NEWSಆರೋಗ್ಯನಮ್ಮಜಿಲ್ಲೆ

2025ರ ವೇಳೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಲೇರಿಯಾ ಮುಕ್ತ ಜಿಲ್ಲೆಯನ್ನಾಗಿಸುವ ಗುರಿ: ಜಿಲ್ಲಾಧಿಕಾರಿ ಆರ್.ಲತಾ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: 2025ರ ವೇಳೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಮಲೇರಿಯಾ ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯೊಂದಿಗೆ ಎಲ್ಲಾ ಇಲಾಖೆಗಳು ಸಮನ್ವಯ ಸಾಧಿಸಿ ಗುರಿ ಮುಟ್ಟುವಲ್ಲಿ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಕರೆ ನೀಡಿದರು.

ಜಿಲ್ಲಾಡಳಿತ ಭವನದ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ವಿಶ್ವ ಮಲೇರಿಯಾ ದಿನಾಚರಣೆ ಹಾಗೂ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯ ಅಂತರ್ ಇಲಾಖಾ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲೂಕು ಕೇಂದ್ರಗಳಲ್ಲಿ ರಕ್ತ ಲೇಪನ ಸಂಗ್ರಹ ಕಾರ್ಯ ಹೆಚ್ಚು, ಹೆಚ್ಚು ಆದಲ್ಲಿ ಮಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯಾ ಜ್ವರದಂತಹ ಪ್ರಕರಣಗಳನ್ನು ತ್ವರಿತವಾಗಿ ಪತ್ತೆ ಹಚ್ಚಿ ಶೀಘ್ರ ಚಿಕಿತ್ಸೆ ಕೈಗೊಳ್ಳಬಹುದು. ಆದ್ದರಿಂದ ಈ ಎಲ್ಲ ಜ್ವರ ಪ್ರಕರಣಗಳಿಗೆ ಸಂಬಂಧಿಸಿದಂತೆ ತ್ವರಿತವಾಗಿ ರಕ್ತ ಮಾದರಿ ಸಂಗ್ರಹಿಸಿ ಪ್ರಯೋಗಾಲಯಗಳಿಗೆ ತಲುಪಿಸಿ ರೋಗ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.

ಕಲ್ಲು ಗಣಿಗಾರಿಕೆಗಳು, ಕಟ್ಟಡ ನಿರ್ಮಾಣ ಪ್ರದೇಶಗಳು, ಹೊರ ರಾಜ್ಯಗಳಿಂದ ವಲಸೆ ಬರುವ ಕಾರ್ಮಿಕರಿಗೆ ಕಡ್ಡಾಯ ರಕ್ತಲೇಪನ ಸಂಗ್ರಹಿಸಿ ದೃಢಪಟ್ಟ ಪ್ರಕರಣಗಳಿಗೆ ವೈದ್ಯಾಧಿಕಾರಿಗಳು ತ್ವರಿತ ಚಿಕಿತ್ಸೆ ನೀಡುವಂತೆ ಸೂಚಿಸಿದರು.

ಸೊಳ್ಳೆ ಉತ್ಪತ್ತಿ ತಾಣಗಳಾದ ತೆರೆದ ತೊಟ್ಟಿ, ಮೇಲ್ಚಾವಣಿ ಇಲ್ಲದ ತೊಟ್ಟಿಗಳು ಕಿರು ನೀರು ಸರಬರಾಜು ಮಾಡುವಂತಹ ತೊಟ್ಟಿಗಳನ್ನು ಭದ್ರವಾದ ಮುಚ್ಚಳ ಅಥವಾ ಬಟ್ಟೆಯನ್ನು ಮುಚ್ಚಬೇಕು ಶಾಲೆ ಅಂಗನವಾಡಿ ಕೇಂದ್ರಗಳಲ್ಲಿ ತೆರೆದ ತೊಟ್ಟಿ ಗಳಿದ್ದಲ್ಲಿ ಮುಂಜಾಗ್ರತಾ ಕ್ರಮವಾಗಿ ಅವುಗಳ ಮೇಲ್ಭಾಗವನ್ನು ಮುಚ್ಚಲು ಕ್ರಮ ಕೈಗೊಳ್ಳಬೇಕು ಎಂದರು.

