NEWSನಮ್ಮಜಿಲ್ಲೆನಮ್ಮರಾಜ್ಯ

ಮೈಸೂರು – ಬೆಂಗಳೂರು ಷಟ್ಪಥ ಹೆದ್ದಾರಿ ಸಂಚಾರ ಮತ್ತಷ್ಟು ದುಬಾರಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೈಸೂರು – ಬೆಂಗಳೂರು ಷಟ್ಪಥ ಹೆದ್ದಾರಿಯಲ್ಲಿ ಸಂಚಾರ ಮತ್ತಷ್ಟು ದುಬಾರಿಯಾಗಿದ್ದು ಹೆದ್ದಾರಿ ಪ್ರಾಧಿಕಾರ ಶೇ.22 ರಷ್ಟು ಟೋಲ್ ದರ ಏರಿಕೆ ಮಾಡಿದೆ.

ಅದು ಕೂಡ ಇದೇ ಜೂನ್ 1 ರಿಂದಲೇ ದುಬಾರಿ ಶುಲ್ಕ ವಸೂಲಿ ಮಾಡಲಾಗುತ್ತಿದ್ದು, ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ. ಆದರೆ, ಫಾಸ್ಟ್ ಟ್ಯಾಗ್ ಇರೋ ಕಾರಣ ವಾಹನ ಸವಾರರ ಗಮನಕ್ಕೂ ಇದನ್ನು ತಾರದೆಯೇ ಹಣ ವಸೂಲಿ ಮಾಡಲಾಗುತ್ತಿದೆ.

ಕಾರು, ವ್ಯಾನ್, ಜೀಪ್‍ಗಳ ಏಕಮುಖ ಸಂಚಾರಕ್ಕೆ 135 ರೂ.ನಿಂದ 165ಕ್ಕೆ ಏರಿಕೆ (30 ರೂ. ಹೆಚ್ಚಳ) ಮಾಡಲಾಗಿದೆ. ಲಘು ವಾಹನಗಳು, ಮಿನಿ ಬಸ್‍ಗಳ ಏಕಮುಖ ಟೋಲ್ 220 ರೂ.ನಿಂದ 270ಕ್ಕೆ ಏರಿಕೆ (50ರೂ ಹೆಚ್ಚಳ) ಮಾಡಲಾಗಿದೆ.

ಟ್ರಕ್, ಬಸ್, 2 ಆಕ್ಸೆಲ್ ವಾಹನಗಳ ಏಕಮುಖ ಸಂಚಾರಕ್ಕೆ 460 ರೂ.ನಿಂದ 565ಕ್ಕೆ ಏರಿಕೆ(105 ಹೆಚ್ಚಳ). 3 ಆಕ್ಸೆಲ್ ವಾಣಿಜ್ಯ ವಾಹನಗಳ ಏಕಮುಖ ಸಂಚಾರ 500 ರೂ.ನಿಂದ 615ಕ್ಕೆ ಏರಿಕೆ (115 ರೂ ಹೆಚ್ಚಳ) ಮಾಡಲಾಗಿದೆ.

ಇನ್ನು ಭಾರೀ ವಾಹನಗಳ ಏಕಮುಖ ಸಂಚಾರ 720 ರೂ.ನಿಂದ 885ಕ್ಕೆ ಏರಿಕೆ (165 ಹೆಚ್ಚಳ). 7 ಅಥವಾ ಅದಕ್ಕಿಂತ ಹೆಚ್ಚಿನ ಆಕ್ಸೆಲ್ ವಾಹನಗಳ ಏಕಮುಖ ಸಂಚಾರ 880 ರೂ.ನಿಂದ 1,080ಕ್ಕೆ ಏರಿಕೆ (200 ಹೆಚ್ಚಳ) ಮಾಡಲಾಗಿದೆ.

ಈ ಹಿಂದೆ ಏಪ್ರಿಲ್ 1ರಂದೇ ದರ ಏರಿಕೆ ಮಾಡಿದ್ದ ಹೆದ್ದಾರಿ ಪ್ರಾಧಿಕಾರ ಸಾರ್ವಜನಿಕರ ಭಾರಿ ಆಕ್ರೋಶ ಹಿನ್ನೆಲೆಯಲ್ಲಿ ದರ ಹೆಚ್ಚಳವನ್ನು ವಾಪಸ್ ಪಡೆದಿತ್ತು. ಇದೀಗ ಮತ್ತೆ ಟೋಲ್ ದರ ಏರಿಕೆ ಮಾಡಲಾಗಿದ್ದು, ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು