CrimeNEWSದೇಶ-ವಿದೇಶ

ಮುಖ್ಯ- ಸಹಶಿಕ್ಷಕಿಯರ ನಡುವೆ ಜಗಳ – ಶಾಲೆ- ಬೀದಿಯಲ್ಲೂ ಕುಸ್ತಿ, ಹೊಡೆದಾಟ

ವಿಜಯಪಥ ಸಮಗ್ರ ಸುದ್ದಿ

ಪಾಟ್ನಾ: ಮಕ್ಕಳಿಗೆ ವಿದ್ಯೆಕಸಲಿಸುವ ಮೂಲಕ ಸಮಾಜದಲ್ಲಿ ಹೇಗಿರಬೇಕು ಎಂದು ಹೇಳಿಕೊಡುವ ಶಿಕ್ಷಕಿಯರಿಬ್ಬರು ಶಾಲೆಯಲ್ಲಿ ಬಡದಾಡಿಕೊಂಡಿದ್ದು ಸಾಲುದು ಎಂಬಂತೆ ಬಳಿಕ ಬೀದಿಯಲ್ಲೂ ಹೊಡೆದಾಡಿಕೊಂಡಿರುವ ಘಟನೆ ಬಿಹಾರದ ಪಾಟ್ನಾ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಕೌರಿಯಾ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಬಿಹ್ತಾ ಮಾಧ್ಯಮಿಕ ಶಾಲೆ ಮುಖ್ಯಶಿಕ್ಷಕಿ ಮತ್ತು ಸಹಾಯಕ ಶಿಕ್ಷಕಿಯರ ನಡುವೆ ನಡೆದ ಗಲಾಟೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಶಾಲಾ ಮುಖ್ಯಶಿಕ್ಷಕಿ ಕಾಂತಿ ಕುಮಾರಿ ಮತ್ತು ಶಿಕ್ಷಕಿ ಸುನಿತಾ ಕುಮಾರಿ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮುಖ್ಯ ಶಿಕ್ಷಕಿಗೆ ಸಹ ಶಿಕ್ಷಕಿಯೊಬ್ಬರು ಸಾಥ್‌ ನೀಡಿದ್ದು, ಇಬ್ಬರು ಸೇರಿ ಸಹ ಶಿಕ್ಷಕಿಗೆ ಮನ ಬಂದಂತೆ ಕೆಳಕ್ಕೆ ಕೆಡವಿಕೊಂಡು ಹೊಡೆದು ತಳಿಯುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವೀಡಿಯೋದಲ್ಲೇನಿದೆ..?: ಶಾಲೆಯ ಮೂವರು ಶಿಕ್ಷಕಿಯರು ಪರಸ್ಪರ ಜಗಳವಾಡುತ್ತಿದ್ದರೆ, ಶಾಲೆಯ ಒಳಗೆ ಆರಂಭವಾದ ಗಲಾಟೆ ಹೊರಗಿನ ಮೈದಾನದವರೆಗೂ ತಲುಪಿದ್ದು, ಕೆಳಗೆ ಬಿದ್ದುಕೊಂಡು ಮಣ್ಣಿನಲ್ಲೇ ಇಬ್ಬರು ಬಡಾದಾಡಿಕೊಳ್ಳುತ್ತಿದ್ದರೆ ಮತ್ತೊಬ್ಬ ಶಿಕ್ಷಕಿಯ ಪಾದರಕ್ಷೆಯಿಂದ ಹೊಡೆಯುತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ತರಗತಿಯಿಂದ ಒಬ್ಬರು ಹೊರಗೆ ಹೋಗುತ್ತಿರುವಾಗ ಮತ್ತೊಬ್ಬರು ಚಪ್ಪಲಿ ಹಿಡಿದುಕೊಂಡು ಓಡಿ ಬಂದು ಹೊಡೆದಾಗ ಜಗಳ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ವೇಳೆ ಮತ್ತೊಬ್ಬ ಶಿಕ್ಷಕಿ ಕೂಡ ಮುಖ್ಯ ಶಿಕ್ಷಕಿ ಪರ ನಿಂತಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಘಟನೆ ಬಗ್ಗೆ ಸುದ್ದಿಗಾರರು ಕ್ಷೇತ್ರ ಶಿಕ್ಷಣ ಅಧಿಕಾರಿಯನ್ನು ಕೇಳಿದಾಗ, ಇದು ಬಿಹ್ತಾ ಮಾಧ್ಯಮಿಕ ಶಾಲೆಯಲ್ಲಿ ನಡೆದಿದೆ ಎಂದು ಸ್ಪಷ್ಟಪಡಿಸಿದ್ದು, ಹಂಗಾಮಿ ಮುಖ್ಯಶಿಕ್ಷಕಿ ಮತ್ತು ಸಹ ಶಿಕ್ಷಕಿಯರ ನಡುವಿನ ವೈಯಕ್ತಿಕ ವಿವಾದದಿಂದ ಈ ವಾಗ್ವಾದ ಉಂಟಾಗಿದ್ದು, ಇದು ಸರ್ಕಾರದ ನಿಯಮಾವಳಿಗಳ ಉಲ್ಲಂಘನೆಯಾಗಿದೆ ಎಂದು ತಿಳಿಸಿದ್ದಾರೆ.

ಘಟನೆಯಲ್ಲಿ ಭಾಗಿಯಾಗಿರುವ ಶಿಕ್ಷಕರಿಗೆ ವಿವರಣೆ ನೀಡುವಂತೆ ಕೇಳಿ ಸಮನ್ಸ್ ನೀಡಲಾಗಿದೆ. ಅಧಿಕೃತ ಸೂಚನೆ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?