NEWSಮೈಸೂರುರಾಜಕೀಯ

ಕಾಂಗ್ರೆಸ್‌ 5 ಗ್ಯಾರಂಟಿ ಈಡೇರಿಸುತ್ತದೆ – ಬಿಜೆಪಿ ಕೊಟ್ಟ ಪ್ರತಿಯೊಬ್ಬರಿಗೂ ₹15 ಲಕ್ಷ, ಉದ್ಯೋಗ ಭರವಸೆ ಏನಾಯಿತು: ಎಚ್‌ಸಿಎಂ ಪ್ರಶ್ನೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಚುನಾವಣಾ ಪ್ರಣಾಳಿಕೆ ರಾಜಕೀಯ ಪಕ್ಷಗಳಿಗೆ ಬೈಬಲ್ ಇದ್ದ ಹಾಗೆ ಎಂದು ನೂತನ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್‌ ಕೊಟ್ಟ ಭರವಸೆಗಳನ್ನು ಸಿದ್ದರಾಮಯ್ಯ ನೆರೆವೇರಿಸಿದ್ದಾರೆ. ಆಗಲೂ ನುಡಿದಂತೆ ನಡೆದಿದ್ದೇವೆ. ಈಗಲೂ ಕೂಡ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಕೊಟ್ಟಿರು 5 ಗ್ಯಾರಂಟಿಗಳನ್ನು ಕೊಟ್ಟಿದ್ದೇವೆ, ಅದರಿಂದ ಹಿಂದೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

ಬಿಜೆಪಿ ಪ್ರತಿಯೊಬ್ಬರಿಗೆ 15 ಲಕ್ಷ ರೂ. ಹಾಗೂ ಉದ್ಯೋಗ ಕೊಡುತ್ತೇವೆ ಎಂದು 9 ವರ್ಷದ ಹಿಂದೆಯೇ ಹೇಳಿದ್ದರು. ಅದನ್ನು ಎರಡನೇ ಬಾರಿಗೆ ಅಧಿಕಾರಕ್ಕೆ ಬಂದರು ಅಂದರೆ ಇನ್ನೂ ನೆರವೇರಿಸಿಲ್ಲ ಆದರೂ ರಾಜ್ಯ ಬಿಜೆಪಿಯ ನಾಯಕರು ಅವರ ಪಕ್ಷದವರ ಭರವಸೆ ಈಡೇರಿಸದಿರುವ ಬಗ್ಗೆ ಕೇಳುವುದನ್ನು ಬಿಟ್ಟು ನಮ್ಮ ಗ್ಯಾರಂಟಿಗಳ ಬಗ್ಗೆ ಮಾತನಾಡುತ್ತಾರೆ. ಇದೇ ಇವರ ಸಂಸ್ಕೃತಿ ಎಂದು ಕಿಡಿಕಾರಿದರು.

ಇನ್ನು ನಾವು ಗ್ಯಾರಂಟಿಗಳನ್ನು ಕೊಟ್ಟಿದ್ದೇವೆ ಆ ಗ್ಯಾರಂಟಿಗಳನ್ನು ಜಾರಿ ಮಾಡಿಯೇ ತೀರುತ್ತೇವೆ. ಜುಲೈನಲ್ಲಿ ಬಜೆಟ್ ಮಾಡುತ್ತೇವೆ. 5 ಗ್ಯಾರಂಟಿಗಳನ್ನು ಕೊಡಲು ಎಲ್ಲ ಇಲಾಖೆಗಳಲ್ಲಿ ಹಣವನ್ನು ಹೊಂದಿಸಲಾಗುತ್ತಿದೆ, ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನ ಹಾಗೇ ನಡೆದುಕೊಳ್ಳುತ್ತದೆ ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಜನರು ಕೂಡ ಗಾಬರಿಗೊಳ್ಳುವ ಅಗತ್ಯವಿಲ್ಲ ಎಂದು ಹೇಳಿದರು.

ನಾಡಿನ ಮತದಾರ ಪ್ರಭುಗಳು ಬಿಜೆಪಿ ದುರಾಡಳಿತ, ಭ್ರಷ್ಟಾಚಾರವನ್ನು ಸೋಲಿಸಿ ಕಾಂಗ್ರೆಸ್‌ಗೆ ಅಧಿಕಾರ ಕೊಟ್ಟಿದ್ದಾರೆ. ನಮಗೆ ಬೆಂಬಲ ಕೊಟ್ಟ ಮತದಾರರು, ಲಕ್ಷಾಂತರ ಜನರು, ದಲಿತ ಮುಖಂಡರು ಹಾಗೂ ಬರಹಗಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಇನ್ನು ತಿ.ನರಸೀಪುರ ಕ್ಷೇತ್ರದ ಜನತೆಗೆ ವಿಶೇಷವಾದ ಧನ್ಯವಾದ ಸಲ್ಲಿಸುತ್ತೇನೆ. ಸರ್ಕಾರ ರಚನೆಯಾಗಿದೆ. ನಮ್ಮ ಮೇಲೆ ಸಾಕಷ್ಟು ಭರವಸೆ ಇಟ್ಟಿದ್ದಾರೆ. ರಾಜ್ಯದ ಹಣಕಾಸಿನ ಸ್ಥಿತಿ ಹದಗೆಟ್ಟಿದೆ. ರಾಜ್ಯದ ಆಡಳಿತ ಹಳಿ ತಪ್ಪಿದೆ. ಕಳೆದ ಮೂರು ವರ್ಷಗಳಿಂದ ಆಡಳಿತ ಯಂತ್ರ ಕುಸಿದಿದೆ ಅದನ್ನು ಸರಿ ದಾರಿಗೆ ತರಬೇಕಿದೆ ಎಂದು ಹೇಳಿದರು.

Leave a Reply

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?