NEWSನಮ್ಮಜಿಲ್ಲೆನಮ್ಮರಾಜ್ಯ

ಹತ್ತು ವರ್ಷ ನಿರಂತರವಾಗಿ ಸೇವೆ ಸಲ್ಲಿಸಿದ ಉದ್ಯೋಗಿ ಕಾಯಂಗೆ ಅರ್ಹ: ಹೈಕೋರ್ಟ್‌ ಮಹತ್ವದ ತೀರ್ಪು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹತ್ತು ವರ್ಷ ನಿರಂತರವಾಗಿ ಸೇವೆ ಸಲ್ಲಿಸಿದರೆ ಅಂಥ ಉದ್ಯೋಗಿ ಕಾಯಂಗೆ ಅರ್ಹ ಎಂದು ಹೈಕೋರ್ಟ್‌ ಮಹತ್ವದ ತೀರ್ಪುನೀಡಿದೆ.

ದಿನಗೂಲಿ ಆಧಾರದಲ್ಲಿ ಸತತ 30 ವರ್ಷ ಅರಣ್ಯ ವೀಕ್ಷಕ/ ಚಾಲಕ ಉದ್ಯೋಗದಲ್ಲಿ ಕಾರ್ಯನಿರ್ವಹಿಸಿದ ದಿನಗೂಲಿ ನೌಕರನ ಸೇವೆ ಕಾಯಂಗೊಳಿಸಲು ರಾಜ್ಯ ಸರ್ಕಾರ ಮತ್ತು ಅರಣ್ಯ ಇಲಾಖೆಗೆ ಹೈಕೋರ್ಟ್ ಆದೇಶಿಸಿ ಮಹತ್ವದ ಆದೇಶ ಹೊರಡಿಸಿದೆ.

ಇನ್ನು ಮಂಜೂರಾತಿ ಹುದ್ದೆಯಲ್ಲಿ 10 ವರ್ಷ ನಿರಂತರವಾಗಿ ಕೆಲಸ ಮಾಡಿದ ಉದ್ಯೋಗಿ ಸೇವೆ ಕಾಯಂಗೆ ಅರ್ಹನಾಗುತ್ತಾನೆ ಎಂದು ಸ್ಪಷ್ಟಪಡಿಸಿರುವ ನ್ಯಾಯಪೀಠ ರಣ್ಯ ವೀಕ್ಷಕ/ ಚಾಲಕನಿಗೆ ನ್ಯಾಯ ದೊರಕಿಸಿಕೊಟ್ಟಿದೆ.

ತಮ್ಮ ಸೇವೆ ಕಾಯಂಗೊಳಿಸಲು ನಿರಾಕರಿಸಿ ಅರಣ್ಯ ಇಲಾಖೆ ನೀಡಿದ ಹಿಂಬರಹ ಮತ್ತು ಆ ಹಿಂಬರಹ ಪುರಸ್ಕರಿಸಿದ ಕರ್ನಾಟಕ ಆಡಳಿತಾತ್ಮಕ ನ್ಯಾಯಾಧೀಕರಣದ (ಕೆಎಟಿ) ಆದೇಶ ರದ್ದುಪಡಿಸುವಂತೆ ಕೋರಿ ಆನೇಕಲ್ ವಲಯದಲ್ಲಿ ಅರಣ್ಯ ವೀಕ್ಷಕರಾಗಿರುವ (ಫಾರೆಸ್ಟ್ ವಾಚರ್) ಪಿ.ಜುಂಜಪ್ಪ (53) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಮತ್ತು ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದಾರ್ ಅವರ ಪೀಠ ಈ ಆದೇಶ ಹೊರಡಿಸಿದೆ.

ಅರ್ಜಿದಾರರ ಪರ ವಕೀಲರು, ಜುಂಜಪ್ಪ ಕಾಯಂ ನೌಕರರಂತೆ 30 ವರ್ಷ ಅರಣ್ಯ ಇಲಾಖೆಯಲ್ಲಿ ಕೆಲಸ ನಿರ್ವಹಿಸಿದ್ದಾರೆ. ಸೇವೆ ಕಾಯಂಮಾತಿ ವಿಚಾರದಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಹಲವು ಆದೇಶದಲ್ಲಿ ನಿಗದಿಪಡಿಸಿದ ಮಾನದಂಡಗಳನ್ನು ಜುಂಜಪ್ಪ ಪೂರೈಸುತ್ತಾರೆ ಎಂದು ನ್ಯಾಯಪೀಠದ ಮುಂದೆ ದಾಖಲೆಗಳ ಸಹಿತ ವಾದ ಮಂಡಿಸಿದರು.

