NEWSನಮ್ಮರಾಜ್ಯನಿಮ್ಮ ಪತ್ರಬೆಂಗಳೂರು

ಜೂನ್‌ 11ರ ಮಧ್ಯಾಹ್ನ 1ಗಂಟೆಯಿಂದ ರಾಜ್ಯದ ಎಲ್ಲ ಮಹಿಳೆಯರಿಗೂ ಉಚಿತ ಬಸ್‌ ಪ್ರಯಾಣ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥಯ ನಾಲ್ಕೂ ನಿಗಮಗಳಲ್ಲಿ ಇದೇ ಜೂನ್‌ 11ರ ಮಧ್ಯಾಹ್ನ 1ಗಂಟೆಯಿಂದ ರಾಜ್ಯದ ಎಲ್ಲ ಮಹಿಳೆಯರಿಗೂ ಉಚಿತ ಪ್ರಯಾಣ ಆರಂಭವಾಗಲಿದೆ.

ಇನ್ನು ಈ ಸಂಬಂಧ ಈಗಾಗಲೇ ಸಾರಿಗೆ ಇಲಾಖೆ ಉಚಿತ ಪ್ರಯಾಣ ಮಾಡುವ ಸಂಬಂಧ ವಿಧಾನನೌಧದಲ್ಲಿ ಆಯೋಜಿಸಿರುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಂದು ಬೆಳಗ್ಗೆ 11ಗಂಟೆಗೆ ಚಾಲನೆ ನೀಡಲಿದ್ದಾರೆ.

ಸಿಎಂ ವಿಧಾನಸೌಧದಲ್ಲಿ ಲೋಕಾರ್ಪಣೆ ಮಾಡಿದ ಬಳಿಕ ರಾಜ್ಯದ ಎಲ್ಲ ಜಿಲ್ಲಾ, ತಾಲೂಕು ಕೇಂದ್ರಗಳ ಬಸ್‌ ನಿಲ್ದಾಣಗಳಲ್ಲಿ ಮಧ್ಯಾಹ್ನ 12.30ಕ್ಕೆ ಕಾರ್ಯಕ್ರಮ ಆಯೋಜಿಸಬೇಕು ಎಂದು ತಿಳಿಸಲಾಗಿದೆ.

ಇನ್ನು ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ಬಸ್‌ ನಿಲ್ದಾಣಗಳಲ್ಲಿ ಸ್ಥಳೀಯ ಸಚಿವರು ಮತ್ತು ಶಾಸಕರು, ಜಿಲ್ಲಾಧಿಕಾರಿಗಳ ಉಪಸ್ಥಿತಿಯಲ್ಲಿ ಅವಶ್ಯ ಪ್ರೋಟೋಕಾಲ್‌ ಪಾಲಿಸುವ ಮೂಲಕ ಲೋಕಾರ್ಪಣೆಗೊಳಿಸಬೇಕು ಎಂದು ಸಾರಿಗೆ ಸಂಸ್ಥೆಗಳ ಅಧ್ಯಕ್ಷರೂ ಆದ ಸಚಿವ ರಾಮಲಿಂಗಾರೆಡ್ಡಿ ಅವರ ಆದೇಶ ಮೇರೆಗೆ ಮುಖ್ಯ ಸಂಚಾರಿ ವ್ಯವಸ್ಥಾಪಕರು ಸೂಚನೆ ನೀಡಿದ್ದಾರೆ.

ಜಿಲ್ಲಾ ಕೇಂದ್ರ ಬಸ್‌ ನಿಲ್ದಾಣಗಳಲ್ಲಿ ತಲಾ 2 ಬಸ್‌ಗಳು ಹಾಗೂ ತಾಲೂಕು ಕೇಂದ್ರ ಬಸ್‌ ನಿಲ್ದಾಣಗಳಲ್ಲಿ ತಲಾ ಒಂದು ಬಸ್‌ ಸಿಂಗರಿಸಿ ಚಾಲನೆ ನೀಡಬೇಕು. ಈ ವೇಳೆ ಮಹಿಳೆಯರಿಗೆ ಗುಲಾಬಿ ಹೂ ಕೂಡ ನೀಡಿ ಸ್ವಾಗತಿಸಬೇಕು ಎಂದು ತಿಳಿಸಿದ್ದಾರೆ.

ಇನ್ನು ಈ ಕಾರ್ಯಕ್ರಮಕ್ಕೆ ಜಿಲ್ಲಾ ಕೇಂದ್ರಗಳಲ್ಲಿ 1 ಲಕ್ಷ ರೂಪಾಯಿ ಹಾಗೂ ತಾಲೂಕು ಕೇಂದ್ರ ಬಸ್‌ನಿಲ್ದಾಣಗಳಲ್ಲಿ ತಲಾ 25 ಸಾವಿರ ರೂಪಾಯಿ ವೆಚ್ಚ ಮಾಡುವುದಕ್ಕೂ ಅನುಮೋದನೆ ನೀಡಲಾಗಿದೆ.

ಇನ್ನು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಕಾರ್ಯಕ್ರಮ ಆಯೋಜನೆ ಮಾಡಿ ಮಧ್ಯಾಹ್ನ 1 ಗಂಟೆ ಬಳಿಕ ಎಲ್ಲ ಮಹಿಳಾ ಪ್ರಯಾಣಿಕರಿಗೂ ಉಚಿತ ಪ್ರಯಾಣಕ್ಕೆ ಎಲ್ಲ ಬಸ್‌ಗಳಲ್ಲೂ ಯಾವುದೇ ಸಮಸ್ಯೆ ಇಲ್ಲದಂತೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ತಿಳಿಸಿದ್ದಾರೆ.

ಉದ್ಘಾಟನೆ ಕಾರ್ಯಕ್ರಮ ಪತ್ರ- Shakti yojana Inauguration letter

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು