NEWSಕೃಷಿಬೆಂಗಳೂರು

ಬೆಂಗಳೂರು: ಹಾಲು ಉತ್ಪಾದಕ ರೈತರ ಪ್ರೋತ್ಸಾಹ ಧನದಲ್ಲಿ 1.50 ರೂ. ಕಡಿತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹಾಲು ಉತ್ಪಾದಕ ರೈತರಿಗೆ ಕೊಡುತ್ತಿದ್ದ ಪ್ರೋತ್ಸಾಹ ಧನದಲ್ಲಿ 1.50 ರೂಪಾಯಿ ಕಡಿತಗೊಳಿಸಿ ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟವು ಆದೇಶ ಹೊರಡಿಸಿದೆ.

ಈ ಹಿಂದೆ ಹಾಲು ಒಕ್ಕೂಟವು ಬೇಸಿಗೆ ಸಮಯದಲ್ಲಿ ಏ. 1ರಿಂದ ಮೇ. 31 ರವರೆಗೆ ಪ್ರತಿ ಲೀಟರ್ ಹಾಲಿಗೆ 2.85 ರೂ. ವಿಶೇಷ ಪ್ರೋತ್ಸಾಹ ಧನ ಘೋಷಿಸಿತ್ತು.

ಆ ಮೂಲಕ ಹೈನೋದ್ಯಮವನ್ನು ಉತ್ತೇಜಿಸುವ ಸಲುವಾಗಿ ಹಾಲು ಉತ್ಪಾದಕ ರೈತರಿಗೆ ಪ್ರೋತ್ಸಾಹ ಧನ ನೀಡುತ್ತಿದ್ದು, ಅದರಲ್ಲಿ ಈಗ ಪ್ರತಿ ಲೀಟರ್​​ಗೆ 1.50 ರೂ. ಪ್ರೋತ್ಸಾಹ ಧನವನ್ನು ಕಡಿತಗೊಳಿಸಿ ಆದೇಶ ಹೊರಡಿಸಿದೆ.

ಸದ್ಯ, ಉತ್ತಮ ಮಳೆಯಾಗಿ ಹಸಿರು ಮೇವಿನ ಲಭ್ಯತೆ ಜಾಸ್ತಿಯಾಗಿದ್ದು, ಹಾಲು ಉತ್ಪಾದನೆ ಹೆಚ್ಚಾಗುತ್ತಿದೆ. ಏಪ್ರಿಲ್ ತಿಂಗಳ ಆರಂಭದಲ್ಲಿ ಪ್ರತಿದಿನ 13.50 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲು, ಈಗ 16 ಲಕ್ಷ ಲೀಟರ್​ಗೆ ತಲುಪಿದೆ.

ನಿತ್ಯ ಸುಮಾರು 2.50 ಲಕ್ಷ ಲೀಟರ್ ಹಾಲು ಉತ್ಪಾದನೆ ಹೆಚ್ಚಳವಾಗಿದೆ. ಹೀಗಾಗಿ ಪ್ರೋತ್ಸಾಹ ಧನ ಕಡಿತಗೊಳಿಸಿ ಆದೇಶ ಹೊರಡಿಸಿದೆ ಎಂದು ಹೇಳಲಾಗುತ್ತಿದೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು