CrimeNEWSದೇಶ-ವಿದೇಶ

ಗೂಡ್ಸ್ – ಕೋರಮಂಡಲ್ ಎಕ್ಸ್‌ಪ್ರೆಸ್ ರೈಲುಗಳ ನಡುವೆ ಡಿಕ್ಕಿ 50ಕ್ಕೂ ಹೆಚ್ಚು ಮಂದಿ ಮೃತ

49 ರೈಲುಗಳ ಸಂಚಾರ ರದ್ದು l 38 ರೈಲುಗಳ ಸಂಚಾರ ಮಾರ್ಗ ಬದಲು

ವಿಜಯಪಥ ಸಮಗ್ರ ಸುದ್ದಿ

ಬಾಲಸೋರ್: ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲುಡಿಕ್ಕಿ ಹೊಡೆದ ಪರಿಣಾಮ 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು ಇನ್ನು ಸಾವಿನ ಸಂಖ್ಯೆ ಹೆಚ್ಚಾಗಲಿದೆ ಎಂದು ಹೇಳಲಾಗುತ್ತಿದೆ.

ಮೂಲಗಳ ಪ್ರಕಾರ ಶಾಲಿಮಾರ್ – ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಬಾಲಸೋರ್ ಜಿಲ್ಲೆಯ ಬಹನಾಗಾ ರೈಲ್ವೇ ನಿಲ್ದಾಣದ ಬಳಿಕ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ರೈಲಿನ 8 ಬೋಗಿಗಳು ಹಳಿತಪ್ಪಿವೆ.

ಎಕ್ಸ್‌ಪ್ರೆಸ್ ರೈಲಿನ ಪಲ್ಟಿಯಾದ ಕೋಚ್‌ಗಳಲ್ಲಿ ಹೆಚ್ಚಿನವರು ಸಿಕ್ಕಿಹಾಕಿಕೊಂಡಿದ್ದಾರೆ ಎನ್ನಲಾಗಿದ್ದು, ಹಲವು ಸಾವಾಗಿರುವುದಾಗಿ ಶಂಕಿಸಲಾಗಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ತಂಡಗಳು ಸ್ಥಳಕ್ಕೆ ತೆರಳಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ

49 ರೈಲುಗಳ ಸಂಚಾರ ರದ್ದು: ಇನ್ನೂ ಘೋರ ರೈಲು ಅಪಘಾತದ ಪರಿಣಾಮ ಸುಮಾರು 49 ರೈಲುಗಳ ಸಂಚಾರ ರದ್ದಾಗಿದೆ. 38 ರೈಲುಗಳ ಸಂಚಾರ ಮಾರ್ಗ ಬದಲಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅಧಿಕಾರಿಗಳು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡು, ಅಪಘಾತಕ್ಕೀಡಾದ ರೈಲುಗಳ ಬೋಗಿಗಳನ್ನು ತೆರವುಗೊಳಿಸಿ, ಹಳಿಗಳನ್ನು ಸರಿಪಡಿಸುವ ಕಾರ್ಯ ನಡೆಯಬೇಕಿದೆ. ಅಲ್ಲಿಯವರೆಗೂ ರೈಲುಗಳ ಓಡಾಟ ಸಾಧ್ಯವಿಲ್ಲ. ಹೀಗಾಗಿ ಹಲವು ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ. ಅಲ್ಲದೇ 10 ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎಂದು ತಿಳಿಸಿದರು.

ತಿರುವನಂತಪುರಂ-ಕೋಲ್ಕತ್ತಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (22641), ಬೆಂಗಳೂರು-ಗುವಾಹಟಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (12509) ಮತ್ತು ಹೌರಾ-ತಿರುಪತಿ ಹಮ್ಸಾಫರ್ ಎಕ್ಸ್‌ಪ್ರೆಸ್ (20889) ರೈಲುಗಳು ರದ್ದಾಗಿವೆ.

ಕನ್ಯಾಕುಮಾರಿ-ದಿಬ್ರುಗಢ್ ವಿವೇಕ್ ಎಕ್ಸ್‌ಪ್ರೆಸ್ (22503) ಮತ್ತು ಹೌರಾ-ಮೈಸೂರು ಎಕ್ಸ್‌ಪ್ರೆಸ್ (22817) ರೈಲು ಬದಲಿ ಮಾರ್ಗಗಳಲ್ಲಿ ಸಂಚರಿಸಲಿವೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...