ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಮಹಿಳೆಯರಿಗೆ ನಗರ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ನಾಳೆ (11.06.2023) ಬೆಳಗ್ಗೆ 11 ಗಂಟೆ ಸ್ಥಳ: ವಿಧಾನಸೌಧ ಪೂರ್ವದ್ವಾರ (ಗ್ರ್ಯಾಂಡ್ ಸ್ಟೆಪ್ಸ್) ಮುಂಭಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಿಳೆಯರಿಗೆ ಟಿಕೆಟ್ ವಿತರಿಸುವ ಮೂಲಕ ಚಾಲನೆ ನೀಡಲಿದ್ದಾರೆ.
ರಾಜ್ಯಾದ್ಯಂತ ಈ ಕಾರ್ಯಕ್ರಮವನ್ನು ಸಾಕ್ಷಿಕರಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಸರ್ಕಾರದ ಕಾರ್ಯದರ್ಶಿ, ಸಾರಿಗೆ ಇಲಾಖೆಯ ಡಾ.ಎನ್.ವಿ.ಪ್ರಸಾದ್ ಶಾಸಕರು, ಸಂಸದರು ಹಾಗೂ ಸಚಿವರು ಆಗಮಿಸಲಿದ್ದಾರೆ.
ಇನ್ನು ಇವರೆಲ್ಲರಿಗೂ ಸಾರಿಗೆಯ ನಾಲ್ಕೂ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಾದ ಅನ್ಬುಕುಮಾರ್ (KSRTC) ಜಿ.ಸತ್ಯವತಿ (BMTC), ಎನ್. ರಾಚಪ್ಪ (KKRTC) ಮತ್ತು ಎಸ್. ಭರತ್ (NWKRTC) ಸ್ವಾಗತಕೋರಲಿದ್ದಾರೆ.
ಕೇಂದ್ರ ಹಣಕಾಸು ಮತ್ತು ಕಾರ್ಪೋರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಹಾಗೂ ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವರಾದ ಎಂ.ರಾಜೀವ್ ಚಂದ್ರಶೇಖರ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಘನುಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.