೆ.

ಇಂದು ಬೆಳಗ್ಗೆ 11.30ಕ್ಕೆ ರಾಜ ಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ರೈತ ಮುಖಂಡರು, ನಾವು ನಿಮ್ಮ ಭೇಟಿಗೆ ಬಂದಾಗ ಕನಿಷ್ಠ 5 ಮಂದಿ ಮುಖಂಡರಿಗಾದರೂ ಅವಕಾಶ ನೀಡಬೇಕೆಂದು ಕೇಳಿದರು. ಅದಕ್ಕೆ ರಾಜ್ಯಪಾಲರು ಸಮ್ಮತಿಸಿ ಎಲ್ಲರನ್ನೂ ರಾಜ ಭವನದ ಒಳಗೆ ಆಹ್ವಾನಿಸಿದರು.

ಈ ವೇಳೆ ಸುಮಾರು 15 ನಿಮಿಷಗಳ ಕಾಲ ಎಲ್ಲ ಮುಖಂಡರ ಪರಿಚಯ ಮಾಡಿಕೊಂಡು ಕೃಷಿ ಚಟುವಟಿಕೆಯ ಬಗ್ಗೆ ಪ್ರತಿಯೊಬ್ಬರಿಂದಲೂ ತಿಳಿದುಕೊಂಡರು. ಅವರ ಸರಳತೆ ಮತ್ತು ರೈತರ ಮೇಲೆ ಇರುವ ಪ್ರೀತಿ ನಿಜಕ್ಕೂ ಮೆಚ್ಚುವಂಥದ್ದು ರೈತ ಮುಖಂಡರ ಎಲ್ಲ ಒತ್ತಾಯಗಳ ಬಗ್ಗೆ ಕಾನೂನು ರೀತಿಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಆರಂಭದಲ್ಲಿ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ರೈತರತ್ನ ಕುರುಬೂರು ಶಾಂತಕುಮಾರ್ ವಿವರವಾಗಿ ಸಮಸ್ಯೆ ತಿಳಿಸಿದರು.

ರಾಜ್ಯದಲ್ಲಿರುವ 78 ಸಕ್ಕರೆ ಕಾರ್ಖಾನೆಗಳಲ್ಲಿ ಎಲ್ಲ ರಾಜಕೀಯ ಪಕ್ಷಗಳ ಶಾಸಕರು ಮಾಲೀಕರು ಇರುವ ಕಾರಣ ಯಾವುದೇ ಸರ್ಕಾರ ಬಂದರೂ ಸಚಿವ ಸಂಪುಟದಲ್ಲಿ ಸೇರುವುದರಿಂದ 30 ಲಕ್ಷ ಕಬ್ಬು ಬೆಳೆಗಾರರ ರೈತರು ಸಂಕಷ್ಟ ಅನುಭವಿಸುವಂತಾಗಿದೆ ಎಂದು ತಿಳಿಸಿದರು.

ಇನ್ನು ಹಿ೦ದಿನ ಸರ್ಕಾರ ಕಬ್ಬಿನ ಎಫ್ ಆರ್ ಪಿ ದರವನ್ನು150 ರೂ. ಏರಿಕೆ ಮಾಡಿ ಆದೇಶ ಹೊರಡಿಸಲಾಗಿತ್ತು. ಅದಕ್ಕೆ ಉಚ್ಚ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದು ಹೆಚ್ಚುವರಿ ಹಣ ಪಾವತಿಸದೆ ರೈತರನ್ನು ಸಂಕಷ್ಟಕ್ಕೆ ತಳಿದ್ದಾರೆ. ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಕಬ್ಬಿನ ದರವನ್ನು 3800 ರಿಂದ 4500 ರೂ.ಗಳ ತನಕ ನೀಡುತ್ತಿದ್ದಾರೆ.

