ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳಿಗೆ ಅಧ್ಯಕ್ಷರಾಗಿ ರಾಮಲಿಂಗಾರೆಡ್ಡಿ ನೇಮಕಗೊಂಡಿದ್ದಾರೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಬಿಎಂಟಿಸಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಸಂಸ್ಥೆಗಳಿಗೆ ಅಧ್ಯಕ್ಷರಾಗಿ ಸಚಿವ ರಾಮಲಿಂಗಾರೆಡ್ಡಿ
ನೇಮಕಗೊಂಡಿದ್ದಾರೆ.
ಸಾಮಾನ್ಯವಾಗಿ ನಾಲ್ಕೂ ನಿಗಮಗಳಿಗೆ ಪ್ರತ್ಯೇಕವಾಗಿ ಅಧ್ಯಕ್ಷರ ನೇಮಕವಾಗುತ್ತಿತ್ತು. ಆದರೀಗ ಪ್ರತ್ಯೇಕವಾಗಿ ಅಧ್ಯಕ್ಷರ ನೇಮಕದ ಬದಲು ಸಚಿವ ರಾಮಲಿಂಗಾರೆಡ್ಡಿಗೆ ನಾಲ್ಕೂ ನಿಗಮಗಳ ಅಧ್ಯಕ್ಷ ಸ್ಥಾನವನ್ನು ನೀಡಲಾಗಿದೆ. ಹಾಗಾಗಿ ಸಾರಿಗೆ ಇಲಾಖೆ ಅಧೀನದಲ್ಲಿ ಬರುವ ನಾಲ್ಕು ನಿಗಮಗಳಿಗೆ ಇದೀಗ ರಾಮಲಿಂಗಾರೆಡ್ಡಿ ಅಧ್ಯಕ್ಷರಾಗಿದ್ದಾರೆ.