ನ್ಯೂಡೆಲ್ಲಿ: ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜತೆಗೆ ನಮ್ಮ ಎಲ್ಲ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ ಎಂದು ನೂತನ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ದೆಹಲಿಯ ಎಐಸಿಸಿ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮುಂದಿನ ಸಿಎಂ ಆಗಿ ಸಿದ್ದರಾಮಯ್ಯ ಅವರು ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಅಧಿಕೃತ ಘೋಷಣೆಯಾಗುತ್ತಿದ್ದಂತೆ ಈ ರೀತಿ ಟ್ವೀಟ್ ಮಾಡಿದ್ದಾರೆ ಸಿದ್ದರಾಮಯ್ಯ.
ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ.
ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ. pic.twitter.com/V0OoO7JUKQ
— Siddaramaiah (@siddaramaiah) May 18, 2023
ಇನ್ನು ಅವರಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೂಡ ಟ್ವೀಟ್ ಮಾಡಿದ್ದು ಕರ್ನಾಟಕದ ಸುಭದ್ರ ಭವಿಷ್ಯ ಮತ್ತು ನಮ್ಮ ಜನಕಲ್ಯಾಣ ನಮ್ಮ ಪ್ರಮುಖ ಆದ್ಯತೆಯಾಗಿದೆ ಮತ್ತು ಅದನ್ನು ಖಾತರಿಪಡಿಸುವಲ್ಲಿ ನಾವು ಒಗ್ಗಟ್ಟಾಗಿದ್ದೇವೆ ಎಂದು ತಿಳಿಸಿದ್ದಾರೆ.
Karnataka's secure future and our peoples welfare is our top priority, and we are united in guaranteeing that. pic.twitter.com/sNROprdn5H
— DK Shivakumar (@DKShivakumar) May 18, 2023