ಆದರೆ, ರಾಜ್ಯ ಸರ್ಕಾರ ಹೆಚ್ಚುವರಿ ಬೆಲೆ ನಿಗದಿ ಮಾಡಿದ ಹಿ೦ದಿನ ಎಲ್ಲ ವರ್ಷಗಳಲ್ಲೂ ಇದೇ ರೀತಿ ಚಟುವಟಿಕೆ ನಡೆಸುತ್ತಿದ್ದಾರೆ ಸರ್ಕಾರ ಜಿಲ್ಲಾಡಳಿತಕ್ಕೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರೂ, ಆ ಜಿಲ್ಲೆಯ ಉಸ್ತುವಾರಿ ಸಚಿವರು ಬಹಳಷ್ಟು ಸಾರಿ ಸಕ್ಕರೆ ಕಾರ್ಖಾನೆ ಮಾಲೀಕರು ಸಚಿವರಾಗಿರುವ ಕಾರಣ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷಿಸುತ್ತಿದ್ದಾರೆ ಎಂದು ಆರೋಪಿಸಿದರು.

ಸಕ್ಕರೆ ಅಭಿವೃದ್ಧಿ ಆಯುಕ್ತರು ಕೂಡ ಪದೇಪದೇ ಬದಲಾಗುತ್ತಿರುವುದರಿಂದ ಯಾವುದೇ ಕಾನೂನು ಆದೇಶಗಳನ್ನು ಸಮರ್ಪಕ ಜಾರಿ ಮಾಡುವಲ್ಲಿ ಸಾಧ್ಯವಾಗುತ್ತಿಲ್ಲ. ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಇಲಾಖೆ ಎಲ್ಲ ವಿಚಾರಗಳನ್ನು ಅರ್ಥ ಮಾಡಿಕೊಂಡು ಕ್ರಮ ಕೈಗೊಳ್ಳುವ ಹ೦ತಕ್ಕೆ ಹೋದಾಗ ಆ ಅಧಿಕಾರಿ ವರ್ಗಾವಣೆ ಮಾಡಲಾಗುತ್ತಿದೆ.

ಈ ಬಗ್ಗೆ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೂ ಮನವಿ ಸಲ್ಲಿಸಿದ್ದೇವೆ ಆದ್ದರಿಂದ ಇಲಾಖೆಯ ಮುಖ್ಯಸ್ಥರನ್ನು ಸರ್ಕಾರದ ಅಧಿಕಾರಿಗಳ ವರ್ಗಾವಣೆ ನಿಯಮದಂತೆ ಕನಿಷ್ಠ ಮೂರು ವರ್ಷಗಳು ಕಡ್ಡಾಯವಾಗಿ ಕಾರ್ಯನಿರ್ವಹಿಸಲು ಸಂಬಂಧಪಟ್ಟವರಿಗೆ ಸೂಚನೆ ನೀಡಬೇಕು. ಬ್ಯಾಂಕುಗಳಲ್ಲಿ ರೈತರು ಸಾಲ ಪಡೆಯಲು ಸಿಬಿಲ್ ಸ್ಕೋರ್ ಮಾನದಂಡವನ್ನು ಅನುಸರಿಸುತ್ತಿರುವ ಕಾರಣ ರೈತರಿಗೆ ಕೃಷಿ ಸಾಲ ಸಿಗುತ್ತಿಲ್ಲ. ಇದರಿಂದ ತುಂಬ ಸಂಕಷ್ಟ ಅನುಭವಿಸುವಂತಾಗಿದೆ. ರೈತರಿಗೆ ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ಮಾನದಂಡವನ್ನು ಕೈ ಬಿಡಲು ಸೂಚನೆ ನೀಡಬೇಕು ಎಂದು ಮನವಿ ಮಾಡಿದರು.

ಹಿಂದಿನ ಸರ್ಕಾರ ಜಾರಿಗೆ ತಂದಿದ್ದ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ರದ್ದು ಮಾಡಬೇಕು. ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯನ್ನುರದ್ದು ಮಾಡಬೇಕು, ಈ ಬಗ್ಗೆ ನೂತನ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.

ನಿಯೋಗದಲ್ಲಿ ರಾಜ್ಯ ರೈತ ಸಂಘದ ನಾರಾಯಣರೆಡ್ಡಿ, ಪ್ರಸನ್ನ ಕುಮಾರ್, ಶಿವಕುಮಾರ್, ರಾಜ್ಯ ಕಬ್ಬು ಬೆಳೆಗಾರರ ಸಂಘದ ಉಪಾಧ್ಯಕ್ಷ ದೇವಕುಮಾರ, ಕಾನೂನು ಸಲಹೆಗಾರರು ಕಿಸಾನ್, ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್ ಮು೦ತಾದವರು ಇದ್ದರು.

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?