CrimeNEWSಬೆಂಗಳೂರು

ಬ್ಯಾಂಕ್‍ನಲ್ಲಿ ವಿದ್ಯಾರ್ಥಿಗಳ ದಾಖಲೆಯಿಟ್ಟು ಕೋಟಿ ಕೋಟಿ ರೂ. ಸಾಲ ಪಡೆದ ಖತರ್ನಾಕ್ ವಂಚಕನ ಹೆಡೆಮುರಿ ಕಟ್ಟಿದ ಖಾಕಿಪಡೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಉಚಿತವಾಗಿ ವಿದ್ಯಾರ್ಥಿಗಳಿಗೆ ಶಿಕ್ಷಣ ಕೊಡಿಸುವುದಾಗಿ 18 ಕೋಟಿ ರೂ. ವಂಚಿಸಿದ ಆರೋಪಿಯ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಆಂಧ್ರಪ್ರದೇಶ ಮೂಲದ ಶ್ರೀನಿವಾಸುಲು ಎಂದು ಗುರುತಿಸಲಾಗಿದೆ. ಆರೋಪಿ ಡಾಟ ಸೈನ್ಸ್ ಕೋರ್ಸ್ ಮಾಡಿಸುವುದಾಗಿ ವಿದ್ಯಾರ್ಥಿಗಳಿಂದ ದಾಖಲೆಗಳನ್ನು ಪಡೆಯುತ್ತಿದ್ದ. ಬಳಿಕ ಅವುಗಳನ್ನು ಬ್ಯಾಂಕ್‍ನಲ್ಲಿಟ್ಟು ಲಕ್ಷಾಂತರ ರೂ. ಸಾಲ ಪಡೆಯುತ್ತಿದ್ದ ಎಂದು ಪೊಲೀಸರು ತನಿಖೆಯಿಂದ ಹೊರಬಿದ್ದಿದೆ.

ಆರೋಪಿ ಇದುವರೆಗೂ ಸುಮಾರು ಎರಡು ಸಾವಿರ ವಿದ್ಯಾರ್ಥಿಗಳಿಗೆ ವಂಚಿಸಿದ್ದಾನೆ ಎಂದು ತಿಳಿದು ಬಂದಿದೆ. ಈ ಪ್ರಕರಣದಲ್ಲಿ ಬ್ಯಾಂಕ್ ಸಿಬ್ಬಂದಿಯೂ ಭಾಗಿಯಾಗಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಂಚನೆ ಮಾಡಿದ್ದು ಹೇಗೆ?: ಈ ಶ್ರೀನಿವಾಸುಲು ಮೊದಲಿಗೆ ಉಚಿತ ಶಿಕ್ಷಣ ಕೊಡಿಸುವ ಹೆಸರಲ್ಲಿ ಅನೇಕ ಯುವಕ ಯುವತಿಯರನ್ನು ಆಕರ್ಶಿಸಿ ತನ್ನ ಸಂಸ್ಥೆಗೆ ಸೇರಿಕೊಳ್ಳುವಂತೆ ಮಾಡುತ್ತಿದ್ದ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಹೆಸರಲ್ಲಿ ಲೋನ್ ಪಡೆದುಕೊಂಡು “ನಾವೇ ಸಾಲವನ್ನು ಕಂತು ಕಂತಾಗಿ ತೀರಿಸುತ್ತೇವೆ” ಎಂದು ನಂಬಿಸುತ್ತಿದ್ದ.

ಆ ನಂತರ ಕೋರ್ಸ್​ಗೆ ಬೇಕಾದಂತಹ ಅಗತ್ಯ ದಾಖಲೆಗಳನ್ನು ಬ್ಯಾಂಕ್‌ಗಳಿಗೆ ಕೊಡಿಸುತ್ತಿದ್ದ. ಆದರೆ ಹಣವನ್ನು ಮಾತ್ರ ತನ್ನ ಖಾತೆಗೆ ವರ್ಗಾವಣೆ ಆಗುವಂತೆ ಮಾಡುತ್ತಿದ್ದ. ಕಡೆಗೆ ಸಾಲವನ್ನು ತೀರಿಸದೇ ಈತ ಒಟ್ಟು 18 ಕೋಟಿ ರೂ.ಗೂ ಹೆಚ್ಚು ಹಣವನ್ನು ವಂಚಿಸಿದ್ದಾನೆ ತಿಳಿದು ಬಂದಿದ್ದು, ಈ ನಿಟ್ಟಿನಲ್ಲಿ ಪೊಲೀಸರು ಕ್ರಮ ತೆಗೆದುಕೊಂಡು ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು