CrimeNEWSದೇಶ-ವಿದೇಶ

ಮನಸ್ತಾಪ: ಪ್ರೇಯಸಿಯ ಹತ್ಯೆ ಮಾಡಿ ಬಳಿಕ ಪೊಲೀಸರಿಗೆ ಶರಣಾದ ಪ್ರಿಯಕರ !

ವಿಜಯಪಥ ಸಮಗ್ರ ಸುದ್ದಿ

ಕಾಸರಗೋಡು: ಪ್ರೀತಿಸುತ್ತಿದ್ದ ಪ್ರೇಮಿಗಳಿಬ್ಬರ ಮನೆಯವರ ನಡುವೆ ಉಂಟಾದ ಮನಸ್ತಾಪಕ್ಕೆ ಪ್ರೇಯಸಿಯನ್ನೇ ಕೊಲೆ ಮಾಡಿ ಪೊಲೀಸರಿಗೆ ಪ್ರಿಯಕರ ಶರಣಾಗಿರುವ ಘಟಕನೆ ಕಾಞ೦ಗಾಡ್‌ನಲ್ಲಿ ನಡೆದಿದೆ.

ಉದುಮ ಮಾಂಗಾಡ್‌ ನಿವಾಸಿ ಬ್ಯೂಟಿಶಿಯನ್ ದೇವಿಕಾ (24) ಕೊಲೆಯಾದ ಯುವತಿ. ಕೊಲೆ ಮಾಡಿದ ಪ್ರಿಯಕರ ಬೋವಿಕ್ಕಾನದ ಸತೀಶ್ ಭಾಸ್ಕರ್ (36) ಬಳಿಕ ಹೊಸದುರ್ಗ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ.

ಆರೋಪಿ ಕಾಞ೦ಗಾಡ್‌ನ ಖಾಸಗಿ ಸಂಸ್ಥೆಯಲ್ಲಿ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಈನಡುವೆ ಇವರಿಬ್ಬರಿಗೂ ಪ್ರೀತಿ ಅಂಕುರವಾಗಿದೆ.

ಬಳಿಕ ಇಬ್ಬರೂ ಚನ್ನಾಗಿಯೇ ಇದ್ದರು. ಆದರೆ, ಇಬ್ಬರ ಮನಯವರ ನಡುವೆ ಉಂಟಾದ ಮನಸ್ತಾಪದಿಂದ ಯುವಕ ಕುಪಿತಗೊಂಡು ತನ್ನ ಪ್ರೇಯಸಿಯನ್ನೇ ಹತ್ಯೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಇಬ್ಬರು ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಇತ್ತೀಚೆಗೆ ಮನಸ್ತಾಪ ಉಂಟಾಗಿತ್ತು ಎನ್ನಲಾಗಿದೆ. ಇಬ್ಬರ ಕುಟುಂಬದವರ ನಡುವೆ ಸಮಸ್ಯೆ ಉಂಟಾಗಿದ್ದು, ದೇವಿಕಾ ವಿರುದ್ಧ ಸತೀಶ್ ಭಾಸ್ಕರ್‌ನ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ಮೇಲ್ಪರಂಬ ಠಾಣಾ ಪೊಲೀಸರು ಎರಡು ಕುಟುಂಬದವರನ್ನು ಕರೆದು ಮಾತುಕತೆ ನಡೆಸಿದ್ದರು.

ಈ ಎಲ್ಲದರ ನಡುವೆ ಸತೀಶ್ ಕಳೆದ ಒಂದು ವಾರದಿಂದ ವಸತಿಗ್ರಹದಲ್ಲಿ ವಾಸವಾಗಿದ್ದ, ನಿನ್ನೆ ಮಧ್ಯಾಹ್ನ ದೇವಿಕಾಳನ್ನು ಆ ವಸತಿಗೃಹಕ್ಕೆ ಕರೆಸಿಕೊಂಡು ಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಇನ್ನು ಈ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕೊಲೆ ಮಾಡಿ ಶರಣಾದ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?