CrimeNEWSಆರೋಗ್ಯ

ಕಂಠಮಟ್ಟ ಕುಡಿದು ಬಂದ ವೈದ್ಯ: ಆಪರೇಷನ್ ಥಿಯೇಟರ್‌ನಲ್ಲೇ ಕುಸಿದುಬಿದ್ದ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಚಿಕ್ಕಮಗಳೂರು: ಆಪರೇಷನ್ ಥಿಯೇಟರ್‌ಗೆ ಕಂಠಪೂರ್ತಿ ಕುಡಿದು ಬಂದ ವೈದ್ಯ ಶಸ್ತ್ರಚಿಕಿತ್ಸೆ ಮಾಡಲಾಗದೆ ಕುಸಿದು ಬಿದ್ದಿರುವ ಘಟನೆ ಕಳಸ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ.

ಇನ್ನು ವಿಚಿತ್ರವೆಂದರೆ ಶಸ್ತ್ರಚಿಕಿತ್ಸೆ ಮಾಡಬೇಕಿದ್ದ ವೈದ್ಯ ಬಾಲಕೃಷ್ಣನನ್ನು ಸಿಬ್ಬಂದಿಗಳೆ ಎತ್ತಿಕೊಂಡು ಹೋಗಿ ಆಸ್ಪತ್ರೆಯ ಮತ್ತೊಂದು ಬೆಡ್‌ಮೇಲೆ ಮಲಗಿಸಿದ್ದಾರೆ.

ಕಳಸ ತಾಲೂಕು ಆಸ್ಪತ್ರೆಯಲ್ಲಿ 9 ಮಹಿಳೆಯರಿಗೆ ಸಂತಾನಹರಣ ಶಕ್ತಿ ಶಸ್ತ್ರಚಿಕಿತ್ಸೆ ನಿಗದಿಯಾಗಿತ್ತು. ಈ ಸಂಬಂಧ ಬೆಳಗ್ಗಿನಿಂದಲೇ ಅನಸ್ತೇಷಿಯಾ ಪಡೆದುಕೊಂಡು ಮಹಿಳೆಯರು ಕಾಯುತ್ತಿದ್ದರು. ಆದರೆ ವೈದ್ಯ ಮಾತ್ರ ಕಂಠಪೂರ್ತಿ ಕುಡಿದು ಬಂದಿದ್ದಾನೆ ಇನ್ನು ಎದ್ದು ನಿಲ್ಲಲೂ ಸಾಧ್ಯವಾಗದ ಸ್ಥಿತಿಯಲ್ಲಿ ಆಸ್ಪತ್ರೆಗೆ ಬಂದ್ದಾನೆ.

ಮದ್ಯದ ಅಮಲಿನಲ್ಲಿದ್ದ ವೈದ್ಯ ಬಾಲಕೃಷ್ಣ ಸಿಬ್ಬಂದಿಗಳ ಮಾತು ಕೇಳದೆ ಶಸ್ತ್ರಚಿಕಿತ್ಸೆ ಮಾಡಲು ಮುಂದಾಗಿದ್ದಾನೆ. ಆದರೆ ಅದೃಷ್ಟವಶಾತ್ ಅಷ್ಟರಲ್ಲೇ ಆತ ಕುಸಿದು ಬಿದ್ದಿದ್ದಾನೆ. ಬಳಿಕ ವೈದ್ಯನನ್ನು ಸಿಬ್ಬಂದಿ ಪಕ್ಕದ ಬೆಡ್ ಮೇಲೆ ಮಲಗಿಸಿದ್ದಾರೆ. ಆ ನಂತರ ಶಸ್ತ್ರಚಿಕಿತ್ಸೆ ರದ್ದು ಮಾಡಲಾಗಿದ್ದು, ಅನಸ್ತೇಷಿಯಾ ಪಡೆದುಕೊಂಡಿದ್ದ ಮಹಿಳೆಯರಿಗೆ ಗ್ಲೂಕೋಸ್ ನೀಡಲಾಯಿತು.

ಗೌರವಾನ್ವಿತ ಹುದ್ದೆಯಲ್ಲಿರುವ ವೈದ್ಯನೊಬ್ಬ ಕುಡಿದು ಬಂದು ಶಸ್ತ್ರಚಿಕಿತ್ಸೆ ಮಾಡಲು ಮುಂದಾಗಿದ್ದ ಘಟನೆ ಹೊರಬೀಳುತ್ತಿದ್ದಂತೆ ಮಹಿಳೆಯರ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸಿಬ್ಬಂದಿ ವೈದ್ಯನ ತಪ್ಪನ್ನು ಮರೆಮಾಚಲು ಪ್ರಯತ್ನಿಸಿದ್ದು, ಶುಗರ್ ಕಾರಣದಿಂದ ಕುಸಿದು ಬಿದ್ದಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಕ್ರಮ ಕೈಗೊಳ್ಳಲಾಗುವುದು: ಘಟನೆಯ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿರುವ ಮಹಿಳೆಯರ ಕುಟುಂಬಸ್ಥರು, ತಪ್ಪಿತಸ್ಥ ವೈದ್ಯನ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಉಮೇಶ್ ಪ್ರತಿಕ್ರಿಯಿಸಿ, ಕರ್ತವ್ಯದ ವೇಳೆ ವೈದ್ಯರ ಅಶಿಸ್ತಿನ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