ಅಲ್ಲದೆ ಅವರ ಸೇವೆ ಕಾಯಂಗೊಳಿಸಲು ನಿರಾಕರಿಸುವುದು ಸಂವಿಧಾನದ ಪರಿಚ್ಛೇದ 14 ಮತ್ತು 16ರ ಉಲ್ಲಂಘನೆಯಾಗಿದೆ. ಮಂಜೂರಾದ ಹುದ್ದೆಗಳಲ್ಲಿ 10 ವರ್ಷ ನಿರಂತರವಾಗಿ ಸೇವೆ ಸಲ್ಲಿಸಿದವರ ಸೇವೆ ಕಾಯಂಗೊಳಿಸಬೇಕು ಎಂದು ಈಗಾಗಲೇ ಹೈಕೋರ್ಟ್ ಧಾರವಾಡ ನ್ಯಾಯಾಲಯವು ಆದೇಶಿಸಿದೆ ಎಂದು ವಿವರಿಸಿದ್ದರು.

Deva
the authorDeva

Leave a Reply

error: Content is protected !!
Latest news
KSRTC: ನೌಕರರ ವೇತನ ಹೆಚ್ಚಳ ಸಂಬಂಧದ ಹೋರಾಟ ನಿಲ್ಲುವುದಿಲ್ಲ ಹೈ ಕೋರ್ಟ್‌ ನಿರ್ದೇಶನದಂತೆ ಮುಂದುವರಿಯಲಿದೆ- ಚಂದ್ರಶೇಖರ... ಏ.29ರಂದು ಸಾರಿಗೆ ಸಚಿವರ ಅಧ್ಯಕ್ಷತೇಲಿ 2024ರ ಜ.1ರಿಂದ ನೌಕರರ ವೇತನ ಹೆಚ್ಚಳ, ಹಿಂಬಾಕಿ ಕುರಿತು ಮತ್ತೇ ಒಕ್ಕೂಟದ ಜತೆ ... ಏ.29ರ ಒಳಗೆ ರೈತರ ಖಾತೆಗೆ ಬಾಕಿ ಹಣ ಜಮಾ ಡಿಸಿ ಭರವಸೆ ಹಿನ್ನೆಲೆ ಧರಣಿ ತಾತ್ಕಾಲಿಕ ಮುಂದೂಡಿಕೆ: ಕುರುಬೂರು ಶಾಂತಕುಮಾರ್... ಇದ್ದಲ್ಲಿಂದಲೇ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮುಂದುವರಿಸುತ್ತೀರುವ ಸಾರಿಗೆ ನೌಕರರು: ಧರ್ಮ ಸಂಕಟದಲ್ಲಿ ಪೊಲೀಸರು ಮೈಸೂರು: ಹೆಚ್ಚುವರಿ ಹಣ 100 ರೂ. ಪಾವತಿಗೆ ಆಗ್ರಹಿಸಿ ರೈತರ ಅಹೋರಾತ್ರಿ ಧರಣಿ KSRTC: ಪ್ರಣಾಳಿಕೆ ಭರವಸೆ ಈಡೇರಿಸುವಂತೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ... KSRTC: ಅರಿಸಿನಕುಂಟೆಯಲ್ಲಿ ಪಾದಯಾತ್ರೆ ತಡೆದಿದ್ದ ಪೊಲೀಸರು ಸದ್ಯ ಫ್ರೀಡಂ ಪಾರ್ಕ್‌ನತ್ತ ಹೊರಟ ಸಾರಿಗೆ ನೌಕರರು ಸಾರಿಗೆ ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ, ಸಾರಿಗೆ ಸಚಿವರಿಗೆ ಮಾರ್ಗದರ್ಶನ ನೀಡುವಂತೆ ಹೈ ಕೋರ್ಟ್‌ ಸಿಜೆಗೆ ಲಿಖಿತ ಮನವ... KSRTC: ಬೆಂಗಳೂರಿಗೆ ಪಾದಯಾತ್ರೆ ಬರುತ್ತಿರುವ ಸಾರಿಗೆ ನೌಕರರ ಅರಿಸಿನಕುಂಟೆ ಬಳಿ ತಡೆದ ಪೊಲೀಸರು KSRTC: ಮುಂದಿನ ಚಕ್ರದ ಮುಡಿ ಕಟ್ಟಾಗಿ ಬಸ್‌ ಪಲ್ಟಿ- ಸಣ್ಣಪುಟ್ಟಗಾಯಗಳೊಂದಿಗೆ 74 ಪ್ರಯಾಣಿಕರು ಪಾರು