ಆರೋಗ್ಯ ಇಲಾಖೆ ಪೋಸ್ಟರ್, ಬ್ಯಾನರ್‌ಗಳ ಮೂಲಕ, ಮಾಹಿತಿ- ಶಿಕ್ಷಣ-ಸಂವಹನ(ಐ.ಇ.ಸಿ.) ಚಟುವಟಿಕೆಗಳ ಮೂಲಕ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಚ್ಚರಿಕೆ ಹಾಗೂ ಜನಜಾಗೃತಿ ಮೂಡಿಸಬೇಕು ಎಂದರು.

ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಧರ್ಮೇಂದ್ರ ಮಾತನಾಡಿ, ಮಲೇರಿಯಾ ಹಾಗೂ ಡೆಂಗ್ಯೂ ನಿಯಂತ್ರಣಕ್ಕೆ ವಿವಿಧ ಇಲಾಖೆಗಳ ಸಮನ್ವಯದಲ್ಲಿ ತೆಗೆದುಕೊಂಡ ಮುಂಜಾಗ್ರತೆಗಾಗಿ ಕುಡಿಯುವ ನೀರು ಸರಬರಾಜು ಮಾಡುವ ಮೊದಲು ಸೂಕ್ತ ವಾದ ಪ್ರಮಾಣದಲ್ಲಿ ಕ್ಲೋರಿನೇಷನ್ ಮಾಡುವುದು, ಗುಂಡಿಗಳು, ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಅಲ್ಲದೆ ಕೊಳವೆಬಾವಿಗಳಿಂದ ಅಥವಾ ಸಾರ್ವಜನಿಕ ನಲ್ಲಿಗಳಲ್ಲಿ ನೀರು ಸೋರಿಕೆಯಾಗುತ್ತಿದ್ದಲ್ಲಿ ದುರಸ್ತಿಗೊಳಿಸಿ ಸರಬರಾಜು ಮಾಡುವುದು, ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡುವುದು, ಸೊಳ್ಳೆ ಉತ್ಪತ್ತಿ ತಾಣಗಳನ್ನು ನಿವಾರಿಸುವ ನಿಟ್ಟಿನಲ್ಲಿ ಗ್ರಾಮ-ನಗರ ಪ್ರದೇಶಗಳಲ್ಲಿ ಗಳಲ್ಲಿ ಉತ್ಪತ್ತಿಯಾಗುವ ಘನ ತ್ಯಾಜ್ಯ ವಸ್ತುಗಳು, ನೀರು ಶೇಖರಣೆ ಗೊಳ್ಳುವ ಇತರೆ ಅನುಪಯುಕ್ತ ವಸ್ತುಗಳ ಸೂಕ್ತ ವಿಲೇವಾರಿ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಇನ್ನು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸೊಳ್ಳೆ ನಾಶಕ ದ್ರಾವಣ ಸಿಂಪಡಿಸುವುದು. ಸರ್ಕಾರಿ ಖಾಸಗಿ ಕಟ್ಟಡ ಕಾಮಗಾರಿಗಳಲ್ಲಿ ತೊಡಗುವ ವಲಸೆ ಕಾರ್ಮಿಕರನ್ನು ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ತಪಾಸಣೆ ಮಾಡುವುದು, ವಸತಿ ನಿಲಯಗಳ, ಸಮುಚ್ಚಯಗಳ ಒಳಾಂಗಣ ಹೊರಾಂಗಣಗಳಲ್ಲಿ ಶುಚಿತ್ವ ಕಾಪಾಡುವುದು, ಆಶಾ, ಅಂಗನವಾಡಿ ಕಾರ್ಯಕರ್ತೆಯರ ಸಹಯೋಗದಲ್ಲಿ ಸಾಂಕ್ರಾಮಿಕ ರೋಗಗಳ ಕುರಿತು ಜಾಗೃತಿ ಮೂಡಿಸುವುದು ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ರೋಗ ನಿಯಂತ್ರಣಕ್ಕೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ಸಮಗ್ರವಾಗಿ ವಿವರ ನೀಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ವಿಜಯೇಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆರೋಗ್ಯ ಕಾರ್ಯಕ್ರಮ ಅಧಿಕಾರಿಗಳು, ತಾಲೂಕು ಆರೋಗ್ಯ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