NEWSಆರೋಗ್ಯನಮ್ಮಜಿಲ್ಲೆ

ರಾಮನಗರ: ಮೇ 27ರಂದು ಮುಟ್ಟಿನ ಆರೋಗ್ಯ ಜಾಗೃತಿ

ವಿಜಯಪಥ ಸಮಗ್ರ ಸುದ್ದಿ

ರಾಮನಗರ:  ನಗರದ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜು, ರಾಯರದೊಡ್ಡಿ, ರಾಮನಗರ ಇಲ್ಲಿ ಅಂತಾರಾಷ್ಟ್ರೀಯ ಮುಟ್ಟಿನ ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ಮೇ 27ರಂದು ಹಮ್ಮಿಕೊಳ್ಳಲಾಗಿದೆ.

ಕೃಷ್ಣಾಪುರದೊಡ್ಡಿಯ ಕೆ.ಎಸ್.ಮುದ್ದಪ್ಪ ಸ್ಮಾರಕ ಟ್ರಸ್ಟ್, ಇಎಸ್‌ಎಎಫ್ ಇಂಡಿಯಾ, ಲೀವಬಲ್ ಸಿಟೀಸ್ ಪ್ರಾಜೆಕ್ಟ್ ಇಂಡಿಯಾ, ಹ್ಯುಮಾನಿಟಿ ಫಸ್ಟ್ ಫೌಂಡೇಷನ್-ಕರ್ನಾಟಕ ಹಾಗೂ ರಾಮನಗರ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜು ಸಂಯುಕ್ತವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ.

ರಾಮನಗರ ಮಾಜಿ ನಗರ ಸಭಾಧ್ಯಕ್ಷೆ ಬಿ.ಸಿ. ಪಾರ್ವತಮ್ಮ ಕಾರ್ಯಕ್ರಮ ಉದ್ಘಾಟನೆ ಮಾಡುವರು. ಪ್ರಾಂಶುಪಾಲರಾದ ಪ್ರೊ. ಮುದ್ದೀರಯ್ಯ ಅಧ್ಯಕ್ಷತೆ ವಹಿಸುವರು. ಸೈಕಿಯಾಟ್ರಿಕ್ ಸೋಷಿಯಲ್ ವರ್ಕರ್ ಪದ್ಮರೇಖ ಮುಟ್ಟಿನ ಆರೋಗ್ಯ ಜಾಗೃತಿ ಕುರಿತು ಉಪನ್ಯಾಸ ನೀಡುವರು.

ಕಾಲೇಜು ಮಹಿಳಾ ಸಬಲೀಕರಣ ಸಮಿತಿ ಸಂಚಾಲಕಿ, ಪ್ರೊ. ವೇದಾವತಿ, ಜಾನಪದ ವಿದ್ವಾಂಸ ಡಾ. ಎಂ.ಬೈರೇಗೌಡ, ಹ್ಯುಮಾನ್ಯಿ ಫಸ್ಟ್ ಫೌಂಡೇಷನ್ ಅಧ್ಯಕ್ಷ ಉದಯಕುಮಾರ್ ಅತಿಥಿಗಳಾಗಿ ಪಾಲ್ಗೊಳ್ಳುವರು.

Leave a Reply

error: Content is protected !!
LATEST
KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ...