CrimeNEWSದೇಶ-ವಿದೇಶ

ಅಪ್ರಾಪ್ತೆ ಮದುವೆಯಾಗಿ ಗರ್ಭಿಣಿ ಮಾಡಿದ ಆರೋಪ: ಅಪ್ರಾಪ್ತ ಹುಡುಗನ ಬಂಧನ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಅಪ್ರಾಪ್ತೆಯನ್ನು ಮದುವೆಯಾದ ಅಪ್ರಾಪ್ತನೊಂಬ್ಬ ಆಕೆಯನ್ನು ಗರ್ಭಿಣಿ ಮಾಡಿದ ಆರೋಪದ ಮೇಲೆ ಪೊಲೀಸರು ಬಂಧಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

ರಾಷ್ಟ್ರ ರಾಜಧಾನಿ ದೆಹಲಿಯ ಲಕ್ಷ್ಮೀನಗರದ ನಿವಾಸಿ 17 ವರ್ಷ ಅಪ್ರಾಪ್ತನೆ ಪೊಲೀಸರ ವಶದಲ್ಲಿರುವಾತ. ಲಾಲ್ ಬಹದ್ದೂರ್ ಶಾಸ್ತ್ರಿ ಆಸ್ಪತ್ರೆ ಸಿಬ್ಬಂದಿ ಪಿಸಿಆರ್ ಪೊಲೀಸರಿಗೆ ಕರೆ ಮಾಡಿದ್ದು, ಏಳು ತಿಂಗಳ ಅಪ್ರಾಪ್ತ ಗರ್ಭಿಣಿ ತಪಾಸಣೆಗಾಗಿ ಬಂದಿದ್ದಾಳೆ ಎಂದು ಮಾಹಿತಿ ನೀಡಿದ್ದಾರೆ.

ವಿಷಯ ತಿಳಿದ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವಿಚಾರಣೆ ನಡೆಸಿದಾಗ ಬಾಲಕಿ ತಾನು ಮತ್ತು ಸೋದರ ಸಂಬಂಧಿ ಪರಸ್ಪರ ಪ್ರೀತಿಸಿದ್ದು, 2022ರ ಆಗಸ್ಟ್ 25 ರಂದು ಪಶ್ಚಿಮ ಬಂಗಾಳದಲ್ಲಿ ಮದುವೆ ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾಳೆ.

ಬಳಿಕ ಜನವರಿಯಲ್ಲಿ ಪಶ್ಚಿಮ ಬಂಗಾಳದಿಂದ ದೆಹಲಿಗೆ ಬಂದ ನಾವು ಪಶ್ಚಿಮ ಜವಾಹರ್ ಪಾರ್ಕ್‌ನಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸಿಸುತ್ತಿದ್ದು, ಸದ್ಯ ನಾನು ಗರ್ಭಿಣಿಯಾಗಿರುವುದರಿಂದ ತಪಾಸಣೆಗಾಗಿ ಎಲ್‌ಬಿಎಸ್ ಆಸ್ಪತ್ರೆಗೆ ಬಂದಿದ್ದೇವೆ ಎಂದು ವಿವರಿಸಿದ್ದಾಳೆ.

ಇನ್ನು ಅಪ್ರಾಪ್ತ ವಯಸ್ಸಿನವಳಾಗಿದ್ದರಿಂದ ವೈದ್ಯರು ಸಖಿ ಕೇಂದ್ರಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

ಇದಕ್ಕೂ ಮುನ್ನ ಅಪ್ರಾಪ್ತೆಯ ಜತೆ ಸಮಾಲೋಚನೆ ನಡೆಸಿ ವೈದ್ಯಕೀಯ ಪರೀಕ್ಷೆಯ ನಂತರ ಆಕೆಯನ್ನು ಆಸ್ಪತ್ರೆಯ ನಿಗಾದಲ್ಲಿ ಇರಿಸಿಕೊಂಡಿರುವುದಾಗಿ ತಿಳಿದು ಬಂದಿದೆ. ಸದ್ಯ ಆಕೆಯ ಅಪ್ರಾಪ್ತ ಪತಿಯನ್ನು ಬಂಧಿಸಿ ಜುವೆನೈಲ್ ಜಸ್ಟೀಸ್ ಬೋರ್ಡ್ ಮುಂದೆ ಹಾಜರುಪಡಿಸಲಾಗಿದೆ. ಜೆಜೆಬಿ ಬಾಲಾಪರಾಧಿಯನ್ನು ಒಪ್ಪಂದದ ಮೇರೆಗೆ ಬಿಡುಗಡೆ ಮಾಡಿದ್ದು, ವಯಸ್ಸಿನ ಪರಿಶೀಲನೆಗಾಗಿ ಮುಂದಿನ ವಿಚಾರಣೆಯ ದಿನಾಂಕವನ್ನು ನಿಗದಿಪಡಿಸಿದೆ.

Leave a Reply

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?