NEWSನಮ್ಮಜಿಲ್ಲೆನಮ್ಮರಾಜ್ಯ

ಜುಲೈನಿಂದ 200 ಯೂನಿಟ್‌ ವಿದ್ಯುತ್‌ ಫ್ರೀ: ಜತೆಗೆ ಷರತ್ತು ವಿಧಿಸಿದ ಸಿಎಂ ಸಿದ್ದರಾಮಯ್ಯ

ಒಂದೇ ಆರ್‌ಆರ್‌ ನಂಬರ್‌ ಆಗಿದ್ದರೆ ಹೆಚ್ಚುವರಿ, ಬಾಡಿಗೆ ಮನೆ ಮೀಟರ್‌ಗಳಿಗೆ ಅನ್ವಯ ಆಗಲ್ಲ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್‌ ಪಕ್ಷ ಚುನಾವಣೆ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದ ಐದು ಗ್ಯಾರಂಟಿಗಳನ್ನು ಕೊಡುವುದಕ್ಕೆ ಇಂದು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ. ಹೀಗಾಗಿ ಮೊದಲ ಗ್ಯಾರಂಟಿಯಾಗಿ ಗೃಹಜ್ಯೋತಿ ಯೋಜನೆ ಮಾಡಲಾಗುವುದು. 200 ಯೂನಿಟ್‌ ವರೆಗೆ ವಿದ್ಯುತ್‌ ಉಚಿತವಾಗಿ ನೀಡಲಾಗುವುದು. ಆಗಸ್ಟ್‌ನಿಂದ ಬರುವ ಬಿಲ್‌ನಿಂದ ಯೋಜನೆ ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಚಿವ ಸಂಪುಟದ ಬಳಿಕ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮತನಾಡಿದ್ದು, ಗೃಹಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ, ಮಹಿಳೆಯರಿಗೆ ಉಚಿತ ಬಸ್​ ಯೋಜನೆಯ ಯಾವುದೇ ಜಾತಿ, ಧರ್ಮ, ಭಾಷೆ ಇಲ್ಲದೆ ಎಲ್ಲರಿಗೂ ಅನ್ವಯ ಆಗುವ ಹಾಗೆ ಗ್ಯಾರಂಟಿ ಜಾರಿ‌ಮಾಡುತ್ತೇವೆ ಎಂದರು.

ಮೊದಲ ಗ್ಯಾರಂಟಿಯಾಗಿರುವ, ಗೃಹಜ್ಯೋತಿ ಜಾರಿಗೆ ಸಂಪುಟ ಸಭೆ ನಿರ್ಧರಿಸಿದೆ ಆದರೆ ಯೋಜನೆಗೆ ವಾರ್ಷಿಕ ಸರಾಸರಿ ಮಾನದಂಡವಿದೆ. 12 ತಿಂಗಳ ಸರಾಸರಿ ಪಡೆದುಕೊಂಡು ಅದರ ಮೇಲೆ 10% ರಷ್ಟು ವಿದ್ಯುತ್‌ ಉಚಿತವಾಗಿ ನೀಡಲಾಗುವುದು. ಯಾರು ಎಷ್ಟು ವಿದ್ಯುತ್ ಬಳಸುತ್ತಾರೆ ಎಂಬುದನ್ನು 12 ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧರಿಸಿ, ಅದರ ಮೇಲೆ 10% ರಷ್ಟು ವಿದ್ಯುತ್ ಉಚಿತವಾಗಿ ಕೊಡಲಾಗುವುದು ಎಂದು ತಿಳಿಸಿದರು.

ಉದಾಹರಣೆಗೆ, 70 ಯೂನಿಟ್‌ ಬಳಸುವವರು ಅದಕ್ಕೆ 10% (ಅಂದರೆ ಒಟ್ಟು 80%) ಬಳಕೆ ಮಾಡಬಹುದು. ಕಳೆದ ವರ್ಷ ಸರಾಸರಿ ತಿಂಗಳಿಗೆ 100 ಯೂನಿಟ್ ಬಳಸಿದ್ದವರು ಈಗ 110 ಯೂನಿಟ್ ಬಳಸಿದ್ರೆ ವಿದ್ಯುತ್ ಉಚಿತವಾಗಿ ಸಿಗುತ್ತದೆ. ಒಂದು ವೇಳೆ 110ಕ್ಕಿಂತ ಹೆಚ್ಚು ಯೂನಿಟ್ ಬಳಸಿದ್ರೆ ಹೆಚ್ಚುವರಿ ಯೂನಿಟ್‌ಗೆ ಬಿಲ್ ಕಟ್ಟಬೇಕು. ಹೀಗೆ 200 ಯೂನಿಟ್‌ ವರೆಗೆ ವಿದ್ಯುತ್‌ ಬಳಸುವವರು ಬಿಲ್‌ ಕಟ್ಟುವಂತಿಲ್ಲ. 200 ಯೂನಿಟ್‌ ಉಚಿತ ಅಂತ ಎಲ್ಲರೂ ಬೇಕಾಬಿಟ್ಟಿ ವಿದ್ಯುತ್‌ ಬಳಸುವಂತಿಲ್ಲ ಎಂದು ಹೇಳಿದರು.

ಇನ್ನು ಜು.1 ರಿಂದ ಆಗಸ್ಟ್ ವರೆಗಿನ ಖರ್ಚಿಗೆ ಇದು ಲೆಕ್ಕ. ಜುಲೈನಿಂದ ಮಾಡಿರುವ ಖರ್ಚಿನ ಬಿಲ್ ಆಗಸ್ಟ್‌ನಲ್ಲಿ ಬರಲಿದೆ. ಜುಲೈವರೆಗೆ ವಿದ್ಯುತ್‌ ಬಿಲ್ ಬಾಕಿ ಉಳಿಸಿಕೊಂಡವರಿಗೆ ಸಮಯ ಕೊಡುತ್ತೇವೆ.‌ ಹಳೇ ವಿದ್ಯುತ್‌ ಬಾಕಿಯನ್ನು ಗ್ರಾಹಕರೇ ಪಾವತಿಸಬೇಕು. ಆಗಸ್ಟ್‌ನಿಂದ ಬರುವ ಬಿಲ್‌ನ್ನು ಜನರು ಕಟ್ಟುವ ಅಗತ್ಯವಿಲ್ಲ ಎಂದರು.

ಆರ್‌ಆರ್‌ ನಂಬರ್‌ ಕೌಂಟ್‌ ಮಾಡುವಾಗ ಒಂದೇ ಆರ್‌ಆರ್‌ ನಂಬರ್‌ ಆಗಿದ್ದರೆ ಹೆಚ್ಚುವರಿ ಮೀಟರ್‌, ಬಾಡಿಗೆ ಮನೆ ಮೀಟರ್‌ಗಳಿಗೆ ಅನ್ವಯ ಆಗಲ್ಲ ಎಂದು ಮಾಹಿತಿ ನೀಡಿದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